ಬ್ರೇಕಿಂಗ್ ನ್ಯೂಸ್
09-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 09: ರಾಜ್ಯದಲ್ಲಿ ಒಂದೆಡೆ ಶಾಲೆ ಆರಂಭಿಸಲು ತಯಾರಿ ನಡೆಯುತ್ತಿದ್ದರೆ, ಇದೇ ವೇಳೆ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಹತ್ತು ಮಂದಿ ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬಳ್ಳಾರಿ ನಗರ ಭಾಗದಲ್ಲಿ ಐದು ಮತ್ತು ಗ್ರಾಮಾಂತರ ಭಾಗದಲ್ಲಿ ಐದು ಮಂದಿ ಸೋಂಕಿನಿಂದ ಸಾವು ಕಂಡಿರುವುದನ್ನು ಅಲ್ಲಿನ ಶಿಕ್ಷಣಾಧಿಕಾರಿಗಳು ದೃಢಪಡಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಬಳ್ಳಾರಿ ಜಿಲ್ಲೆಯಲ್ಲಿ ವಿದ್ಯಾಗಮ ಯೋಜನೆಯಡಿ ಶಿಕ್ಷಣ ಇಲಾಖೆಯಿಂದ ವಠಾರ ಶಾಲೆ ಆರಂಭಿಸಲಾಗಿತ್ತು.
ಇನ್ನು ಬಾಗಲಕೋಟೆ ಜಿಲ್ಲೆಯಲ್ಲೂ 17 ಜನ ಶಿಕ್ಷಕರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ವಿದ್ಯಾಗಮ ಯೋಜನೆಯಡಿ ವಠಾರ ಶಾಲೆ ಆರಂಭದ ನಂತರ ಆರು ಶಿಕ್ಷಕರು ಬಲಿಯಾಗಿದ್ದಾರೆ. ಯೋಜನೆ ಆರಂಭಕ್ಕೂ ಮುನ್ನ 11 ಜನ ಶಿಕ್ಷಕರು ಬಲಿಯಾಗಿದ್ದಾರೆ. ಐವತ್ತಕ್ಕೂ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದಾರೆ ಎಂದು ಶಿಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.


ಇನ್ನು ಬೆಳಗಾವಿಯಲ್ಲಿ ಕೊರೊನಾ ಸೋಂಕಿನಿಂದ 40ಕ್ಕೂ ಹೆಚ್ಚು ಶಿಕ್ಷಕರು ಬಲಿಯಾಗಿದ್ದಾರೆಂದು ಅಲ್ಲಿನ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ ಶೈಕ್ಷಣಿಕ ವಿಭಾಗದಲ್ಲಿ 21 ಹಾಗೂ ಚಿಕ್ಕೋಡಿ ವಿಭಾಗದಲ್ಲಿ 19 ಮಂದಿ ಬಲಿಯಾಗಿದ್ದಾರೆ. ಒಟ್ಟು 120 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಬಹುಪಾಲು ಶಿಕ್ಷಕರು ಗುಣಮುಖರಾಗಿದ್ದಾರೆ ಎಂದು ಬೆಳಗಾವಿ ಡಿಡಿಪಿಐ ಪುಂಡಲೀಕ್ ಮರಾಠೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಕಲಬುರಗಿಯಲ್ಲಿ 11 ಶಿಕ್ಷಕರು ಬಲಿಯಾಗಿದ್ದಾರೆಂದು ಶಿಕ್ಷಣ ಇಲಾಖೆಯಿಂದ ಮಾಹಿತಿ ಲಭಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಯಾವುದೇ ಶಿಕ್ಷಕರು ಬಲಿಯಾಗಿಲ್ಲ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಜಿ. ಮಲ್ಲೇಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಓರ್ವ ಶಿಕ್ಷಕಿ ಬಲಿಯಾಗಿದ್ದರೆ, ಕೋಲಾರದಲ್ಲಿ ಇಬ್ಬರು ಬಲಿಯಾಗಿದ್ದಾರೆ. ವಿದ್ಯಾಗಮ ಯೋಜನೆಯಡಿ ಶಿಕ್ಷಕರು ಆಸುಪಾಸಿನ ಪ್ರದೇಶಗಳಿಗೆ ತೆರಳಿ, ಪರಿಸರದ ವಿದ್ಯಾರ್ಥಿಗಳನ್ನು ಸೇರಿಸಿ ಪಾಠ ಮಾಡಲು ಸೂಚಿಸಲಾಗಿತ್ತು. ಗ್ರಾಮಾಂತರ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಇಂಥ ಯೋಜನೆ ಜಾರಿಯಾಗಿತ್ತು. ಇದೇ ಈಗ ಮುಳುವಾಯಿತಾ ಎನ್ನುವ ಲೆಕ್ಕಾಚಾರ ನಡೆದಿದೆ. ಆದರೆ, ಉತ್ತರ ಕರ್ನಾಟಕಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕದಲ್ಲಿ ಶಿಕ್ಷಕರು ಬಲಿಯಾಗಿದ್ದು ಕಡಿಮೆ.
100 Teachers have been dead so far after being tested positive to Coronavirus. The death rate is higher in Uttar Karnataka substantiates report.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm