ಬ್ರೇಕಿಂಗ್ ನ್ಯೂಸ್
04-09-22 09:03 pm HK News Desk ದೇಶ - ವಿದೇಶ
ನವದೆಹಲಿ, ಸೆ.04: "ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದ್ವೇಷ ಬೆಳೆಯುತ್ತಿದೆ, ಬಿಜೆಪಿ ಮತ್ತು ಆರ್ಎಸ್ಎಸ್ ದೇಶವನ್ನು ವಿಭಜಿಸುತ್ತಿವೆ" ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ ಹೇಳಿದರು.
ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ನ ಮೆಗಾ ರ್ಯಾಲಿ ನಡೆಯುತ್ತಿದ್ದು, ವೇದಿಕೆಯಲ್ಲಿ ರಾಹುಲ್ ಗಾಂಧಿ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.

"ಜನರು ಅವರ ಭವಿಷ್ಯ, ಹಣದುಬ್ಬರ ಮತ್ತು ನಿರುದ್ಯೋಗದಿಂದ ಭಯಭೀತರಾಗಿದ್ದಾರೆ. ಬಿಜೆಪಿ ಅವರನ್ನು ದ್ವೇಷದ ಕಡೆಗೆ ತಿರುಗಿಸುತ್ತಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ದೇಶವನ್ನು ವಿಭಜಿಸುತ್ತಿವೆ" ಎಂದು ಹೇಳಿದರು. ಕಾಂಗ್ರೆಸ್ನಿಂದ ಮೆಹಂಗೈ ಪರ್ ಹಲ್ಲಾ ಬೋಲ್ ರ್ಯಾಲಿ ದೆಹಲಿಯಲ್ಲಿ ಬಿಗಿ ಭದ್ರತೆಯ ನಡುವೆ ನಡೆಯುತ್ತಿದ್ದು, ಭಾರೀ ಜನಸಮೂಹಕ್ಕೆ ಸಾಕ್ಷಿಯಾಗಿದೆ.

ಪ್ರಧಾನಿಯನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಸಂಸದರು "ಕೇವಲ ಇಬ್ಬರು ಉದ್ಯಮಿಗಳು ಸರ್ಕಾರದಿಂದ ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದರು. ದೇಶದ ವಿಮಾನ ನಿಲ್ದಾಣ, ಬಂದರು, ರಸ್ತೆಗಳು ಎಲ್ಲವನ್ನೂ ಈ ಇಬ್ಬರು ವ್ಯಕ್ತಿಗಳು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ" ಎಂದು ಆರೋಪಿಸಿದರು.

"ಪ್ರಧಾನಿಯವರ ವಿಚಾರಧಾರೆಯು ಇಬ್ಬರಿಗೆ ಮಾತ್ರ ಸವಲತ್ತುಗಳನ್ನು ನೀಡಬೇಕೆಂದು ಹೇಳುತ್ತದೆ, ದೇಶದ ಪ್ರಗತಿಯಿಂದ ಪ್ರತಿಯೊಬ್ಬರೂ ಪ್ರಯೋಜನ ಪಡೆಯಬೇಕು ಎಂದು ನಮ್ಮ ಸಿದ್ಧಾಂತ ಹೇಳುತ್ತದೆ. ಮೋದಿ ಸರ್ಕಾರವು ಉದ್ಯೋಗ ನೀಡಲು ಸಾಧ್ಯವಾಗುತ್ತಿಲ್ಲ ಮತ್ತು ಆಯ್ದ ಇಬ್ಬರು ದೊಡ್ಡ ಕೈಗಾರಿಕೋದ್ಯಮಿಗಳಿಗೆ ಮಾತ್ರ ಲಾಭ ನೀಡುತ್ತಿದೆ" ಎಂದು ದೂರಿದರು.

"ಈ ರೀತಿಯ ಬೆಲೆ ಏರಿಕೆಯನ್ನು ದೇಶ ಹಿಂದೆಂದೂ ನೋಡಿಲ್ಲ. ಸಾಮಾನ್ಯ ಜನರು ಬಹಳ ಕಷ್ಟದಲ್ಲಿದ್ದಾರೆ. ಚೀನಾದೊಂದಿಗಿನ ಉದ್ವಿಗ್ನತೆ, ಹಣದುಬ್ಬರ ಅಥವಾ ನಿರುದ್ಯೋಗ ಆಗಿರಬಹುದು, ಸಂಸತ್ತಿನಲ್ಲಿ ಈ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷಗಳಿಗೆ ಅನುಮತಿ ನೀಡುವುದಿಲ್ಲ" ಎಂದು ಆರೋಪಿಸಿದರು.

"ನರೇಂದ್ರ ಮೋದಿ ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದ್ದಾರೆ, ಅವರು ದ್ವೇಷವನ್ನು ಹರಡುತ್ತಿದ್ದಾರೆ. ಪಾಕಿಸ್ತಾನ ಮತ್ತು ಚೀನಾ ಇದರ ಲಾಭ ಪಡೆಯುತ್ತಿವೆ. ಕಳೆದ ಎಂಟು ವರ್ಷಗಳಲ್ಲಿ ಪ್ರಧಾನಿ ಮೋದಿ ಭಾರತವನ್ನು ದುರ್ಬಲಗೊಳಿಸಿದ್ದಾರೆ" ಎಂದರು.
LIVE: #महंगाई_पर_हल्ला_बोल_रैली | रामलीला मैदान, दिल्ली https://t.co/7Ut1zx0mgW
— Rahul Gandhi (@RahulGandhi) September 4, 2022
Accusing the Narendra Modi government of weakening India in the last eight years, Congress leader Rahul Gandhi on Sunday said that the grand old party along with other parties will defeat the ideology of the Bharatiya Janata Party (BJP) and the Rashtriya Swayamsevak Sangh (RSS).
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm