ಬ್ರೇಕಿಂಗ್ ನ್ಯೂಸ್
17-07-22 10:54 pm HK News Desk ದೇಶ - ವಿದೇಶ
ಢಾಕಾ, ಜುಲೈ 17 : ಫೇಸ್ಬುಕ್ ಪೋಸ್ಟ್ನಲ್ಲಿ ಇಸ್ಲಾಂ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ಆರೋಪದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ನಡೆದಿದೆ.
ಹಲವಾರು ಮನೆ, ಅಂಗಡಿ ಮತ್ತು ಹಿಂದು ದೇಗುಲಗಳ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶುಕ್ರವಾರ ಸಂಜೆ ದಿಗೋಲಿಯಾ ಗ್ರಾಮದಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ್ದು ಜನರ ಗುಂಪನ್ನು ಚದುರಿಸಲು ಪೊಲೀಸರು ಎಚ್ಚರಿಕೆ ಗುಂಡು ಹಾರಿಸಿದ್ದಾರೆ. ಇಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು , ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ. ಆಕಾಶ್ ಸಾಹಾ ಎಂಬ ಯುವಕ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಮರು ದಾಳಿ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕಾಶ್ ಸಾಹಾ ಮತ್ತು ಅವರ ಅಪ್ಪ ಅಶೋಕ್ ಸಾಹಾ ಅವರನ್ನು ಬಂಧಿಸಿದ್ದಾರೆ. ಆಕಾಶ್ ಸಾಹಾ ಹಜರತ್ ಮುಹಮ್ಮದ್ ಅವರನ್ನು ಅವಹೇಳನ ಮಾಡಿ ಜುಲೈ 14ರಂದು ಫೇಸ್ಬುಕ್ ಪೋಸ್ಟೊಂದನ್ನು ಹಾಕಿದ್ದ. ಇದರಿಂದ ಕುಪಿತಗೊಂಡ ಜನರ ಗುಂಪೊಂದು ಅಂದು ಮಧ್ಯಾಹ್ನ ಸಾಹಾ ಮನೆ ಮುಂದೆ ಪ್ರತಿಭಟನೆ ನಡೆಸಿ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಜೂನ್ 18ರಂದು ನಾರೈಲಿಯಲ್ಲಿ ನೂಪುರ್ ಶರ್ಮಾ ಅವರ ಫೋಟೊ ಹಾಕಿ ಬೆಂಬಲಿಸಿದ ವಿದ್ಯಾರ್ಥಿಯೊಬ್ಬನಿಗೆ ಕಾಲೇಜು ಪ್ರಾಂಶುಪಾಲರು ಬೆಂಬಲ ನೀಡಿದ್ದಾರೆ ಎಂಬ ಆರೋಪದಲ್ಲಿ ಅಲ್ಲಿನ ಸ್ಥಳೀಯರು ಪ್ರಾಂಶುಪಾಲರಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದ್ದ ಘಟನೆ ನಡೆದಿತ್ತು. ಸುದ್ದಿ ವಾಹಿನಿಯ ಚರ್ಚೆ ವೇಳೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿದ ಆಕ್ಷೇಪಾರ್ಹ ಹೇಳಿಕೆಗೆ ಜಗತ್ತಿನಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
A mob reportedly attacked a Hindu temple and vandalised several houses belonging to the Hindu community in Bangladesh's Narail district. The violence in Dighalia Upazila took place on Friday evening over a young Hindu boy's Facebook post, local media reported.Dhaka Tribune reported that the mob has grocery stores and several homes of the Hindu community.The angry villagers alleged that the boy hurt their religious sentiments with his social media post.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm