ಬ್ರೇಕಿಂಗ್ ನ್ಯೂಸ್
24-08-22 01:58 pm HK News Desk ದೇಶ - ವಿದೇಶ
ಚಂಡೀಗಢ, ಆ 24: ಮಂಗಳವಾರ ನಿಧನರಾದ ಹರ್ಯಾಣದ ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಅವರ ಕುಟುಂಬ ಆಕೆಯ ಸಾವಿನ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದು, ಸಿಬಿಐ ತನಿಖೆಗೆ ಒತ್ತಾಯಿಸಿದೆ.
42 ವರ್ಷದ ಸೋನಾಲಿ ಫೋಗಟ್ ಮಂಗಳವಾರ ಮುಂಜಾನೆ ಗೋವಾದಲ್ಲಿ ಶಂಕಿತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಪೊಲೀಸರು "ಅಸಹಜ ಸಾವು" ಎಂದು ಪ್ರಕರಣ ದಾಖಲಿಸಿದ್ದಾರೆ.
"ನನ್ನ ಸಹೋದರಿಗೆ ಹೃದಯಾಘಾತವಾಗುವುದಿಲ್ಲ. ಅವರು ತುಂಬಾ ಫಿಟ್ ಆಗಿದ್ದರು. ಸಿಬಿಐನಿಂದ ಸೂಕ್ತ ತನಿಖೆ ನಡೆಸುವಂತೆ ನಾವು ಒತ್ತಾಯಿಸುತ್ತೇವೆ. ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬುದನ್ನು ನನ್ನ ಕುಟುಂಬ ಒಪ್ಪಿಕೊಳ್ಳಲು ಸಿದ್ಧರಿಲ್ಲ. ಅವರಿಗೆ ಅಂತಹ ಯಾವುದೇ ವೈದ್ಯಕೀಯ ಸಮಸ್ಯೆ ಇರಲಿಲ್ಲ" ಎಂದು ಆಕೆಯ ಸಹೋದರಿ ರಾಮನ್ ತಿಳಿಸಿದ್ದಾರೆ.
"ಆಕೆಯ ಸಾವಿನ ಹಿಂದಿನ ಸಂಜೆ ನನಗೆ ಆಕೆ ಕರೆ ಮಾಡಿದ್ದರು. ವಾಟ್ಸಾಪ್ನಲ್ಲಿ ಮಾತನಾಡೋಣ, ಏನೋ ಅನುಮಾನಸ್ಪದವಾಗಿರುವಂತಹದ್ದು ನಡೆಯುತ್ತಿದೆ ಎಂದು ಹೇಳಿದ್ದು. ನಂತರ, ಆಕೆ ಕರೆಯನ್ನು ಕಟ್ ಮಾಡಿದರು, ನಾನು ಕರೆ ಮಾಡಿದರೆ ಸ್ವೀಕರಿಸಲಿಲ್ಲ" ಎಂದು ತಿಳಿಸಿದ್ದಾರೆ. ಇನ್ನು ಗೋವಾ ಪೊಲೀಸರು ಮರಣೋತ್ತರ ಪರೀಕ್ಷೆಯು ಕಾರಣವನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.
ಸೋನಾಲಿ ಫೋಗಟ್ ತನ್ನ ಟಿಕ್ಟಾಕ್ ವಿಡಿಯೋಗಳಿಂದ ಹೆಚ್ಚು ಪ್ರಚಾರ ಗಳಿಸಿದ್ದರು. ಬಿಜೆಪಿಗೆ ಸೇರುವ ಮೊದಲು ಅವರು 2006 ರಲ್ಲಿ ಟಿವಿ ನಿರೂಪಕಿಯಾಗಿ ಟೆಲಿವಿಷನ್ ಲೋಕಕ್ಕೆ ಪಾದಾರ್ಪಣೆ ಮಾಡಿದರು. ರಿಯಾಲಿಟಿ ಶೋ ಬಿಗ್ ಬಾಸ್ 2020 ರ 14 ನೇ ಆವೃತ್ತಿಯಲ್ಲಿ ಕಾಣಿಸಿಕೊಂಡಿದ್ದರು. 2016 ರಲ್ಲಿ ಟಿವಿ ಶೋ ಮೂಲಕ ತಮ್ಮ ನಟನೆಗೆ ಪಾದಾರ್ಪಣೆ ಮಾಡಿದ್ದರು. 2019 ರಲ್ಲಿ ವೆಬ್ ಸರಣಿಯಲ್ಲಿ ನಟಿಸಿದರು. ಅವರು ರಿಯಾಲಿಟಿ ಶೋ ಬಿಗ್ ಬಾಸ್ನ 2020 ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದರು.
ಅವರು 2008 ರಲ್ಲಿ ಬಿಜೆಪಿ ಸೇರಿದ್ದರು. ಬಿಜೆಪಿಯ ಮಲಿಹಾ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. ಹರಿಯಾಣ, ದೆಹಲಿ ಮತ್ತು ಚಂಡೀಗಢದಂತಹ ಹಲವಾರು ರಾಜ್ಯಗಳಲ್ಲಿ ಪಕ್ಷದ ಬುಡಕಟ್ಟು ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ಸೋನಾಲಿ ಫೋಗಟ್ 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಕುಲದೀಪ್ ಬಿಷ್ಣೋಯ್ ವಿರುದ್ಧ ಸೋತಿದ್ದರು.
ನಟಿ ಸೋನಾಲಿ ಫೋಗಟ್ ತನ್ನ ತಾಯಿಗೆ ಕರೆ ಮಾಡಿ ಆಹಾರ ಸೇವಿಸಿದ ನಂತರ ಹುಷಾರಿಲ್ಲ. ನನ್ನ ವಿರುದ್ಧ ಏನೋ ಪಿತೂರಿ ನಡೆಯುತ್ತಿದೆ ಎಂದು ಹೇಳಿದ್ದಾಳೆ ಎಂದು ಆಕೆಯ ಸಹೋದರಿ ರಾಮನ್ ಹಿಸಾರ್ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
Sonali Phogat, 42, died of a suspected heart attack on Monday night. She was declared dead at a hospital. The police have registered a case of "unnatural death", according to news agency PTI. The post-mortem will be carried out by a medical board amid questions.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm