ಬ್ರೇಕಿಂಗ್ ನ್ಯೂಸ್
16-09-22 03:47 pm HK News Desk ದೇಶ - ವಿದೇಶ
ಚೆನ್ನೈ, ಸೆ.16 : ತಮಿಳುನಾಡಿನ ಬಿಜೆಪಿ ರಾಜ್ಯ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17ರಂದು ಜನಿಸುವ ಮಗುವಿಗೆ ಚಿನ್ನದ ಉಂಗುರ ನೀಡುವುದಾಗಿ ಘೋಷಿಸಿದೆ.
ಈ ಯೋಜನೆಗಾಗಿ ಚೆನ್ನೈ ನಗರದ ಆರ್ಎಸ್ಆರ್ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದ್ದು ಅಲ್ಲಿ ಸೆ.17ರಂದು ಜನಿಸುವ ಮಗುವಿಗೆ ಎರಡು ಗ್ರಾಮ್ ತೂಕದ ಚಿನ್ನದ ಉಂಗುರ ನೀಡಲಾಗುವುದು ಎಂದು ಕೇಂದ್ರದ ಮಾಹಿತಿ, ಪ್ರಸಾರ ಮತ್ತು ಮೀನುಗಾರಿಕೆ ರಾಜ್ಯ ಸಚಿವ ಎಲ್. ಮುರುಗನ್ ಮಾಹಿತಿ ನೀಡಿದ್ದಾರೆ. ಮಾಹಿತಿ ಪ್ರಕಾರ, ಸೆಪ್ಟೆಂಬರ್ 17 ರಂದು ಈ ಆಸ್ಪತ್ರೆಯಲ್ಲಿ 10ರಿಂದ 15 ಮಕ್ಕಳು ಜನಿಸುವ ನಿರೀಕ್ಷೆಯಿದೆ. ಮೋದಿ ಪರವಾಗಿ ವಿಶೇಷ ಉಡುಗೊರೆಯಾಗಿ ಉಂಗುರ ನೀಡಲಾಗುತ್ತಿದೆ.

ಪಕ್ಷದ ರಾಜ್ಯ ಘಟಕದ ವತಿಯಿಂದ ಮೋದಿಯವರ 72ನೇ ಜನ್ಮದಿನದ ಅಂಗವಾಗಿ 720 ಕೇಜಿ ಮೀನುಗಳನ್ನು ವಿತರಿಸಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರವನ್ನು ಆಯ್ಕೆ ಮಾಡಲಾಗಿದೆ. ಮೋದಿಗೆ 72 ವರ್ಷವಾಗುವುದರಿಂದ 720 ಕೆಜಿ ಮೀನುಗಳನ್ನು ಜನರಿಗೆ ವಿತರಿಸಲಾಗುವುದು ಎಂದವರು ತಿಳಿಸಿದ್ದಾರೆ.
ಮೋದಿ ಹುಟ್ಟಿದ ದಿನದ ಸಲುವಾಗಿ ದೇಶಾದ್ಯಂತ ಬಿಜೆಪಿ ವತಿಯಿಂದ ರಕ್ತದಾನ, ವೈದ್ಯಕೀಯ ಶಿಬಿರ ಹಮ್ಮಿಕೊಳ್ಳಲಾಗಿದೆ. ಇದರ ನಡುವೆ, ನವಜಾತ ಶಿಶುಗಳಿಗೆ ಮೋದಿ ಹೆಸರಲ್ಲಿ ಉಂಗುರ ನೀಡುತ್ತಿರುವುದು ಗಮನ ಸೆಳೆದಿದೆ.
The Tamil Nadu unit of the Bharatiya Janata Party (BJP) has decided to celebrate Prime Minister Narendra Modi’s birthday on September 17 (Saturday) by presenting gold rings to the newly borns and also distributing 720 kilograms of fish, among other plans.“We have identified the government RSRM hospital in Chennai and decided that all children born on the Prime Minister’s birthday will be given a gold ring,” minister of state in-charge of fisheries and information and broadcasting, L Murugan said on Thursday (September 15).
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm