ಬ್ರೇಕಿಂಗ್ ನ್ಯೂಸ್
30-08-22 03:27 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 30: 2021ರಲ್ಲಿ ದೇಶದಲ್ಲಿ ಅತಿ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿರುವ ರಾಜ್ಯ ಮಹಾರಾಷ್ಟ್ರ. ಆತ್ಮಹತ್ಯೆ ಪ್ರಕರಣಗಳಲ್ಲಿ ತಮಿಳುನಾಡು ಮತ್ತು ಮಧ್ಯಪ್ರದೇಶ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಸುಸೈಡ್ ಪ್ರಕರಣದಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿದೆ. ಭಾರತದಾದ್ಯಂತ 1,64,033 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.
ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ (ಎನ್ಸಿಆರ್ಬಿ) ಇತ್ತೀಚಿನ ವರದಿ ಪ್ರಕಾರ ಈ ಅಂಕಿ - ಅಂಶಗಳು ಬಹಿರಂಗವಾಗಿವೆ. ವೃತ್ತಿ ಅಥವಾ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು, ಪ್ರತ್ಯೇಕತೆಯ ಭಾವನೆಗಳು, ನಿಂದನೆ, ಹಿಂಸಾಚಾರ, ಕೌಟುಂಬಿಕ ಸಮಸ್ಯೆಗಳು, ಮಾನಸಿಕ ಅಸ್ವಸ್ಥತೆ, ಮದ್ಯದ ಚಟ ಮತ್ತು ಆರ್ಥಿಕ ನಷ್ಟಗಳು ದೇಶದಲ್ಲಿ ಆತ್ಮಹತ್ಯೆ ಘಟನೆಗಳಿಗೆ ಪ್ರಮುಖ ಕಾರಣಗಳಾಗಿವೆ.
ಭಾರತದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣ: 2020 ರಲ್ಲಿ ಭಾರತದಲ್ಲಿ ಒಟ್ಟು 1,53,052 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಆದರೆ, 2021 ರಲ್ಲಿ ಒಟ್ಟು 1,64,033 ಪ್ರಕರಣಗಳು ದಾಖಲಾಗಿವೆ ಎಂದು ವರದಿ ಹೇಳಿದೆ. ಆತ್ಮಹತ್ಯೆ ಪ್ರಮಾಣ ಶೇ.6.2ರಷ್ಟು ಹೆಚ್ಚಾಗಿದೆ ಎಂದು ಎನ್ಸಿಆರ್ಬಿ ತಿಳಿಸಿದೆ. ಎನ್ಸಿಆರ್ಬಿ 2021 ವರದಿಯ ಪ್ರಕಾರ, ಮಹಾರಾಷ್ಟ್ರದಲ್ಲಿ 22,207 ಆತ್ಮಹತ್ಯೆಗಳು ವರದಿಯಾಗಿವೆ.
ಇದರ ನಂತರ ತಮಿಳುನಾಡು 18,925, ಮಧ್ಯಪ್ರದೇಶ 14,965, ಪಶ್ಚಿಮ ಬಂಗಾಳ 13,500 ಮತ್ತು ಕರ್ನಾಟಕ ರಾಜ್ಯದಲ್ಲಿ ಸುಮಾರು 13,056 ಪ್ರಕರಣಗಳು ದಾಖಲಾಗಿವೆ. ಶೇಕಡಾವಾರು ನೋಡೊದಾದ್ರೆ ಮಹಾರಾಷ್ಟ್ರ ಶೇ 13.5, ತಮಿಳುನಾಡು ಶೇ11.5, ಮಧ್ಯಪ್ರದೇಶ ಶೇ9.1, ಪಶ್ಚಿಮ ಬಂಗಾಳ ಶೇ 8.2 ಮತ್ತು ಕರ್ನಾಟಕ ಶೇ 8 ನಷ್ಟಿದೆ.
ಯೋಗಿ ರಾಜ್ಯದಲ್ಲಿ ಕಡಿಮೆ ಪ್ರಕರಣ ದಾಖಲು :
ಈ ಐದು ರಾಜ್ಯಗಳು ದೇಶದಲ್ಲಿ ವರದಿಯಾದ ಒಟ್ಟು ಆತ್ಮಹತ್ಯೆ ಪ್ರಕರಣಗಳಲ್ಲಿ 50.4 ಪ್ರತಿಶತವನ್ನು ಹೊಂದಿವೆ. ಉಳಿದ 49.6 ಪ್ರತಿಶತ ಪ್ರಕರಣಗಳು ಇತರ 23 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳು ಹಂಚಿಕೊಂಡಿವೆ. ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾದ ಉತ್ತರ ಪ್ರದೇಶವು ತುಲನಾತ್ಮಕವಾಗಿ ಕಡಿಮೆ ಸಂಖ್ಯೆಯ ಆತ್ಮಹತ್ಯೆ ಪ್ರಕರಣಗಳನ್ನು ದಾಖಲಿಸಿದೆ.
Maharashtra reported the highest number of suicides in 2021, a year that saw 1,64,033 such cases across India, according to the National Crime Records Bureau (NCRB) report. According to this report, there has been an increase of 7.2 percent in the cases of suicide in the year 2021 as compared to 2020. At the same time, the suicide rate has increased by 6.2 percent this year.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm