ಬ್ರೇಕಿಂಗ್ ನ್ಯೂಸ್
18-07-22 04:54 pm HK News Desk ದೇಶ - ವಿದೇಶ
Photo credits : LIVE LAW
ನವದೆಹಲಿ, ಜುಲೈ 18 : ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ಎಚ್.ಪಿ.ಸಂದೇಶ್ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅದರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಮತ್ತು ಜೆ.ಮಂಜುನಾಥ್ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ವಿಶೇಷ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರಿದ್ದ ತ್ರಿಸದಸ್ಯ ಪೀಠವು ನಡೆಸಿದ್ದು ನ್ಯಾಯಾಧೀಶರ ಅಭಿಪ್ರಾಯಕ್ಕೂ ಹಾಗೂ ಅವರು ವಿಚಾರಣೆ ಮಾಡುತ್ತಿರುವ ಪ್ರಕರಣಕ್ಕೂ ಸಂಬಂಧವಿಲ್ಲ. ಇಲ್ಲಿ ಅಪ್ರಸ್ತುತ ಅವಲೋಕನಗಳನ್ನು ಮಾಡಿದ್ದಾರೆ ಹಾಗೂ ಜಾಮೀನು ಅರ್ಜಿಯ ವ್ಯಾಪ್ತಿಯನ್ನೂ ಮೀರಿದ್ದಾರೆ ಎಂದು ಹೇಳಿದೆ.
ಜಿಲ್ಲಾಧಿಕಾರಿ ಮಂಜುನಾಥ್ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಉಪ ತಹಸೀಲ್ದಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್, ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದ ಎಸಿಬಿ ವಿರುದ್ಧ ಕಿಡಿಕಾರಿದ್ದರು. ಅಲ್ಲದೆ, ಎಸಿಬಿ ಮುಖ್ಯಸ್ಥ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಭ್ರಷ್ಟಾಚಾರ ಆರೋಪಗಳಿದ್ದು ಪೂರ್ತಿ ಸೇವಾ ದಾಖಲೆಗಳನ್ನು ಸಲ್ಲಿಸುವಂತೆ ಆದೇಶ ಮಾಡಿದ್ದರು. ಇದರಿಂದ ಧೃತಿಗೆಟ್ಟಿದ್ದ ಸೀಮಂತ್ ಕುಮಾರ್ ಸಿಂಗ್, ತಮ್ಮ ಮಾನ ಉಳಿಸಿಕೊಳ್ಳಲು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಜಿಲ್ಲಾಧಿಕಾರಿ ಜೆ.ಮಂಜುನಾಥ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್.ನಾಗಮುತ್ತು ಅವರು, ಈ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಬದಲು ಬೇರೊಂದು ನ್ಯಾಯಪೀಠಕ್ಕೆ ವರ್ಗಾವಣೆ ಮಾಡುವಂತೆ ಕೋರಿದ್ದರು. ಇದಕ್ಕೆ ನಿರಾಕರಿಸಿದ ನ್ಯಾಯಪೀಠ ವಿಚಾರಣೆಯನ್ನು ನ್ಯಾಯಾಧೀಶರೇ ಮುಂದುವರಿಸುತ್ತಾರೆ. ಆದರೆ ಪ್ರಕರಣಕ್ಕೆ ಸಂಬಂಧಪಡದ ವಿಚಾರಗಳಿಗೆ ನಾವು ತಡೆ ನೀಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿತು. ಇದರಿಂದ ಒಂದು ಕಡೆ ಆರೋಪಕ್ಕೀಡಾಗಿದ್ದ ರಾಜ್ಯ ಸರಕಾರ ಮತ್ತು ಎಡಿಜಿಪಿ ಸೀಮಂತ್ ಕುಮಾರ್ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ.
In a significant development, the Supreme Court on Monday stayed directions, including seeking closure reports filed by the state's Anti-Corruption Bureau and the service records of officers including the ADGP, of the Karnataka High Court's Justice HP Sandesh while taking up a bail plea in a bribery case.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm