ಬ್ರೇಕಿಂಗ್ ನ್ಯೂಸ್
28-09-22 08:32 am HK News Desk ದೇಶ - ವಿದೇಶ
ನವದೆಹಲಿ, ಸೆ.28: ದೇಶಾದ್ಯಂತ ಎನ್ ಐಎ ಅಧಿಕಾರಿಗಳ ದಾಳಿ ಬೆನ್ನಲ್ಲೇ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಸೇರಿ ಎಂಟು ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆಗಳೆಂದು ಘೋಷಿಸಿದೆ.
ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ, ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಕೋಟ್ಯಂತರ ದೇಣಿಗೆ ಸಂಗ್ರಹ ಆರೋಪದಡಿ ದೇಶವ್ಯಾಪಿ ಎನ್ಐಎ ದಾಳಿ ನಡೆಸಿತ್ತು. ದಾಳಿ ಸಂದರ್ಭದಲ್ಲಿ ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದು ಸಾಬೀತಾಗಿದ್ದರಿಂದ ಯುಎಪಿಎ ಕಾಯ್ದೆಯಡಿ ಸಂಘಟನೆಗಳ ವಿರುದ್ಧ ಪ್ರಕರಣ ದಾಖಲಿಸಿತ್ತು.
ಪಾಪ್ಯುಲರ್ ಫ್ರಂಟ್ ಸಹವರ್ತಿ ಸಂಸ್ಥೆಗಳಾದ ರಿಹಾಬ್ ಇಂಡಿಯಾ ಫೌಂಡೇಶನ್(RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್(AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್(NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್, ಕೇರಳ ಇವುಗಳನ್ನು ನಿಷೇಧಿಸಲಾಗಿದೆ.
ಪಿಎಫ್ಐ ನಿಷೇಧಕ್ಕಾಗಿ ಒತ್ತಾಯಿಸಿ ರಾಜ್ಯಗಳಿಂದ ಬಂದಿದ್ದ ಶಿಫಾರಸು, ಕೇಂದ್ರೀಯ ತನಿಖಾ ಸಂಸ್ಥೆಗಳ ವರದಿ ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 22 ಮತ್ತು ಸೆಪ್ಟೆಂಬರ್ 27 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA), ಜಾರಿ ನಿರ್ದೇಶನಾಲಯ(ED) ಮತ್ತು ರಾಜ್ಯ ಪೊಲೀಸರು PFI ಕಚೇರಿ ಮತ್ತು ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿದ್ದರು. ಮೊದಲ ಸುತ್ತಿನಲ್ಲಿ 106 ಮಂದಿ ಪ್ರಮುಖ ನಾಯಕರನ್ನು ಬಂಧಿಸಲಾಗಿತ್ತು. ಎರಡನೇ ಹಂತದಲ್ಲಿ 247 ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿತ್ತು.
The Centre banned PFI and several other associated organisations for five years. In the notification, the Union home ministry said some PFI activists joined theIslamic State of Iraq and Syria and took part in terror activities there. In India, it engaged in violent acts like chopping off limb of a college professor, the MHA said.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm