ಬ್ರೇಕಿಂಗ್ ನ್ಯೂಸ್
03-10-20 01:44 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 03: ನಮ್ಮ ಮಗಳ ಸಾವಿನ ತನಿಖೆಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಗಬೇಕು, ನಮ್ಮಲ್ಲಿ ಯಾರೂ ಕೂಡ ಸಿಬಿಐ ತನಿಖೆಗೆ ಒತ್ತಾಯಿಸಿಲ್ಲ ಎಂದು ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ, ಸಾವನ್ನಪ್ಪಿದ ಯುವತಿಯ ಕುಟುಂಬಸ್ಥರು ಹೇಳಿದ್ದಾರೆ.
ನಮಗೆ ಸಿಬಿಐ ತನಿಖೆ ಬೇಕಾಗಿಲ್ಲ, ಸರ್ಕಾರದ ವಿಶೇಷ ತನಿಖಾ ತಂಡ ಎಸ್ಐಟಿ ಬಗ್ಗೆ ನಮಗೆ ಕೊಂಚವೂ ನಂಬಿಕೆಯಿಲ್ಲ. ಎಸ್ಐಟಿ ಕೂಡ ಆರೋಪಿಗಳ ಪರವಾಗಿದೆ ಎಂಬ ಅನುಮಾನ ನಮಗಿದೆ. ರಾಜಕಾರಣಿಗಳು ನಮಗೆ ನ್ಯಾಯ ಕೊಡಿಸಲೆಂದು ನಮ್ಮ ಬಗ್ಗೆ ಅನುಕಂಪ ತೋರಿಸುತ್ತಿದ್ದಾರೆ ಎಂದು ನಮಗನ್ನಿಸುತ್ತಿಲ್ಲ. ಅವರು ಕೇವಲ ರಾಜಕಾರಣ ಮಾಡಲು ಹಾಗೂ ತಮ್ಮ ಸ್ವಾರ್ಥಕ್ಕಾಗಿ ಇಷ್ಟೆಲ್ಲ ಮಾಡುತ್ತಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.
ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಹತ್ರಾಸ್ಗೆ ಮಾಧ್ಯಮಗಳು ಹೋಗುವಂತಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರ ನಿರ್ಬಂಧ ಹೇರಿತ್ತು. ಅಲ್ಲದೆ, ಮೃತ ಯುವತಿಯ ಮನೆಯ ಬಳಿ ಸ್ಥಳೀಯರಿಗೂ ತೆರಳದಂತೆ ನಿಷೇಧ ಹೇರಲಾಗಿತ್ತು. ನಿನ್ನೆ ಮೃತ ಯುವತಿಯ ಮನೆಗೆ ತೆರಳಲು ಹೋಗುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ಮಾರ್ಗಮಧ್ಯದಲ್ಲೇ ಪೊಲೀಸರು ತಡೆದಿದ್ದರು. ಈ ವೇಳೆ ಲಾಠಿ ಚಾರ್ಜ್ ಕೂಡ ನಡೆಸಲಾಗಿತ್ತು.

ಇಂದು ಹತ್ರಾಸ್ನಲ್ಲಿ ಜಿಲ್ಲಾಡಳಿತ ಮಾಧ್ಯಮ ನಿರ್ಬಂಧವನ್ನು ತೆರವುಗೊಳಿಸಿದೆ. ಹೀಗಾಗಿ, ಮಾಧ್ಯಮಗಳೊಂದಿಗೆ ಮಾತನಾಡಿದ ಮೃತ ಯುವತಿಯ ಕುಟುಂಬಸ್ಥರು ಈ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
'ನಮಗೆ ನಾರ್ಕೋ ಟೆಸ್ಟ್ ಮಾಡಿಲ್ಲ. ಹಾಗೆಂದರೇನು ಎಂದು ಕೂಡ ನಮಗೆ ಗೊತ್ತಿಲ್ಲ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದು ಬೇಡ ಎಂದು ನಾವು ಬೇಡಿಕೊಳ್ಳುತ್ತಿದ್ದೇವೆ. ನಮಗೆ ಸಿಬಿಐ ತನಿಖೆಯಲ್ಲಿ ಯಾವುದೇ ನಂಬಿಕೆಯಿಲ್ಲ. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಈ ಕೇಸಿನ ತನಿಖೆಯ ನೇತೃತ್ವ ವಹಿಸಿಕೊಳ್ಳಲಿ' ಎಂದು ಮೃತ ಯುವತಿಯ ತಾಯಿ ಮನವಿ ಮಾಡಿದ್ದಾರೆ. ಹತ್ರಾಸ್ನಲ್ಲಿ ಮೃತಪಟ್ಟ ಯುವತಿಯ ಕುಟುಂಬಸ್ಥರನ್ನು ದೂರವಿಟ್ಟು ಮಂಗಳವಾರ ರಾತ್ರೋರಾತ್ರಿ ಪೊಲೀಸರೇ ಆಕೆಯ ಅಂತ್ಯಕ್ರಿಯೆ ನೆರವೇರಿಸಿದ್ದರು. ಅದಕ್ಕೆ ಭಾರೀ ಆಕ್ರೋಶ ವ್ಯಕ್ತವಾದ ಬಳಿಕ ನಿನ್ನೆ ಉತ್ತರ ಪ್ರದೇಶ ಸರ್ಕಾರ ಹತ್ರಾಸ್ ಅತ್ಯಾಚಾರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ನಿಯೋಜನೆ ಮಾಡಿತ್ತು. ಮೂವರು ಅಧಿಕಾರಿಗಳಿರುವ ಎಸ್ಐಟಿ ಈ ಪ್ರಕರಣದ ತನಿಖೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಉತ್ತರ ಪ್ರದೇಶದ ಹತ್ರಾಸ್ ಎಂಬ ಹಳ್ಳಿಯಲ್ಲಿ ತನ್ನ ಕುಟುಂಬದೊಂದಿಗೆ ಹೊಲದಲ್ಲಿ ಹುಲ್ಲು ಕತ್ತರಿಸುತ್ತಿದ್ದ 19 ವರ್ಷದ ಯುವತಿಯನ್ನು ಆಕೆಯ ದುಪಟ್ಟಾದಿಂದ ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿತ್ತು. ಈ ವೇಳೆ ಆಕೆಯ ನಾಲಿಗೆಯನ್ನು ಕತ್ತರಿಸಲಾಗಿತ್ತು. ದೆಹಲಿ ಆಸ್ಪತ್ರೆಯಲ್ಲಿ ವಾರದ ಬಳಿಕ ಆಕೆ ಸಾವನ್ನಪ್ಪಿದ್ದಳು. ಆಕೆಯ ಕುತ್ತಿಗೆಯನ್ನು ಹಲವು ಬಾರಿ ಒತ್ತಿದ್ದರಿಂದ ಫ್ರಾಕ್ಚರ್ ಆಗಿತ್ತು ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ತಿಳಿಸಲಾಗಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm