ಬ್ರೇಕಿಂಗ್ ನ್ಯೂಸ್
26-08-22 04:32 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 26: ದೇಶದಲ್ಲಿ 5ಜಿ ಸೇವೆ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ ಎರಡನೇ ವಾರದಲ್ಲಿ 5ಜಿ ಸೇವೆ ಆರಂಭಿಸುತ್ತೇವೆ. ಜೊತೆಗೆ 6ಜಿ ಸೇವೆ ಬಗ್ಗೆ ಈಗಾಗಲೇ ಕೆಲಸ ಆರಂಭವಾಗಿದ್ದು 2030ರ ಒಳಗಾಗಿ 6ಜಿ ಸೇವೆ ಆರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ರ ಗ್ರ್ಯಾಂಡ್ ಫಿನಾಲೆಯಲ್ಲಿ ಮಾತನಾಡಿದ ಮೋದಿ, ದೇಶದಲ್ಲಿ ತಂತ್ರಜ್ಞಾನಗಳ ಬೆಳವಣಿಗೆ ಸಾಕಷ್ಟು ವೇಗವಾಗಿ ನಡೆಯುತ್ತಿದೆ. ಈಗಾಗಲೇ ಡ್ರೋನ್ಗಳನ್ನು ಕೃಷಿ ಮತ್ತು ಆರೋಗ್ಯ ವಿಭಾಗದಲ್ಲಿ ಬಳಕೆ ಮಾಡಲಾಗುತ್ತಿದೆ. ದೇಶದಲ್ಲಿ ಗೇಮಿಂಗ್ ಮತ್ತು ತಂತ್ರಜ್ಞಾನಗಳ ಬೆಳವಣಿಗೆಯಿಂದ ಯುವ ಸಮೂಹಕ್ಕೆ ಬೆಂಬಲ ನೀಡುತ್ತಿದ್ದೇವೆ ಎಂದಿದ್ದಾರೆ.
ಯುವ ಸಮೂಹ ತಂತ್ರಜ್ಞಾನಗಳ ಸದುಪಯೋಗ ಪಡೆದುಕೊಳ್ಳಬೇಕು. ಈ ಮೂಲಕ ದೇಶದ ಪ್ರಗತಿಗೆ ಸಹಕಾರಿಯಾಗಬೇಕು. ಗ್ರಾಮೀಣ ಭಾಗಗಳಲ್ಲೂ ಕೂಡ 5ಜಿ ಸೇವೆ ಆರಂಭಕ್ಕೆ ಸರ್ಕಾರ ಸಿದ್ಧವಿದೆ. ಕಳೆದ 7-8 ವರ್ಷಗಳಿಂದ ದೇಶದಲ್ಲಿ ತಂತ್ರಜ್ಞಾನಗಳ ಉನ್ನತ ಮಟ್ಟದ ಬೆಳವಣಿಗೆ ಆಗುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಆಕ್ಟೋಬರ್ 12ಕ್ಕೆ 5ಜಿ ಸೇವೆ ಆರಂಭ:
ದೇಶದಲ್ಲಿ ಅಕ್ಟೋಬರ್ 12ರಿಂದ 5ಜಿ ಸೇವೆ ಆರಂಭಗೊಳ್ಳಲಿದ್ದು, ಮುಂದಿನ ಕೆಲವರ್ಷಗಳಲ್ಲಿ ಗ್ರಾಮೀಣ ಭಾಗಗಳಲ್ಲೂ 5ಜಿ ಸೇವೆ ದೊರಕುವಂತೆ ಮಾಡುತ್ತೇವೆ ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಮೊದಲ ಭಾಗವಾಗಿ ದೇಶದ 13 ನಗರಗಳಲ್ಲಿ 5ಜಿ ಸೇವೆ ಆರಂಭವಾಗುತ್ತಿದೆ. ಅಹಮದಾಬಾದ್, ಬೆಂಗಳೂರು, ಚಂಡೀಗಢ, ಚೆನ್ನೈ, ದೆಹಲಿ, ಗಾಂಧಿನಗರ, ಗುರುಗ್ರಾಮ್, ಹೈದರಾಬಾದ್, ಜಾಮ್ನಗರ, ಕೋಲ್ಕತ್ತಾ, ಲಕ್ನೋ, ಮುಂಬೈ ಮತ್ತು ಪುಣೆಯಲ್ಲಿ ಮೊದಲ ಹಂತದ 5ಜಿ ಸೇವೆ ಆರಂಭವಾಗಲಿದೆ. ಈ ನಗರಗಳಲ್ಲಿ ಆಯ್ದ ಕೆಲ ಪ್ರದೇಶಗಳಲ್ಲಿ ಜನರಿಗೆ 5ಜಿ ಸೇವೆ ದೊರಕುವ ಸಾಧ್ಯತೆ ಇದೆ.
While the 5G rollout is yet to happen, India is said to be working on the 6G services that could launch by end of 2030. Prime Minister Narendra Modi, while speaking at the Smart India Hackathon 2022 Grand Finale, said that the country is preparing to launch 6G services by the end of this decade.“Youth can work on new solutions to promote the use of drone technology in the agriculture and health sector. We are preparing to launch 6G by the end of this decade. The government is encouraging Indian solutions in gaming and entertainment.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm