ಬ್ರೇಕಿಂಗ್ ನ್ಯೂಸ್
12-09-22 12:03 pm HK News Desk ದೇಶ - ವಿದೇಶ
ನವದೆಹಲಿ, ಸೆ.12: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದಕ ಸಂಘಟನೆಗಳ ಕೈವಾಡದ ಶಂಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ದೆಹಲಿ, ದೆಹಲಿ-ಎನ್ಸಿಆರ್, ಹರಿಯಾಣ ಮತ್ತು ಪಂಜಾಬ್ನ ಅನೇಕ ಸ್ಥಳಗಳಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಈ ಕುರಿತು ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದ್ದು, ಸ್ಥಳೀಯ ಪೊಲೀಸ್ ಪಡೆ ಸಹಾಯದೊಂದಿಗೆ ಎನ್ಐಎ ಏಕಕಾಲದಲ್ಲಿ ವಿವಿಧೆಡೆ ದಾಳಿ ನಡೆಸಿರುವ ಫೋಟೊಗಳನ್ನು ಹಂಚಿಕೊಂಡಿದೆ.
ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಭಯೋತ್ಪಾದಕ ನಂಟಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು. ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ಸಂಚುಕೋರ ಎನ್ನಲಾಗಿದ್ದು, ಸದ್ಯ ಜೈಲಿನಲ್ಲಿದ್ದಾನೆ. ಬಿಷ್ಣೋಯಿ ಸಹಚರ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ತಾನೇ ಕೃತ್ಯ ಎಸಗಿದ್ದಾಗಿ ಹೇಳಿಕೊಂಡಿದ್ದ. ಈ ಬಗ್ಗೆಯೂ ಆತನ ಪಾತ್ರವನ್ನು ಎನ್ಐಎ ತನಿಖೆ ನಡೆಸುತ್ತಿದೆ. ಮೇ 29ರಂದು ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದರು.
NIA Files Charge Sheet against 6 accused in the case related to targeted killing of Sarpanch of village, Adoora, Kulgam (RC-01/2022/NIA/JMU) pic.twitter.com/eR9k1WAICH
— NIA India (@NIA_India) September 10, 2022
The National Investigation Agency (NIA) is conducting raids across 50 locations in Delhi, Haryana and Punjab in connection with suspected terror gangs linked to the killing of Punjabi singer Sidhu Moose Wala, sources said on Monday.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm