ಬ್ರೇಕಿಂಗ್ ನ್ಯೂಸ್
12-09-22 04:08 pm HK News Desk ದೇಶ - ವಿದೇಶ
ವಾರಣಾಸಿ, ಸೆ.11: ಗ್ಯಾನ್ವಾಪಿ ಮಸೀದಿ ಆವರಣದ ಹೊರ ಗೋಡೆಗಳಲ್ಲಿ ಇರುವ ಶೃಂಗಾರ ಗೌರಿ ಮೂರ್ತಿಗಳ ಪೂಜೆಗೆ ಅನುಮತಿ ನೀಡಬೇಕೆಂದು ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಈ ಮೂಲಕ ಹಿಂದೂಗಳ ಬೇಡಿಕೆಗೆ ಆರಂಭಿಕ ಗೆಲುವು ಲಭ್ಯವಾಗಿದೆ.
ವಾರಣಾಸಿ ಜಿಲ್ಲಾ ನ್ಯಾಯಾಧೀಶ ಎ. ಕೆ. ವಿಶ್ವೇಶ ಅವರು 1991ರ ಪೂಜಾ ಸ್ಥಳ ಕಾಯ್ದೆ ಇಲ್ಲಿ ಅನ್ವಯ ಆಗೋದಿಲ್ಲ ಎಂದಿದ್ದಾರೆ. ಈ ಮೂಲಕ, ಮುಸ್ಲಿ ಅರ್ಜಿದಾರರಿಗೆ ಭಾರೀ ಹಿನ್ನೆಡೆಯಾಗಿದೆ. ಹಿಂದೂ ಅರ್ಜಿದಾರರ ಅರ್ಜಿಯನ್ನು ವಜಾಗೊಳಿಸುವಂತೆ ಮುಸ್ಲಿಂ ಅರ್ಜಿದಾರರು ಮನವಿ ಮಾಡಿದ್ದರು. ಆದ್ರೆ, ನ್ಯಾಯಾಲಯ ಹಿಂದೂಗಳ ಪರ ತೀರ್ಪು ನೀಡಿದೆ. ಮುಸ್ಲಿಮರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.

ಏನಿದು ಪ್ರಕರಣ? ;
ಗ್ಯಾನ್ವಾಪಿ ಮಸೀದಿಯಲ್ಲಿ ಇರುವ ಶೃಂಗಾರ ಗೌರಿ ಪೂಜೆಗೆ ಅನುಮತಿ ನೀಡುವಂತೆ ಐವರು ಹಿಂದೂ ಮಹಿಳೆಯರು ವಾರಣಾಸಿ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ ಗ್ಯಾನ್ವಾಪಿ ಮಸೀದಿಯ ವಿಡಿಯೋ ಸರ್ವೆಗೆ ಆದೇಶ ನೀಡಿತ್ತು. ವಿಡಿಯೋ ಸರ್ವೆ ಸಂದರ್ಭದಲ್ಲಿ ಮಸೀದಿಯ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿತ್ತು. ಆದರೆ, ಶಿವಲಿಂಗವನ್ನು ಕೇವಲ ಕಾರಂಜಿ ಎಂದು ಮುಸ್ಲಿಂ ಪರ ವಕೀಲರು ವಾದಿಸಿದ್ದರು. ಅಷ್ಟೇ ಅಲ್ಲ, 1991ರ ಪೂಜಾ ಸ್ಥಳ ಕಾಯ್ದೆ ಅನ್ವಯ ಮಹಿಳೆಯರ ಅರ್ಜಿ ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ವಿಚಾರವಾಗಿ ಸಿವಿಲ್ ಕೋರ್ಟ್ನಲ್ಲಿ ವಿಚಾರಣೆ ಬೇಡ, ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿ ಎಂದು ನಿರ್ದೇಶನ ನೀಡಿತ್ತು. ಮೊದಲಿಗೆ ನ್ಯಾಯಾಲಯವು ಈ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಬೇಕೇ? ಬೇಡವೇ ಎಂಬ ಅರ್ಜಿಯನ್ನು ಇತ್ಯರ್ಥಪಡಿಸಿದೆ. ಹಿಂದೂ ಅರ್ಜಿದಾರ ಮಹಿಳೆಯರ ಅರ್ಜಿಯನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಸ್ವೀಕರಿಸಲು ತೀರ್ಮಾನಿಸಿದೆ. ಈ ಪ್ರಕರಣ ವಿಚಾರಣೆಗೆ ಅರ್ಹ ಎಂದಿದೆ. ಇದೇ ಸೆಪ್ಟೆಂಬರ್ 22 ರಿಂದ ಅರ್ಜಿ ವಿಚಾರಣೆ ಆರಂಭ ಆಗಲಿದೆ ಎಂದೂ ನ್ಯಾಯಾಲಯ ತಿಳಿಸಿದೆ. ಈ ಮೂಲಕ, ಹಿಂದೂಗಳಿಗೆ ಆರಂಭಿಕ ಗೆಲುವು ಲಭ್ಯವಾಗಿದೆ.
ಈ ನಡುವೆ ಹಿಂದೂ ಪರ ವಕೀಲರು ಗ್ಯಾನ್ವಾಪಿ ಮಸೀದಿಯಲ್ಲಿ ಸಿಕ್ಕಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಪರೀಕ್ಷೆಗೆ ಒಳಪಡಿಸುವಂತೆ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, ಪುರಾತತ್ವ ಸರ್ವೆಗೆ ಆದೇಶಿಸಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಾಗಿಯೂ ಹೇಳಿದ್ದಾರೆ.
Varanasi's seniormost judge is expected to decide today whether the court should continue hearing a case filed by five Hindu women seeking the right to worship inside the city's Gyanvapi mosque, located next to the famous Kashi Viswanath temple.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm