ಬ್ರೇಕಿಂಗ್ ನ್ಯೂಸ್
25-09-22 06:03 pm HK News Desk ದೇಶ - ವಿದೇಶ
ವಡೋದರಾ, ಸೆ.25: 'ಕಮಲ'ದ ಸುತ್ತ ಸಾಕಷ್ಟು 'ಕೆಸರು' ಮೆತ್ತಿಕೊಂಡಿದೆ. ಆ ಕೆಸರನ್ನು “ಕೈ”ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ. ಅದಕ್ಕೆ ಪೊರಕೆಯೇ ಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಿಜೆಪಿ ಮತ್ತು ಕಾಂಗ್ರೆಸಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಗುಜರಾತ್ ಚುನಾವಣೆಗೆ ಪ್ರಚಾರ ನಡೆಸುತ್ತಿರುವ ಕೇಜ್ರಿವಾಲ್, ಟೌನ್ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್ ಯುವ ಸಮುದಾಯದೊಂದಿಗೆ ಸಂವಾದ ನಡೆಸಿದರು. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಗುಜರಾತ್ನಲ್ಲಿ 80 ಶೇ. ಖಾಸಗಿ ಉದ್ಯೋಗಗಳನ್ನು ಗುಜರಾತಿಗಳಿಗೆ ಮೀಸಲು ಮಾಡುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಇದೇ ವೇಳೆ, ಬಿಜೆಪಿ ಆಡಳಿತದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 'ಕಮಲ'ದ ಸುತ್ತ ಸಾಕಷ್ಟು 'ಕೆಸರು' ಬಿದ್ದಿದೆ. ಆ ಕೆಸರನ್ನು ಬರೀಯ “ಕೈ”ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ. ಅದನ್ನು “ಪೊರಕೆ ” ಹಿಡಿದೇ ಸ್ವಚ್ಛ ಮಾಡಬೇಕಾಗುತ್ತದೆ. ಹೀಗೆಂದು ನಾನು ಹೇಳುತ್ತಿಲ್ಲ. ಬಿಜೆಪಿ ಸಚಿವರೊಬ್ಬರು ತಮ್ಮ ಕಾರ್ಯಕರ್ತರಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ ಎಂದು ಅದನ್ನು ತೋರಿಸಿದರು.
ಕಳೆದ ವಾರ ನಾವು ವಡೋದರಾದಲ್ಲಿ ಶಿಕ್ಷಣದ ಬಗ್ಗೆ ಸಂವಾದ ನಡೆಸಿದ್ದೇವೆ. ಬಿಜೆಪಿಯವರು ನಮಗೆ 13 ಹಾಲ್ಗಳನ್ನು ಸಿಗದಂತೆ ಮಾಡಿದ್ದಾರೆ. ಆಗ ನವನೀತ್ ಕಾಕಾ ಧೈರ್ಯವಾಗಿ ತಮ್ಮ ಸಭಾಂಗಣವನ್ನು ನಮಗೆ ನೀಡಿದ್ದರು. ನಿನ್ನೆ ಈ ಜನರು ಬುಲ್ಡೋಜರ್ ತೆಗೆದುಕೊಂಡು ನವನೀತ್ ಕಾಕಾ ಅವರ ಸಭಾಂಗಣವನ್ನು ಒಡೆಯಲು ಬಂದಿದ್ದರು. ಇದಕ್ಕಿಂತ ದೊಡ್ಡ ಅಪರಾಧ ಇನ್ನೇನಿದೆ? ಎಂದು ಕೇಜ್ರಿವಾಲ್ ಪ್ರಶ್ನಿಸಿದರು. ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
A group of people, mostly youths, greeted Delhi Chief Minister Arvind Kejriwal with chants of “Modi-Modi” outside Gujarat’s Vadodara airport as he landed earlier this week for a daylong campaign for his Aam Aadmi Party in the BJP-ruled state where polls are due later this year.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm