ಬ್ರೇಕಿಂಗ್ ನ್ಯೂಸ್
09-08-22 04:52 pm HK News Desk ದೇಶ - ವಿದೇಶ
ಪಾಟ್ನಾ, ಆಗಸ್ಟ್ 9 : ಬಿಹಾರದಲ್ಲಿ ಬಿಜೆಪಿ- ಜೆಡಿಯು ಮೈತ್ರಿ ಸರಕಾರ ಪತನವಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಸಂಜೆ ನಾಲ್ಕು ಗಂಟೆಗೆ ರಾಜ್ಯಪಾಲರನ್ನು ಭೇಟಿಯಾದ ನಿತೀಶ್ ಕುಮಾರ್ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.
ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಪ್ರತಿಕ್ರಿಯೆ ನೀಡಿದ ನಿತೀಶ್ ಕುಮಾರ್, ತಮ್ಮ ಪಕ್ಷದ ಎಲ್ಲಾ ಸಂಸದರು ಮತ್ತು ಶಾಸಕರು ಎನ್ಡಿಎ ತೊರೆಯುವ ನಿರ್ಧಾರಕ್ಕೆ ಒಮ್ಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಂಡಿರುವ ಜೆಡಿಯು ಅಧ್ಯಕ್ಷ ಹಾಗೂ ಸಿಎಂ ನಿತೀಶ್ ಕುಮಾರ್ ತೇಜಸ್ವಿ ಯಾದವ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಇದರೊಂದಿಗೆ ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರ ಪತನಗೊಂಡಿದೆ.
ಈ ನಡುವೆ, ಆರ್ಜೆಡಿ ನೇತೃತ್ವದ ಮಹಾಮೈತ್ರಿಕೂಟದ ಸಭೆಯು ರಾಬ್ರಿ ದೇವಿ ನಿವಾಸದಲ್ಲಿ ನಡೆದಿದ್ದು ಮತ್ತೆ ಮೈತ್ರಿ ಸರಕಾರ ನಡೆಸಲು ಮುಂದಾಗಿದ್ದಾರೆ. ಬಿಜೆಪಿಗೆ ಕೈಕೊಟ್ಟು ನಿತೀಶ್ ಕುಮಾರ್ ಸರ್ಕಾರ ಉರುಳಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2015ರಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು, ಬಿಜೆಪಿ ಮೈತ್ರಿಯಿಂದ ದೂರ ಸರಿದಿತ್ತು. ಬಳಿಕ ಆರ್ಜೆಡಿ ಮತ್ತು ಕಾಂಗ್ರೆಸ್ ಜೊತೆ ಕೈಜೋಡಿಸಿತ್ತು. ಜೆಡಿ(ಯು)- ಆರ್ಜೆಡಿ-ಕಾಂಗ್ರೆಸ್ ಒಕ್ಕೂಟದ 'ಮಹಾಘಟಬಂಧನ್' 2015ರಲ್ಲಿ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜಯ ಗಳಿಸಿತ್ತು. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಮತ್ತು ಆರ್ಜೆಡಿಯ ತೇಜಸ್ವಿ ಯಾದವ್ ಅವರ ಉಪ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದರು. ಆದರೆ ನಿತೀಶ್ ಕುಮಾರ್ 2017ರಲ್ಲಿ ಮಹಾಘಟಬಂಧನ್ ಸರ್ಕಾರವನ್ನು ಉರುಳಿಸಿ ಮತ್ತೆ ಬಿಜೆಪಿಯೊಂದಿಗೆ ಕೈಜೋಡಿಸಿದ್ದರು.
ಸೋಮವಾರ ನಿತೀಶ್ ಕುಮಾರ್ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳುವ ಸುಳಿವು ನೀಡುತ್ತಿದ್ದಂತೆ, ಬಿಜೆಪಿ ಮೈತ್ರಿ ತೊರೆದರೆ ಅವರಿಗೆ ನಮ್ಮ ಬೆಂಬಲವಿದೆ ಎಂದು ಬಿಹಾರದ ಏಕೈಕ ದೊಡ್ಡ ಪಕ್ಷ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ತೇಜಸ್ವಿ ಯಾದವ್ ಹೇಳಿದ್ದರು. ಹೀಗಾಗಿ, ಬಿಜೆಪಿಯೊಂದಿಗಿನ ಮೈತ್ರಿ ತೊರೆದ ನಿತೀಶ್ ಕುಮಾರ್ ಆರ್ಜೆಡಿ ಜೊತೆ ಕೈಜೋಡಿಸಿ ಸರ್ಕಾರ ರಚಿಸಲಿದ್ದಾರೆ ಎನ್ನಲಾಗುತ್ತಿದೆ.
The uncertainty over the fate of Bihar's NDA coalition government is all but over as chief minister and JD(U) leader Nitish Kumar has reportedly decided to snap ties with the BJP, amid reports of a tiff between the two parties.Meanwhile, opposition parties such as the RJD and Congress are both expected to support the JD(U), which contested and won the 2015 assembly elections as member of the Mahagathbandhan, which also comprised of, among others, the RJD and Congress. In July 2017, Kumar left the Mahagathbandhan to join hands with the saffron party, and continued as chief minister.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm