ಬ್ರೇಕಿಂಗ್ ನ್ಯೂಸ್
21-07-22 10:23 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 21 : ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ದೆಹಲಿಯಲ್ಲಿರುವ ದ್ರೌಪದಿ ಮುರ್ಮು ಅವರ ನಿವಾಸಕ್ಕೆ ತೆರಳಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಟ್ವಿಟರ್ನಲ್ಲಿ ಶುಭಾಶಯ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಸರಣಿ ಟ್ವೀಟ್ಗಳನ್ನು ಮಾಡಿ ದ್ರೌಪದಿ ಅವರ ಗುಣಗಾನ ಮಾಡಿದ್ದಾರೆ. "ಭಾರತ ಇತಿಹಾಸ ಬರೆದಿದೆ. 130 ಕೋಟಿ ಭಾರತೀಯರು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಮಯದಲ್ಲಿ ಪೂರ್ವ ಭಾರತದ ಅತ್ಯಂತ ಹಿಂದುಳಿದ ಬುಡಕಟ್ಟು ಸಮುದಾಯದಿಂದ ಬಂದ ಭಾರತದ ಹೆಣ್ಮಗಳು ನಮ್ಮ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಸಾಧನೆಗಾಗಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಅಭಿನಂದಿಸುತ್ತೇನೆ" ಎಂದಿದ್ದಾರೆ.
"ಶ್ರೀಮತಿ ದ್ರೌಪದಿ ಮುರ್ಮು ಅವರ ಜೀವನ, ಅವರ ಆರಂಭಿಕ ಹೋರಾಟಗಳು, ಅವರ ಸೇವೆ ಮತ್ತು ಅವರ ಅನುಕರಣೀಯ ಕೆಲಸಗಳು ಪ್ರತಿ ಭಾರತೀಯನನ್ನು ಪ್ರೇರೇಪಿಸುತ್ತದೆ. ಅವರು ನಮ್ಮ ನಾಗರಿಕರಿಗೆ, ವಿಶೇಷವಾಗಿ ಬಡವರು, ಅಂಚಿನಲ್ಲಿರುವವರು ಮತ್ತು ದೀನ ದಲಿತರಿಗೆ ಭರವಸೆಯ ಕಿರಣವಾಗಿ ಹೊರಹೊಮ್ಮಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ.
"ದ್ರೌಪದಿ ಮುರ್ಮು ಅವರು ಅತ್ಯುತ್ತಮ ಶಾಸಕ ಮತ್ತು ಸಚಿವರಾಗಿದ್ದರು. ಜಾರ್ಖಂಡ್ ರಾಜ್ಯಪಾಲರಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಅವರು ರಾಷ್ಟ್ರವನ್ನು ಮುನ್ನಡೆಸುವ ಮತ್ತು ಭಾರತದ ಅಭಿವೃದ್ಧಿ ಪಯಣವನ್ನು ಬಲಪಡಿಸುವ ಅತ್ಯುತ್ತಮ ರಾಷ್ಟ್ರಪತಿಯಾಗುತ್ತಾರೆ ಎಂದು ನನಗೆ ಖಾತ್ರಿಯಿದೆ" ಎಂದು ಭರವಸೆ ಸೂಚಿಸಿದ್ದಾರೆ.
ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿದ ಎಲ್ಲಾ ಸಂಸದರು ಮತ್ತು ಶಾಸಕರಿಗೆ ಪಕ್ಷಾತೀತವಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ದ್ರೌಪದಿ ಮುರ್ಮು ಅವರ ದಾಖಲೆಯ ಗೆಲುವು ನಮ್ಮ ಪ್ರಜಾಪ್ರಭುತ್ವಕ್ಕೆ ಶುಭವನ್ನು ಸೂಚಿಸುತ್ತದೆ" ಎಂದು ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಜುಲೈ 18 ರಂದು ನಡೆದ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು ಮೂರನೇ ಎರಡರಷ್ಟು ಮತಗಳನ್ನು ಪಡೆದು ದ್ರೌಪದಿ ಮುರ್ಮು ಗೆಲುವು ಕಂಡಿದ್ದಾರೆ. ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ಕ್ಕೆ ಕೊನೆಯಾಗಲಿದ್ದು ಅದೇ ದಿನ ಹೊಸ ರಾಷ್ಟ್ರಪತಿ ಪ್ರಮಾಣ ಸ್ವೀಕರಿಸಲಿದ್ದಾರೆ.
I would like to thank all those MPs and MLAs across party lines who have supported the candidature of Smt. Droupadi Murmu Ji. Her record victory augurs well for our democracy.
— Narendra Modi (@narendramodi) July 21, 2022
Prime Minister Narendra Modi extended his wishes to NDA candidate Draupadi Murmu as she won the presidential election to become the first tribal woman set to occupy India's top constitutional post. "Smt. Droupadi Murmu Ji's life, her early struggles, her rich service and her exemplary success motivates each and every Indian. She has emerged as a ray of hope for our citizens, especially the poor, marginalised and the downtrodden," PM said on his official Twitter handle.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 10:45 pm
Mangalore Correspondent
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm