ಬ್ರೇಕಿಂಗ್ ನ್ಯೂಸ್
21-09-22 12:03 pm HK News Desk ದೇಶ - ವಿದೇಶ
ನವದೆಹಲಿ ಸೆ 21: ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್ (58) ಇಂದು ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ನಿಧನರಾದರು.
ಸ್ಟ್ಯಾಂಡ್-ಅಪ್ ಕಮೇಡಿಯನ್ ಆಗಿರುವ ರಾಜು ಶ್ರೀವಾಸ್ತವ್ ಆಗಸ್ಟ್ 10 ರಂದು ಜಿಮ್ನಲ್ಲಿ ದೈಹಿಕ ಕಸರತ್ತು ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ನಂತರ ರಾಜು ಅವರನ್ನು ಏಮ್ಸ್ಗೆ ದಾಖಲಿಸಲಾಗಿತ್ತು. ಆ ಬಳಿಕ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದರು. ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ರಾಜು ಶ್ರೀವಾಸ್ತವ್ ಅವರು ಕೊನೆಯುಸಿರೆಳಿದಿದ್ದಾರೆ.



![]()
ರಾಜು ಶ್ರೀವಾಸ್ತವ್ ಅವರು ತಮ್ಮ ಸಮಯೋಚಿತ ಹಾಸ್ಯ ಮತ್ತು ಕಾಮಿಕ್ ಟೇಕ್ಗಳ ಮೂಲಕ ಸ್ಟ್ಯಾಂಡ್-ಅಪ್ ಕಾಮಿಡಿ ಜಗತ್ತಿನಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು. 2005 ರಲ್ಲಿಮೊದಲ ಸೀಸನ್ ಪ್ರಥಮ ಪ್ರದರ್ಶನದೊಂದಿಗೆ 'ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್' ಎಂಬ ಮೊದಲ ಸ್ಟ್ಯಾಂಡ್-ಅಪ್ ಕಾಮಿಡಿ ಟ್ಯಾಲೆಂಟ್ ಹಂಟ್ ಶೋನೊಂದಿಗೆ ಅವರು ಖ್ಯಾತಿಯನ್ನು ಪಡೆದರು.


ಅವರು "ಮೈನೆ ಪ್ಯಾರ್ ಕಿಯಾ", "ಬಾಜಿಗರ್", "ಬಾಂಬೆ ಟು ಗೋವಾ" (ರೀಮೇಕ್) ಮತ್ತು "ಆಮ್ದಾನಿ ಅಥಾನಿ ಖರ್ಚಾ ರುಪೈಯಾ" ಮುಂತಾದ ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರು "ಬಿಗ್ ಬಾಸ್" ಸೀಸನ್ ಮೂರರಲ್ಲಿ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದರು. ಜೊತೆಗೆ ಅವರು ಉತ್ತರ ಪ್ರದೇಶ ಚಲನಚಿತ್ರ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದರು.
Raju Srivastava passed away today after being in the ICU for 41 days. The comedian-actor had suffered a heart attack while working out in the gym last month. The 58-year-old artiste is survived by his wife and two children.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm