ಬ್ರೇಕಿಂಗ್ ನ್ಯೂಸ್
17-08-22 02:12 pm HK News Desk ದೇಶ - ವಿದೇಶ
ಶ್ರೀನಗರ, ಆಗಸ್ಟ್ 17 : ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಛೋಟಿಪುರದಲ್ಲಿ ಕಾಶ್ಮೀರಿ ಪಂಡಿತ ಸಮುದಾಯದ ಸುನೀಲ್ ಕುಮಾರ್ ಅವರನ್ನು ಉಗ್ರರು ಗುಂಡಿಟ್ಟು ಹತ್ಯೆಗೈದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಜಮ್ಮು-ಕಾಶ್ಮೀರ ಸರ್ಕಾರ ಮುಂದಾಗಿದೆ.
ಕಾಶ್ಮೀರಿ ಪಂಡಿತ ಸುನೀಲ್ ಕುಮಾರ್ ಭಟ್ ಅವರ ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿರುವ ಉಗ್ರ ಅದಿಲ್ ವಾನಿಯ ಮನೆಯನ್ನು ಜಪ್ತಿ ಮಾಡುವ ಪ್ರಕ್ರಿಯೆಯನ್ನು ಪೊಲೀಸರು ಆರಂಭಿಸಿದ್ದಾರೆ. ಮಂಗಳವಾರ ಶೋಪಿಯಾನ್ ನಲ್ಲಿ ತಮ್ಮ ಸೇಬಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸುನೀಲ್ ಕುಮಾರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದರು. ಅವರ ಸಹೋದರ ಪಿಂಟು ಕುಮಾರ್ ಘಟನೆಯಲ್ಲಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಾಶ್ಮೀರಿ ಪಂಡಿತರ ಮೇಲಿನ ದಾಳಿಯನ್ನು ಖಂಡಿಸಿ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಜಮ್ಮು ಕಾಶ್ಮೀರ ಪೊಲೀಸರು ಭಯೋತ್ಪಾದಕ ಅದಿಲ್ ವಾನಿಯ ತಂದೆ ಮತ್ತು ಆತನ ಮೂವರು ಸಹೋದರರನ್ನು ಬಂಧಿಸಿದ್ದಾರೆ.
ಕಾಶ್ಮೀರಿ ಪಂಡಿತರ ಮೇಲೆ ದಾಳಿ ನಡೆಸಿದ ನಂತರ ವಾನಿ ಕುಟಾಪೋರಾ ಪ್ರದೇಶದ ಮನೆಯಲ್ಲಿ ಆಶ್ರಯ ಪಡೆದಿದ್ದ. ಈ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಶೋಧ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ವಾನಿ ಭದ್ರತಾ ಪಡೆ ಮೇಲೆ ಗ್ರೆನೇಡ್ ಎಸೆದು ಪರಾರಿಯಾಗಿರುವುದಾಗಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ವರದಿ ಮಾಡಿದೆ.
The latest targeted killing of a Kashmir Pandit by militants in south Kashmir’s Shopian district on Tuesday has sparked a fresh wave of fears among the minority community members in the Kashmiri Valley, who feel increasingly scared and insecure. Sunil Kumar Nath, 45, and his brother Pintoo Kumar, 43, were shot at by motor-cycle borne militants when they were working in their orchard in Chotigam village of Shopian. While Nath died on the spot, Kumar is in hospital with critical bullet wounds.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm