ಬ್ರೇಕಿಂಗ್ ನ್ಯೂಸ್
30-07-22 09:07 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 30 : ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ಶಾಂತಿ, ಸಾಮರಸ್ಯ ಕದಡುವವರ ಬಗ್ಗೆ ಎಚ್ಚರದಿಂದಿರಬೇಕು. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಶಕ್ತಿಗಳ ಬಗ್ಗೆ ಜಾಗರೂಕತೆ ಅಗತ್ಯ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ.
ದೆಹಲಿಯಲ್ಲಿ ಅಖಿಲ ಭಾರತ ಸೂಫಿ ಕೌನ್ಸಿಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಪ್ರಗತಿಯನ್ನು ಮತ್ತು ಹೆಸರನ್ನು ಹಾಳು ಮಾಡಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ. ಅಂತಹ ವಾತಾವರಣ ಸೃಷ್ಟಿ ಮಾಡುವವರ ವಿರುದ್ದ ಸದಾ ಎಚ್ಚರದಿಂದಿರಬೇಕು. ಧರ್ಮ, ಸಿದ್ಧಾಂತದ ಹೆಸರಿನಲ್ಲಿ ದ್ವೇಷ, ಸಂಘರ್ಷ ಉಂಟು ಮಾಡುತ್ತಿರುವುದು ಸರಿಯಲ್ಲ. ದೇಶದಿಂದಾಚೆಗೂ ಇದು ಹರಡುತ್ತಿದ್ದು, ಇಡೀ ದೇಶದ ಅಭಿವೃದ್ದಿಯ ಮೇಲೆ ಇದು ಕೆಟ್ಟ ಪರಿಣಾಮ ಬೀರುತ್ತಿದೆ ಎಂದವರು ಆತಂಕ ವ್ಯಕ್ತಪಡಿಸಿದರು.
ಕೆಲವು ಸಂಘಟನೆಗಳು ದೇಶದಲ್ಲಿ ಸಂಘರ್ಷ ಉಂಟು ಮಾಡಲೆಂದೇ ಹುಟ್ಟಿಕೊಂಡಿವೆ. ಇವು ಧರ್ಮದ ಹೆಸರಿನಲ್ಲಿ ನಿರಂತರವಾಗಿ ಸಂಘರ್ಷಗಳನ್ನು ಹುಟ್ಟುಹಾಕಿ ದೇಶದ ಶಾಂತಿ ಕೆಡಿಸುವಲ್ಲಿ ಕಾರಣವಾಗುತ್ತಿವೆ. ಏಕತೆಯಿಂದ ಮಾತ್ರ ದೇಶ ಮುನ್ನಡೆಯಲು ಸಾಧ್ಯ. ಅದನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳಬೇಕು. ದೇಶ ಪ್ರಗತಿ ಹೊಂದಿದರೆ ಎಲ್ಲಾ ಧರ್ಮದವರಿಗೂ ಅದರ ಪ್ರಯೋಜನ ಸಿಗುತ್ತದೆ ಎಂದರು.
ಧಾರ್ಮಿಕ ಮುಖ್ಯಸ್ಥರು ಶಾಂತಿ ಮತ್ತು ಏಕತೆಗಾಗಿ ಚರ್ಚಿಸಲು ಮತ್ತು ನಿರ್ಣಯವನ್ನು ಅಂಗೀಕರಿಸುವ ಸಂಬಂಧ ನಡೆದ ಸಭೆ ಇದಾಗಿತ್ತು.
National Security Adviser Ajit Doval today warned the nation to be on guard against forces conspiring to disturb harmony and create unrest in the name of religion and ideology.Mr Doval made the comment at an event organised by the All India Sufi Sajjadanashin Council in Delhi, where religious heads attended to discuss and pass a resolution for peace and unity. A resolution after the meeting called for banning organisations like the Popular Front of India, or PFI, "who have been pursuing a divisive agenda."
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm