ಬ್ರೇಕಿಂಗ್ ನ್ಯೂಸ್
01-09-22 04:16 pm HK News Desk ದೇಶ - ವಿದೇಶ
ನವದೆಹಲಿ, ಸೆ.1: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಗ್ಗೆ ಸುಳಿವು ಕೊಟ್ಟವರಿಗೆ 25 ಲಕ್ಷ ರೂ. ನಗದು ಬಹುಮಾನವಾಗಿ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಘೋಷಿಸಿದೆ.
ಭೂಗತ ಪಾತಕಿ ದಾವೂದ್ ಹಾಗೂ ಆತನ ಸಹಚರರು ಭಾರತದಲ್ಲಿ ನಕಲಿ ಹಣ ಮಾರಾಟ ಹಾಗೂ ಡ್ರಗ್ಸ್, ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದಾರೆ. ಇದರ ಜೊತೆಗೆ ಪಾಕ್ ಏಜೆನ್ಸಿಗಳು ಹಾಗೂ ಭಯೋತ್ಪಾದಕ ಸಂಘಟನೆಗಳೊಂದಿಗೆ ಸೇರಿ ಆತ ಹಾಗೂ ಆತನ ಸಹಚರರು ಭಾರತದ ಮೇಲೆ ದಾಳಿಗಳನ್ನು ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಎನ್ಐಎ ಸಂಸ್ಥೆಯಿಂದ ಇಬ್ರಾಹಿಂ, ಆತನ ಸಹೋದರ ಅನೀಸ್ ಇಬ್ರಾಹಿಂ ಅಲಿಯಾಸ್ ಹಾಜಿ ಅನೀಸ್ ಹಾಗೂ ಆತನ ಸಹಾಯಕರಾದ ಛೋಟಾ ಶಕೀಲ್, ಜಾವೇದ್ ಪಟೇಲ್ ಅಲಿಯಾಸ್ ಜಾವೇದ್ ಚಿಕ್ನಾ, ಇಬ್ರಾಹಿಂ ಮುಷ್ತಾಕ್ ಅಬ್ದುಲ್ ರಜಾಕ್ ಮೆಮನ್ ಅಲಿಯಾಸ್ ಟೈಗರ್ ಮೆಮನ್ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನವನ್ನು ಘೋಷಿಸಿದೆ. ಇಬ್ರಾಹಿಂ ತಲೆಗೆ 25 ಲಕ್ಷ, ಛೋಟಾ ಶಕೀಲ್ ಸುಳಿವು ನೀಡಿದವರಿಗೆ 20 ಲಕ್ಷ, ಅನೀಸ್, ಚಿಕ್ನಾ ಹಾಗೂ ಮೆಮನ್ ಸುಳಿವು ನೀಡಿದವರಿಗೆ ತಲಾ 15 ಲಕ್ಷ ನಗದನ್ನು ಸಂಸ್ಥೆ ಘೋಷಿಸಿದೆ.
1993ರ ಮುಂಬೈ ಸರಣಿ ಸ್ಫೋಟ ಸೇರಿದಂತೆ ಭಾರತದಲ್ಲಿ ಅನೇಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ದಾವೂದ್ ಇಬ್ರಾಹಿಂ ತೊಡಗಿದ್ದ. 2003ರಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಆತನ ತಲೆಗೆ 25 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿತ್ತು. ದಾವೂದ್ ಭಾರತದ ಮೋಸ್ಟ್ ವಾಂಟೆಡ್ ವ್ಯಕ್ತಿಗಳಲ್ಲಿ ಒಬ್ಬನಾಗಿದ್ದು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಮುಖ್ಯಸ್ಥ ಹಫೀಜ್ ಸಯೀದ್, ಜೈಶ್-ಎ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮೌಲಾನಾ ಮಸೂದ್ ಅಜರ್, ಹಿಜ್ಬುಲ್ ಮುಜಾಹಿದೀನ್ ಸಂಸ್ಥಾಪಕ ಸೈಯದ್ ಸಲಾಹುದ್ದೀನ್ ಮತ್ತು ಆತನ ಆಪ್ತ ಸಹಾಯಕ ಅಬ್ದುಲ್ ರೌಫ್ ಅಸ್ಗರ್ನೊಂದಿಗೆ ಸಂಪರ್ಕ ಹೊಂದಿದ್ದು ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿದ್ದಾನೆ ಎನ್ನಲಾಗುತ್ತಿದೆ.
The National Investigation Agency has announced a cash reward of Rs 25 lakh for any information leading to the arrest of fugitive underworld don Dawood Ibrahim, a key accused in the 1993 Mumbai serial blasts, an official said on Thursday.The probe agency has also announced a cash reward of Rs 20 lakh on Ibrahim's close aide Shakeel Shaikh alias Chhota Shakeel, and Rs 15 lakh each on associates Haji Anees alias Anees Ibrahim Shaikh, Javed Patel alias Javed Chikna and Ibrahim Mushtaq Abdul Razzak Memon alias Tiger Memon, he said.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm