ಬ್ರೇಕಿಂಗ್ ನ್ಯೂಸ್
16-07-22 09:51 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 16 : ರಾಷ್ಟ್ರಪತಿ ಚುನಾವಣೆಗೆ ಕದನ ಕುತೂಹಲ ಏರ್ಪಟ್ಟಿರುವ ನಡುವೆಯೇ, ಭಾರತೀಯ ಜನತಾ ಪಕ್ಷ (ಬಿಜೆಪಿ) ಸಂಸದೀಯ ಮಂಡಳಿ ಸಭೆ ಶನಿವಾರ ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿಎ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಆಯ್ಕೆ ಮಾಡಿದೆ.
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿಎ ಅಭ್ಯರ್ಥಿಯಾಗಿ ಜಗದೀಪ್ ಧಂಕರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಬಿಜೆಪಿ ನಾಯಕರು ಸೇರಿದ್ದ ಸಭೆಯಲ್ಲಿ ಈ ನಿರ್ಣಯ ಮಾಡಲಾಗಿದೆ.
ಬಲಾಬಲದಲ್ಲಿ ಎನ್ ಡಿಎಗೆ ಮೇಲುಗೈ
ದೇಶದ ಮುಂದಿನ ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಉಪಾಧ್ಯಕ್ಷ ಸ್ಥಾನಕ್ಕೆ ನಾಮಮಪತ್ರ ಸಲ್ಲಿಕೆಗೆ ಜುಲೈ 19 ಕೊನೆಯ ದಿನಾಂಕವಾಗಿದ್ದು, ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ ಉಳಿದರೆ, ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಮತ್ತು ಅದೇ ದಿನ ಫಲಿತಾಂಶ ಘೋಷಣೆಯೂ ಆಗಲಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹತೆ ಹೊಂದಿರುತ್ತಾರೆ. ಸಂಖ್ಯಾಬಲದಲ್ಲಿ ಎನ್ ಡಿಎ ಮೈತ್ರಿಕೂಟವು ಮೇಲುಗೈ ಹೊಂದಿದೆ.
ಜಗದೀಪ್ ಧಂಖರ್ 18 ಮೇ, 1951ರಂದು ರಾಜಸ್ಥಾನದ ಕಿತಾನ ಎಂಬ ಸಣ್ಣ ಹಳ್ಳಿಯಲ್ಲಿ ಜನಿಸಿದ್ದರು. ಶಾಲಾ ಶಿಕ್ಷಣವನ್ನು ಚಿತ್ತೋರ್ಗಢದ ಸೈನಿಕ ಶಾಲೆಯಲ್ಲಿ ಪೂರ್ಣಗೊಳಿಸಿದ್ದು ಜೈಪುರದ ರಾಜಸ್ಥಾನ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದರು. ರಾಜ್ಯಪಾಲರಾಗೋದಕ್ಕೂ ಮುನ್ನ ಜಗದೀಪ್ ಧಂಖರ್ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. 2019ರಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಅದಕ್ಕೂ ಹಿಂದೆ ಸುಪ್ರೀಂ ಕೋರ್ಟ್ ವಕೀಲರಾಗಿದ್ದರು. 1989- 91ರಲ್ಲಿ ಲೋಕಸಭೆ ಸದಸ್ಯರಾಗಿ ರಾಜಕೀಯ ಜೀವನ ಆರಂಭ. ರಾಜಸ್ಥಾನದ ಜುಂಜುನು ಕ್ಷೇತ್ರದಿಂದ ಜನತಾ ದಳದಿಂದ ಮೊದಲ ಬಾರಿಗೆ ಸಂಸದರಾಗಿ ಆಯ್ಕೆ ಆಗಿದ್ದರು.
The Bharatiya Janata Party (BJP) on Saturday announced the name of West Bengal Governor Jagdeep Dhankhar as the National Democratic Alliance (NDA) candidate for the Vice Presidential election.“NDA’s candidate for the post of Vice President of India will be Jagdeep Dhankhar. Kisan Putra Jagdeep Dhankhar has been in public life for more than three decades. Jagdeep Dhankhar’s life story reflects the spirit of new India – overcoming innumerable social and economic hurdles and achieving one’s goals,” said BJP chief JP Nadda.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm