ಬ್ರೇಕಿಂಗ್ ನ್ಯೂಸ್
20-08-22 03:41 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 20 : ಮುಂಬೈ ನಗರದ ಮೇಲೆ 26/11ರ ಮಾದರಿ ದಾಳಿ ನಡೆಸುವುದಾಗಿ ಮುಂಬೈನ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂ ವಾಟ್ಸ್ ಆ್ಯಪ್ ಸಂಖ್ಯೆಗೆ ಶುಕ್ರವಾರ ರಾತ್ರಿ ವಿದೇಶದಿಂದ ಹಲವು ಬೆದರಿಕೆ ಸಂದೇಶಗಳು ಬಂದಿವೆ.
ದೇಶದ ಹೊರಗಿನಿಂದ ಈ ಸಂದೇಶಗಳು ಬಂದಿವೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಂಟ್ರಲ್ ಮುಂಬೈನ ವರ್ಲಿಯಲ್ಲಿರುವ ಕಂಟ್ರೋಲ್ ರೂಮ್ ಕೇಂದ್ರಕ್ಕೆ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ಸಂದೇಶಗಳು ಬಂದಿವೆ.
'26/11' ಮಾದರಿಯ ದಾಳಿ ನಡೆಸುವುದಾಗಿ ಸಂದೇಶದಲ್ಲಿ ಹೇಳಿದ್ದು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. 2008 ನವೆಂಬರ್ 26ರಂದು ಮುಂಬೈನಲ್ಲಿ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಪಾಕಿಸ್ತಾನದ 10 ಶಸ್ತ್ರಸಜ್ಜಿತ ಭಯೋತ್ಪಾದಕರು ಮುಂಬೈನಲ್ಲಿ ದಾಳಿ ನಡೆಸಿದ್ದರು. ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ಎನಿಸಿದ ಈ ದಾಳಿಯಲ್ಲಿ 166 ಜನರು ಸಾವನ್ನಪ್ಪಿದರು ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಹರಿಹರೇಶ್ವರ ಬೀಚ್ನಲ್ಲಿ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದ್ದ ಅನುಮಾನಾಸ್ಪದ ದೋಣಿಯಲ್ಲಿ 3 ಎಕೆ-47 ರೈಫಲ್, ಗುಂಡುಗಳು ಸಿಕ್ಕಿದ್ದವು. ಇದರ ಬೆನ್ನಿಗೇ ಬಂದಿರುವ ಈ ಸಂದೇಶ ಆತಂಕಕ್ಕೆ ಕಾರಣವಾಗಿದೆ.
Mumbai Traffic Police's control room has received several text messages on the WhatsApp number of its helpline, threatening a "26/11-type" attack, an official said on Saturday.Prima facie, the number from which the messages have been sent is from outside the country, he said."Text messages were received on the WhatsApp number of the Mumbai police's traffic helpline operated from the control room located at Worli in central Mumbai around 11 pm on Friday," the official said.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm