ಬ್ರೇಕಿಂಗ್ ನ್ಯೂಸ್
04-08-22 03:38 pm Source: one india ದೇಶ - ವಿದೇಶ
ನವದೆಹಲಿ, ಆ.04: "ನನಗೆ ಮೋದಿಯ ಭಯವಿಲ್ಲ. ಅವರು ಇನ್ನು ಹೆಚ್ಚು ಬ್ಯಾರಿಕೇಡ್ಗಳನ್ನು ಹಾಕಬಹುದು. ಸತ್ಯವನ್ನು ಕಟ್ಟಿ ಹಾಕಲು ಸಾಧ್ಯವಿಲ್ಲ" ಎಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಪ್ರಧಾನಿ ಮೋದಿ ನೇತೃತ್ವದ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕೇಂದ್ರ ಸರಕಾರ ಏಜೆನ್ಸಿಗಳನ್ನು ಬಳಸಿಕೊಂಡು ತಮ್ಮ ಮತ್ತು ಇತರ ವಿರೋಧದ ಧ್ವನಿಗಳನ್ನು ಹತ್ತಿಕ್ಕಲು ಒತ್ತಡ ಹಾಕುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಸಂಸತ್ತಿಗೆ ಹಾಜರಾಗುವಾಗ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜೂನ್ನಲ್ಲಿ ಐದು ದಿನಗಳ ಕಾಲ ಸುಮಾರು 50 ಗಂಟೆಗಳ ಕಾಲ ರಾಹುಲ್ ಗಾಂಧಿ ಪ್ರಶ್ನಿಸಿತ್ತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಅವರ ತಾಯಿ ಮತ್ತು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯನ್ನೂ ಇಡಿ ಪ್ರಶ್ನಿಸಿದೆ.
"ನೀವು ನ್ಯಾಷನಲ್ ಹೆರಾಲ್ಡ್ ಬಗ್ಗೆ ಮಾತನಾಡುತ್ತಿದ್ದರೆ, ಈ ಇಡೀ ವಿಷಯವು ಬೆದರಿಕೆಗೆ ಸಂಬಂಧಿಸಿದೆ. ಸ್ವಲ್ಪ ಒತ್ತಡ ಹಾಕಿದರೆ ನಾವು ಮೌನವಾಗಿರುತ್ತೇವೆ ಎಂದು ನರೇಂದ್ರ ಮೋದಿ ಮತ್ತು ಅಮಿತ್ ಶಾ ಭಾವಿಸುತ್ತಾರೆ. ಆದರೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಪ್ರಜಾಪ್ರಭುತ್ವದ ವಿರುದ್ಧ ಏನೇ ಮಾಡಿದರೂ ನಾವು ಸುಮ್ಮನಿರುವುದಿಲ್ಲ" ಎಂದಿದ್ದಾರೆ. ನ್ಯಾಷನಲ್ ಹೆರಾಲ್ಡ್ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿರುವ ಯಂಗ್ ಇಂಡಿಯನ್ನ ಕಚೇರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೀಗ ಹಾಕಿದ್ದಾರೆ. ಈ ಬಗ್ಗೆ ಮುಂದಿನ ನಡೆಯನ್ನು ನಿರ್ಧರಿಸಲು ಇಂದು ಕಾಂಗ್ರೆಸ್ ಸಂಸದರು ಸಭೆ ನಡೆಸುತ್ತಿದ್ದಾರೆ.
"ಓಡಲು ಜಾಗವಿಲ್ಲ" ಎಂಬ ಬಿಜೆಪಿಯ ಟೀಕೆಗೆ ಉತ್ತರಿಸಿರುವ ಅವರು, "ಓಡುವ ಬಗ್ಗೆ ಮಾತನಾಡುವವರು ಯಾರು?. ಯಾರು ಓಡುತ್ತಾರೋ ಅವರು ಮಾತನಾಡುತ್ತಾರೆ. ನಾವು ಹಾಗಲ್ಲ. ನರೇಂದ್ರ ಮೋದಿಗೆ ನಾವು ಹೆದರುವುದಿಲ್ಲ, ನೀವು ಏನು ಬೇಕಾದರೂ ಮಾಡಿ, ಪರವಾಗಿಲ್ಲ, ಪ್ರಜಾಪ್ರಭುತ್ವವನ್ನು ರಕ್ಷಿಸುವ, ದೇಶದಲ್ಲಿ ಸಾಮರಸ್ಯವನ್ನು ಕಾಪಾಡುವ ನನ್ನ ಕೆಲಸವನ್ನು ನಾನು ಮಾಡುತ್ತೇನೆ" ಎಂದು ಆಕ್ರೋಶ ಹೊರಹಾಕಿದ್ದಾರೆ.
ಜೂನ್ ಮತ್ತು ಜುಲೈನಲ್ಲಿ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ನೊಂದಿಗೆ ಭಾಗಿಯಾಗಿರುವ ಕುರಿತು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯವು ನೂರಾರು ಪ್ರಶ್ನೆಗಳನ್ನು ಕೇಳಿದೆ.
ಜವಾಹರಲಾಲ್ ನೆಹರು ಅವರು ಸ್ಥಾಪಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ನಡೆಸುತ್ತಿರುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಅನ್ನು ಯಂಗ್ ಇಂಡಿಯನ್ಸ್ ಸ್ವಾಧೀನಪಡಿಸಿಕೊಂಡಿದೆ. ಇದರಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಆರೋಪಿಸಲಾಗಿದ್ದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ಹಣ ದುರುಪಯೋಗಪಡಿಸಿಕೊಳ್ಳಲು ಪಿತೂರಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್ಗೆ ಸಲ್ಲಿಸಿದ ದೂರಿನಲ್ಲಿ ಆರೋಪಿಸಿದ್ದರು.
I'm not afraid of Modi, you can't hide the truth; Congress leader Rahul Kidi.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm