ಬ್ರೇಕಿಂಗ್ ನ್ಯೂಸ್
03-10-22 01:10 pm HK News Desk ದೇಶ - ವಿದೇಶ
ಅಹ್ಮದಾಬಾದ್, ಅ.3 : ಗುಜರಾತ್ನಲ್ಲಿ ಅಧಿಕಾರಕ್ಕೆ ಬಂದರೆ, ಗೋವುಗಳನ್ನು ಸಾಕುವವರಿಗೆ ಒಂದು ಗೋವಿಗೆ ಪ್ರತಿ ದಿನ ರೂ. 40 ನೆರವು ನೀಡುವುದಾಗಿ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ. ಹಾಲು ಕರೆಯದ ಹಾಗೂ ಬೀಡಾಡಿ ಗೋವುಗಳಿಗಾಗಿ ಪ್ರತಿ ಜಿಲ್ಲೆಯಲ್ಲಿ ಗೋಶಾಲೆಯನ್ನು ನಿರ್ಮಿಸುವುದಾಗಿಯೂ ಭರವಸೆ ನೀಡಿದ್ದಾರೆ.
ಆಡಳಿತ ಪಕ್ಷ ಬಿಜೆಪಿಯ 'ಗೋ ಸಂರಕ್ಷಣೆ' ನೀತಿಗೆ ಅದೇ ದಾಟಿಯಲ್ಲೇ ತಿರುಗೇಟು ನೀಡಿದ ಕೇಜ್ರಿವಾಲ್, ಹಿಂದೂ ಮತಗಳನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂಬ ಅಭಿಪ್ರಾಯವೂ ಕೇಳಿಬಂದಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, 'ಗೋವುಗಳ ಸಂರಕ್ಷಣೆಗಾಗಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು' ಎಂದರು.
ಗೋಶಾಲೆಗಳ ಅಭಿವೃದ್ಧಿಗಾಗಿ ಗುಜರಾತ್ ಬಿಜೆಪಿ ಸರ್ಕಾರ ಹಣ ಮೀಸಲಿರಿಸಿದೆ. ಆದರೆ, ಈ ಹಣವನ್ನು ಬಿಡುಗಡೆ ಮಾಡಿಲ್ಲ. ಆದ್ದರಿಂದ ಗೋಶಾಲೆಯ ಮಾಲೀಕರು ರಾಜ್ಯದಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ, ಕೇಜ್ರಿವಾಲ್ ಅವರ ಈ ಘೋಷಣೆಗಳು ಮಹತ್ವ ಪಡೆದುಕೊಂಡಿದೆ.
ಯಾರು ಊಟಕ್ಕೆ ಕರೆದರೂ ಹೋಗುತ್ತೇನೆ
ಅಹಮದಾಬಾದ್ನ ಆಟೋ ಚಾಲಕರೊಬ್ಬರ ಮನೆಗೆ ಕೇಜ್ರಿವಾಲ್ ಅವರು ರಾತ್ರಿ ಊಟಕ್ಕೆ ಹೋಗಿದ್ದರು. ಆದರೆ, ಆ ಚಾಲಕ ಬಿಜೆಪಿ ಬೆಂಬಲಿಗ ಎಂದು ನಂತರ ತಿಳಿದುಬಂದಿತ್ತು. ಈ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, 'ವ್ಯಕ್ತಿಗಳನ್ನು ಅವರು ಬೆಂಬಲಿಸುವ ಪಕ್ಷದ ಆಧಾರದಲ್ಲಿ ನಾನು ತಾರತಮ್ಯ ಮಾಡುವುದಿಲ್ಲ. ಅವರು ನನ್ನ ಪಕ್ಷಕ್ಕೆ ಮತ ನೀಡಲಿ, ಬಿಡಲಿ. ಅದು ಅವರ ನಿರ್ಧಾರ. ಆದರೆ, ಯಾರೇ ನನ್ನನ್ನು ಮನೆಗೆ ಊಟಕ್ಕೆ ಕರೆದರೂ ಹೋಗುತ್ತೇನೆ' ಎಂದರು.
Delhi Chief Minister Arvind Kejriwal on Sunday promised Rs 40 per day for the upkeep of every cow in Gujarat and a shelter home for non-milching cattle in every district of the state if the Aam Aadmi Party is voted to power.The Aam Aadmi Party national convener also claimed that the BJP and opposition Congress have united to 'cut into the AAP votes' as according to an 'IB report,' his party will form the next government in the state.Kejriwal's announcement is a renewed push to counter the ruling BJP in Gujarat and attract Hindu voters, as per political experts.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm