ಬ್ರೇಕಿಂಗ್ ನ್ಯೂಸ್
29-08-22 06:33 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 29 : ತಾವು ವಿದ್ಯಾರ್ಥಿ ನಾಯಕರಾಗಿದ್ದಾಗ ಕಾಂಗ್ರೆಸ್ ಮುಖಂಡ ಶ್ರೀಕಾಂತ್ ಜಿಚ್ಕರ್ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್ ಸೇರುವಂತೆ ಕೇಳಿಕೊಂಡಿದ್ದರು. ಅದಕ್ಕೆ ನಾನು ಬಾವಿಗೆ ಹಾರಿ ಸಾಯುತ್ತೇನೆಯೇ ಹೊರತು ಕಾಂಗ್ರೆಸ್ಗೆ ಸೇರುವುದಿಲ್ಲ. ಏಕೆಂದರೆ ನನಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟವಿಲ್ಲ ಎಂದಿದ್ದೆ ಎಂಬುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಳೆಯ ಪ್ರಸಂಗವನ್ನು ನೆನಪಿಸಿಕೊಂಡಿದ್ದಾರೆ.
ಇತ್ತೀಚೆಗೆ ಬಿಜೆಪಿ ಸಂಸದೀಯ ಕಮಿಟಿಯಿಂದ ಹೊರಬಿದ್ದ ಬಳಿಕ ಗಡ್ಕರಿಯವರು ಮೋದಿ ಸರಕಾರ ಮತ್ತು ಬಿಜೆಪಿ ಬಗ್ಗೆ ಅಸಮಾಧಾನ ಇರುವಂತೆ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಉದ್ಯಮಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ನಿತಿನ್ ಗಡ್ಕರಿ, ವ್ಯಾಪಾರ, ಸಾಮಾಜಿಕ ಕೆಲಸ ಅಥವಾ ರಾಜಕೀಯದಲ್ಲಿರುವ ಯಾರಿಗಾದರೂ ಮಾನವನ ಸಂಬಂಧವೇ ದೊಡ್ಡ ಶಕ್ತಿಯಾಗಿದೆ. ಆದ್ದರಿಂದ, ಒಳ್ಳೆಯ ದಿನಗಳು ಅಥವಾ ಕೆಟ್ಟ ದಿನಗಳಲ್ಲಿ ಒಮ್ಮೆ ನೀವು ಯಾರದ್ದಾದರೂ ಕೈಯನ್ನು ಹಿಡಿದರೆ ಆ ಕೈಯನ್ನು ಯಾವಾಗಲೂ ಹಿಡಿದುಕೊಳ್ಳಿ ಎಂದು ಹೇಳಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ರಿಚರ್ಡ್ ನಿಕ್ಸನ್ ಅವರನ್ನೂ ಉಲ್ಲೇಖಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಒಬ್ಬ ವ್ಯಕ್ತಿಯು ಸೋತಾಗ ಅವನ ಕತೆ ಅಲ್ಲಿಗೇ ಮುಗಿಯುವುದಿಲ್ಲ. ಆದರೆ, ಆತ ಸೋತ ಮೇಲೆ ಇನ್ನಾಗದು ಎಂದು ಕೈಚೆಲ್ಲಿದಾಗ ಆತನ ಕತೆ ಅಂತ್ಯ ಕಾಣುತ್ತದೆ ಎಂಬ ಅಮೆರಿಕಾದ ಮಾಜಿ ಅಧ್ಯಕ್ಷ ರಿಚರ್ಡ್ ನಿಕ್ಸನ್ ಅವರ ಆತ್ಮಚರಿತ್ರೆಯ ವಾಕ್ಯವನ್ನು ಯುವ ಉದ್ಯಮಿಗಳು ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.
ಇತ್ತೀಚೆಗೆ ಗಡ್ಕರಿಯವರು ಬಿಜೆಪಿ ಅಧಿಕಾರಕ್ಕೆ ಬರಲು ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ ಅಡ್ವಾಣಿ ಮತ್ತು ದೀನದಯಾಳ್ ಉಪಾಧ್ಯಾಯ ಮಾಡಿದ ಕೆಲಸಗಳು ಕಾರಣ ಎಂದು ಹೇಳಿ ಚರ್ಚೆಗೆ ಗ್ರಾಸವಾಗಿದ್ದರು. ಮುಂಬೈನಲ್ಲಿ 1980ರ ಬಿಜೆಪಿ ಸಮಾವೇಶದಲ್ಲಿ ವಾಜಪೇಯಿ ಭಾಷಣವನ್ನು ನಾನು ಕೇಳಿದ್ದೆ. ಅಟಲ್ ಜಿ ಅವರು ‘ಅಂಧೇರಾ ಛಟೇಗಾ, ಸೂರಜ್ ನಿಕ್ಲೇಗಾ, ಕಮಲ ಖಿಲೇಗಾ’ (ಕತ್ತಲು ಮಾಯವಾಗುತ್ತದೆ, ಸೂರ್ಯ ಹೊರಬರುತ್ತಾನೆ ಮತ್ತು ಕಮಲ ಅರಳುತ್ತದೆ) ಎಂದು ಹೇಳಿದ್ದರು. ಆ ದಿನ ಅಟಲ್ ಭಾಷಣ ಕೇಳಿದವರೆಲ್ಲರೂ ಇಂತಹ ದಿನ ಬರುತ್ತದೆ ಎಂದು ಆಗಲೇ ನಂಬಿದ್ದರು. ಅಟಲ್ ಜಿ, ಅಡ್ವಾಣಿ ಜಿ, ದೀನದಯಾಳ್ ಉಪಾಧ್ಯಾಯ ಮತ್ತು ಅನೇಕ ಕಾರ್ಯಕರ್ತರು ಬಿಜೆಪಿ ಅಧಿಕಾರಕ್ಕೆ ಬರಲು ಅಗತ್ಯವಿರುವ ಕೆಲಸವನ್ನು ಮಾಡಿದ್ದಾರೆ ಎಂದು ನಿತಿನ್ ಗಡ್ಕರಿ ಹೇಳಿದ್ದರು.
Days after being dropped from the BJP Parliamentary Board, Union Minister Nitin Gadkari on Sunday said that he would rather jump into a well than join the Congress.Addressing a corporate event in Nagpur, Gadkari said, “I had an offer to join the Congress party from my friend and late Congress leader Shrikant Jichkar. I told him I will jump into a well but not join the Congress because I do not like the ideology of the Congress.”
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm