ಬ್ರೇಕಿಂಗ್ ನ್ಯೂಸ್
20-07-22 10:26 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 20 : ಆಂಧ್ರಪ್ರದೇಶ, ಮಧ್ಯಪ್ರದೇಶ, ತೆಲಂಗಾಣ ಮತ್ತು ಲಕ್ಷದ್ವೀಪಗಳನ್ನು ಹೊರತುಪಡಿಸಿ ದೇಶಾದ್ಯಂತ 13 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ ಎಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ ಸಂಸತ್ತಿನಲ್ಲಿ ಮಾಹಿತಿ ನೀಡಿದ್ದಾರೆ.
2ನೇ ಹಂತದಲ್ಲಿ ಎಲೆಕ್ಟ್ರಿಕ್ ವಾಹನಗಳು ತಯಾರಾಗುತ್ತಿದ್ದು, ಇದಕ್ಕೆ ಪೂರಕವಾದ ಯೋಜನೆಯನ್ನು ರೂಪಿಸಲಾಗಿದೆ. 68 ನಗರಗಳಲ್ಲಿ 2,877 ಸಾರ್ವಜನಿಕ ಇಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ. 9 ಎಕ್ಸ್ಪ್ರೆಸ್ ವೇಗಳು, 16 ಹೆದ್ದಾರಿಗಳಲ್ಲಿ 1,576 EV ಚಾರ್ಜಿಂಗ್ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ. ಜುಲೈ 14ರ ವರೆಗೆ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ 13,34,385ಕ್ಕೆ ಏರಿಕೆಯಾಗಿದೆ. ಒಟ್ಟು 2,826 ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳು ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ ಪ್ರಕಾರ ದೇಶದಲ್ಲಿ ಕಾರ್ಯ ನಿರ್ವಹಿಸುತ್ತವೆ ಎಂದು ಹೇಳಿದರು.
ಜಿನೇವಾದಲ್ಲಿರುವ ಇಂಟರ್ನ್ಯಾಷನಲ್ ರೋಡ್ ಫೆಡರೇಶನ್ನ ಅಂಕಿ ಅಂಶಗಳ ಪ್ರಕಾರ, 2020ರಲ್ಲಿ ಭಾರತದಲ್ಲಿ 1.5 ಲಕ್ಷ ರಸ್ತೆ ಅಪಘಾತಗಳಿಂದ ಸಾವುಗಳು ದಾಖಲಾಗಿವೆ. 207 ದೇಶಗಳಲ್ಲಿ ದಾಖಲಾದ ಒಟ್ಟು ರಸ್ತೆ ಅಪಘಾತಗಳ ಶೇಕಡಾ 26.37 ರಷ್ಟು ಭಾರತದಲ್ಲೇ ಇದೆ ಎಂದು ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ 27,25,87,170 ನೋಂದಾಯಿತ ವಾಹನಗಳಿವೆ. ದೇಶದಲ್ಲಿ ಬಂಡವಾಳ ವೆಚ್ಚವನ್ನು ವಸೂಲಿ ಮಾಡಿದ ನಂತರವೂ ವಿವಿಧ ಟೋಲ್ ರಸ್ತೆಗಳಿಂದ ಹಣ ಸಂಗ್ರಹಿಸಲಾಗುತ್ತಿದೆ ಎಂದು ಸಚಿವಾಲಯಕ್ಕೆ ದೂರುಗಳು ಬರುತ್ತಿದ್ದವು. ಇದಕ್ಕೆ ಉತ್ತರಿಸಿದ ನಿತಿನ್ ಗಡ್ಕರಿ ಅಖಿಲ ಭಾರತ ಮೋಟಾರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ನಿಂದ ಬಳಕೆದಾರರ ಬಳಿ ಶುಲ್ಕ ವಸೂಲಿ ಮಾಡುತ್ತಿದೆ. ಈ ಬಗ್ಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಕ ದೂರುಗಳು ಬಂದಿವೆ. ಜೂನ್ 30, 2022ರಂತೆ BOT ಆಪರೇಟರ್ಗಳು ಎನ್ಹೆಚ್ಎಐನೊಂದಿಗೆ ತಮ್ಮ ಒಪ್ಪಂದದ ಪ್ರಕಾರ 214 ಪ್ಲಾಜಾಗಳಲ್ಲಿ ಬಳಕೆದಾರರಿಂದ ಶುಲ್ಕವನ್ನು ಸಂಗ್ರಹಿಸುತ್ತಿದ್ದಾರೆ ಎಂದು ಹೇಳಿದರು.
Union Minister Nitin Gadkari on Wednesday said more than 13 lakh electric vehicles are registered in the country.This figure excludes the data of Andhra Pradesh, Madhya Pradesh, Telangana and Lakshadweep, the Road Transport and Highways minister said in a written reply to the Rajya Sabha.Gadkari said under Faster Adoption and Manufacturing of Electric Vehicles (FAME) Phase-II scheme, 2,877 public EV charging stations have been sanctioned in 68 cities and 1,576 EV charging stations across 9 expressways and 16 highways.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm