ಬ್ರೇಕಿಂಗ್ ನ್ಯೂಸ್
30-09-22 06:43 pm HK News Desk ದೇಶ - ವಿದೇಶ
ನವದೆಹಲಿ, ಸೆ.30: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ತಿರುವನಂತಪುರ ಸಂಸದ ಶಶಿ ತರೂರ್, ದೇಶಾದ್ಯಂತ ಕಾರ್ಯಕರ್ತರು ನನಗೆ ಬೆಂಬಲ ನೀಡಿದ್ದಾರೆ. ಸ್ಪರ್ಧೆಯಿಂದ ಹಿಂದೆ ಸರಿದು ಕಾರ್ಯಕರ್ತರಿಗೆ ನಿರಾಶೆ ಮಾಡುವುದಿಲ್ಲ ಎಂದಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಪಕ್ಷದ ಭೀಷ್ಮ ಪಿತಾಮಹ ಎಂದು ಬಣ್ಣಿಸಿರುವ ಶಶಿ ತರೂರ್, ಅಧ್ಯಕ್ಷ ಸ್ಥಾನವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಯ್ಕೆ ಮಾಡುತ್ತಿರುವ ಏಕೈಕ ಪಕ್ಷವಾದ ಕಾಂಗ್ರೆಸ್ ನಲ್ಲಿ ಅಧ್ಯಕ್ಷ ಗಾದಿಗೆ ಸ್ಪರ್ಧಿಸಲು ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ. ನಮ್ಮಿಬ್ಬರ ಮಧ್ಯೆ ಸೌಹಾರ್ದ ಸ್ಪರ್ಧೆಯಷ್ಟೇ ನಡೆಯಲಿದೆ. ನಾನು ಖರ್ಗೆ, ದಿಗ್ವಿಜಯ್ ಸಿಂಗ್, ತ್ರಿಪಾಠಿ ಅವರನ್ನು ದೂರುವುದಕ್ಕೆ ಹೋಗಲ್ಲ. ನಾನು ನನ್ನ ಚಿಂತನೆಗಳನ್ನಷ್ಟೇ ಮುಂದಿಡುತ್ತೇನೆ. ಇಲ್ಲಿ ಯಾರೇ ವಿರೋಧಿಗಳು, ಪ್ರತಿಸ್ಪರ್ಧಿಗಳಲ್ಲ. ಅಗೌರವ ತೋರುವುದಿಲ್ಲ ಎಂದು ತರೂರ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವತ್ತ ದೂರದೃಷ್ಟಿ ಹೊಂದಿದ್ದೇನೆ. ದೇಶಾದ್ಯಂತ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದಾರೆ. ಸ್ಪರ್ಧೆಯಿಂದ ಹಿಂದೆ ಸರಿದು ಅವರನ್ನು ನಿರಾಶೆಗೊಳಿಸಲು ಬಯಸುವುದಿಲ್ಲ. ಪಕ್ಷದ ಕಾರ್ಯಕರ್ತರ ಧ್ವನಿಯಾಗಲು ಬಯಸುತ್ತೇನೆ. ಪಕ್ಷದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಬಯಸುವ ಮಂದಿ ನನಗೆ ಮತ ಹಾಕುವುದಿಲ್ಲ. ಯಾಕೆಂದರೆ, ನಾನು ಪಕ್ಷದಲ್ಲಿ ಬದಲಾವಣೆ ಆಗಲು ಬಯಸುತ್ತೇನೆ. ಇತ್ತೀಚಿನ ವರ್ಷಗಳಲ್ಲಿ ಅನುಭವಿಸುತ್ತಿರುವ ಸೋಲಿಗೆ ಉತ್ತರವಾಗಿ ವಿಭಿನ್ನವಾಗಿ ಪಕ್ಷವನ್ನು ಬಲಪಡಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಅಧ್ಯಕ್ಷ ಹುದ್ದೆಗೆ ಮಲ್ಲಿಕಾರ್ಜುನ ಖರ್ಗೆ, ಶಶಿ ತರೂರ್ ಅಲ್ಲದೆ, ಜಾರ್ಖಂಡಿನ ಮಾಜಿ ಸಚಿವ ಕೆ.ಎನ್ ತ್ರಿಪಾಠಿ ನಾಮಪತ್ರ ಸಲ್ಲಿಸಿದ್ದಾರೆ. ಹೈಕಮಾಂಡ್ ಬಲದಿಂದಾಗಿ ಮಲ್ಲಿಕಾರ್ಜುನ ಖರ್ಗೆ ಗೆಲ್ಲಲಿದ್ದಾರೆಂದೇ ಹೇಳಲಾಗುತ್ತಿದೆ. ಅಲ್ಲದೆ, ಖರ್ಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ದಂಡೇ ಜೊತೆಗಿತ್ತು. ಜಿ 23 ನಾಯಕರ ಗುಂಪಿನಲ್ಲಿದ್ದ ಆನಂದ ಶರ್ಮಾ, ಪೃಥ್ವಿರಾಜ್ ಚೌಹಾಣ್, ಮನೀಶ್ ತಿವಾರಿ, ಭೂಪಿಂದರ್ ಹೂಡಾ ಜೊತೆಗಿದ್ದುದು ವಿಶೇಷವಾಗಿತ್ತು.
Mallikarjun Kharge, Shashi Tharoor and K N Tripathi are the three men in the Congress presidential race for which nominations end on Friday with the veteran Kharge from Karnataka emerging a clear favourite.The 80-year-old Kharge, flanked by top Congress leaders, filed several sets of nomination papers with the proposers also including members from the G-23 ginger group comprising Anand Sharma, Prithviraj Chavan, Manish Tewari and Bhupinder Hooda.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm