ಬ್ರೇಕಿಂಗ್ ನ್ಯೂಸ್
20-09-22 03:33 pm HK News Desk ದೇಶ - ವಿದೇಶ
ನವದೆಹಲಿ, ಸೆ.20: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿದ್ದನ್ನು ವಿರೋಧಿಸಿ, ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಬೇಕೆಂದು ಪಟ್ಟು ಹಿಡಿಯುವಂತಾಗಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಎನ್ನುವ ಮೂಲಭೂತವಾದಿ ಸಂಘಟನೆ ಕಾರಣ. ಸಂಘಟನೆಯ ಪ್ರೇರಣೆಯಂತೆ ಉಡುಪಿ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು ಎಂದು ಕರ್ನಾಟಕ ಸರಕಾರದ ಪರವಾಗಿ ಸುಪ್ರೀಂ ಕೋರ್ಟಿಗೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ.
ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠದ ಮುಂದೆ ಹಿಜಾಬ್ ನಿಷೇಧ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ನಡೆಯುತ್ತಿದ್ದು, ಹಿಜಾಬ್ ಪರ ವಕೀಲರು ಮತ್ತು ಕರ್ನಾಟಕ ಸರಕಾರದ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಉಡುಪಿ ಸರಕಾರಿ ಹೆಣ್ಮಕ್ಕಳ ಪಿಯು ಕಾಲೇಜಿನಲ್ಲಿ 2013ರ ಮೇ 29ರಂದು ಸಮವಸ್ತ್ರ ಕಡ್ಡಾಯ ಎಂದು ನಿಮಯ ಮಾಡಲಾಗಿತ್ತು. ಹಿಜಾಬ್ ಸೇರಿದಂತೆ ಯಾವುದೇ ಇತರ ವಸ್ತ್ರಗಳ ಧಾರಣೆಗೆ ಅವಕಾಶ ಇರಲಿಲ್ಲ. ಕಾಲೇಜು ರೂಪಿಸುವ ಸಮವಸ್ತ್ರ ಅಷ್ಟೇ ಧರಿಸಬೇಕೆಂದು ನಿಯಮ ಮಾಡಲಾಗಿತ್ತು. ಕೋರ್ಟಿನಲ್ಲಿ ಪ್ರಶ್ನೆ ಮಾಡಿರುವ ಇದೇ ವಿದ್ಯಾರ್ಥಿನಿಯರು 2021ರಲ್ಲಿ ಕಾಲೇಜಿನ ನಿಯಮಕ್ಕೆ ಬದ್ಧರಾಗಿ ಪ್ರವೇಶ ಪಡೆದುಕೊಂಡಿದ್ದರು. 2022ರ ಆರಂಭದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಸೋಶಿಯಲ್ ಮೀಡಿಯಾದಲ್ಲಿ ಮುಸ್ಲಿಮರ ಹಕ್ಕುಗಳ ಹೆಸರಲ್ಲಿ ಭಾವನೆ ಕೆದಕುವ ಅಭಿಯಾನ ನಡೆಸಿತ್ತು.

ಉಡುಪಿ ಕಾಲೇಜಿನಲ್ಲಿ ಒಂದಷ್ಟು ವಿದ್ಯಾರ್ಥಿನಿಯರು ದಿಢೀರ್ ಆಗಿ ಹಿಜಾಬ್ ಬೇಕೆಂದು ಪ್ರತಿಭಟನೆ ನಡೆಸಿದ್ದರ ಹಿಂದೆ ಷಡ್ಯಂತ್ರ ಅಡಗಿತ್ತು. ವಿದ್ಯಾರ್ಥಿನಿಯರು ಪಿಎಫ್ಐ ಪ್ರೇರಣೆಯಿಂದ ಆ ರೀತಿ ಮಾಡಿದ್ದರು. ಅದೊಂದು ವ್ಯವಸ್ಥಿತ ರೀತಿಯ ತಂತ್ರಗಾರಿಕೆ. ಉಡುಪಿ ಕಾಲೇಜಿನ ಬೆಳವಣಿಗೆ ಗಮನಿಸಿ ಕರ್ನಾಟಕ ಸರಕಾರ ಫೆಬ್ರವರಿ 5ರಂದು ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ನೀಡಿತ್ತು. ಕಾಲೇಜು ಒಳಗೆ ಗಲಾಟೆ ಆಗಬಾರದು, ಶಾಂತಿ ಕದಡುವ ಕೆಲಸ ಆಗಬಾರದೆಂದು ಆ ರೀತಿ ಆದೇಶ ಮಾಡಲಾಗಿತ್ತು. ಹಾಗೆ ಮಾಡದೇ ಇರುತ್ತಿದ್ದರೆ, ಮತ್ತಷ್ಟು ವಿವಾದ, ಸಂಘರ್ಷಕ್ಕೆ ಕಾರಣವಾಗುತ್ತಿತ್ತು ಎಂದು ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದಾರೆ.
ಹಿಜಾಬ್ ಬಗ್ಗೆ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಮಾರ್ಚ್ 15ರಂದು ವಿದ್ಯಾರ್ಥಿನಿಯರ ಅರ್ಜಿ ವಜಾ ಮಾಡಿದ್ದ ಕೋರ್ಟ್, ಹಿಜಾಬ್ ಧರಿಸುವುದು ಇಸ್ಲಾಮಿನಲ್ಲಿ ಅವಿಭಾಜ್ಯ ಅಂಗವಲ್ಲ ಎಂದಿತ್ತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
The Karnataka government has told the Supreme Court that the student petitioners who challenged the hijab ban in the state government institutions were influenced by the radical outfit Popular Front of India (PFI).
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm