ಬ್ರೇಕಿಂಗ್ ನ್ಯೂಸ್
23-09-22 11:58 am HK News Desk ದೇಶ - ವಿದೇಶ
ಕಾಸರಗೋಡು, ಸೆ.23: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖಂಡರನ್ನು ಎನ್ಐಎ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಕೇರಳದಲ್ಲಿ ಹರತಾಳಕ್ಕೆ
ಕರೆ ನೀಡಿದ್ದು ಹಲವೆಡೆ ಪಿಎಫ್ಐ ಕಾರ್ಯಕರ್ತರು ಕೆಎಸ್ಆರ್ಟಿಸಿ ಬಸ್ ಗಳಿಗೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಹೆಚ್ಚಿನ ಕಡೆ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ.
ದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ಬೆಂಬಲಿಸುತ್ತಿದ್ದಾರೆಂಬ ಆರೋಪದಲ್ಲಿ ದೇಶದ 15 ರಾಜ್ಯಗಳಲ್ಲಿ ಪಿಎಫ್ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿದ್ದು, 106 ಮಂದಿ ಪ್ರಮುಖ ನಾಯಕರನ್ನು ಬಂಧಿಸಲಾಗಿದೆ. ಪ್ರಮುಖವಾಗಿ ಪಿಎಫ್ಐ ಕೇರಳದಲ್ಲಿ ಬಲವಾದ ಬೇಸ್ ಹೊಂದಿರುವುದರಿಂದ ರಾಜ್ಯದಾದ್ಯಂತ ಹರತಾಳ ನಡೆಸಲು ಕರೆ ನೀಡಿದೆ. ಶುಕ್ರವಾರ ಆಗಿರುವುದರಿಂದ ಕೇರಳದಾದ್ಯಂತ ಪೊಲೀಸರನ್ನು ಅಲರ್ಟ್ ಇರುವಂತೆ ಸೂಚಿಸಲಾಗಿದೆ.


ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇರಳ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹರತಾಳದ ನಡುವೆಯೇ ಸರ್ಕಾರಿ ಸ್ವಾಮ್ಯದ ಕೆಎಸ್ಆರ್ಟಿಸಿ ತನ್ನ ಬಸ್ ಸೇವೆಗಳನ್ನು ಎಂದಿನಂತೆ ಮುಂದುವರಿಸುವುದಾಗಿ ಸರಕಾರ ಹೇಳಿತ್ತು. ಅದರಂತೆ ಬೆಳಗ್ಗೆ ಎಂದಿನಂತೆ ಬಸ್ ಓಡಾಟ ಆರಂಭಗೊಂಡಿತ್ತು. ಆದರೆ ಪಿಎಫ್ಐ ಕಾರ್ಯಕರ್ತರು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಜನರ ಸಂಚಾರವೂ ವಿರಳವಾಗಿದ್ದು ಕಾಸರಗೋಡು, ಕುಂಬಳೆ, ಉಪ್ಪಳದಲ್ಲಿ ಹೆಚ್ಚಿನ ಅಂಗಡಿಗಳು ಬಂದ್ ಆಗಿವೆ. ಆಟೋಗಳು ಮಾತ್ರ ಸಂಚಾರ ನಡೆಸುತ್ತಿವೆ. ಮಂಜೇಶ್ವರ, ಉಪ್ಪಳ, ಕಾಸರಗೋಡು ಮುಸ್ಲಿಂ ಪ್ರಾಬಲ್ಯ ಇರುವುದರಿಂದ ಸಮುದಾಯದ ಪ್ರಾಬಲ್ಯ ಇರುವ ಕಡೆ ಪೇಟೆಗಳು ಬಂದ್ ಪೂರ್ತಿಯಾಗಿವೆ. ಎಲ್ಲ ಕಡೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
In a massive nationwide crackdown against Popular Front of India (PFI), the National Investigation Agency (NIA) on Thursday raided properties linked to it. A total of 106 PFI leaders have been arrested so far from 11 states, including Uttar Pradesh, Kerala, Andhra Pradesh, Telangana, Karnataka and Tamil Nadu, for allegedly supporting terror activities in the country.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm