ಬ್ರೇಕಿಂಗ್ ನ್ಯೂಸ್
19-10-22 02:57 pm HK News Desk ದೇಶ - ವಿದೇಶ
ನವದೆಹಲಿ, ಅ.19 : ಭಾರತೀಯ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಸುದೀರ್ಘ 24 ವರ್ಷಗಳ ಬಳಿಕ ದೇಶದ ಅತ್ಯಂತ ಹಳೆಯ ಪಕ್ಷಕ್ಕೆ ಗಾಂಧಿಯೇತರ ವ್ಯಕ್ತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅ.17ರಂದು ಅಧ್ಯಕ್ಷ ಹುದ್ದೆಗೆ ನಡೆದ ಚುನಾವಣೆಯಲ್ಲಿ ಖರ್ಗೆ ಪರವಾಗಿ 90 ಶೇ. ಮತಗಳು ಬಂದಿವೆ. ಖರ್ಗೆ ಪರವಾಗಿ 7897 ಮತಗಳು ಸಿಕ್ಕಿದರೆ, ಪ್ರತಿಸ್ಪರ್ಧಿ ಶಶಿ ತರೂರ್ ಪರವಾಗಿ 1072 ಮತ ಲಭಿಸಿದೆ. ಅಧಿಕೃತ ಫಲಿತಾಂಶ ಪ್ರಕಟವಾಗುವ ಮೊದಲೇ ರಾಹುಲ್ ಗಾಂಧಿ, ಖರ್ಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಪ್ರಕಟಿಸಿದರು.
ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ ಹತ್ತರಿಂದ ಮತ ಎಣಿಕೆ ನಡೆದಿದ್ದು ಮಧ್ಯಾಹ್ನ ಒಂದು ಗಂಟೆಗೆ ಫಲಿತಾಂಶ ಪಕ್ಕಾ ಆಗಿತ್ತು. ಒಟ್ಟು 9915 ಮತದಾರರಲ್ಲಿ 96 ಶೇ. ಮಂದಿ ಮತ ಚಲಾಯಿಸಿದ್ದರು. ತರೂರ್ ಮತ್ತು ಖರ್ಗೆ ತಾವು ಸ್ವತಂತ್ರ ಅಭ್ಯರ್ಥಿಗಳೆಂದೇ ಹೇಳಿಕೊಂಡಿದ್ದರು. ಆದರೆ ಖರ್ಗೆ ಗಾಂಧಿ ಕುಟುಂಬ ನಿಷ್ಠ ವ್ಯಕ್ತಿಯಾಗಿದ್ದರಿಂದ ಹೈಕಮಾಂಡ್ ಅಭ್ಯರ್ಥಿ ಎಂದೇ ಬಿಂಬಿಸಲಾಗಿತ್ತು.
ನಾಲ್ಕು ವರ್ಷಗಳ ಹಿಂದೆ ರಾಹುಲ್ ಗಾಂಧಿ ಪಕ್ಷದ ಸರಣಿ ಸೋಲಿನಿಂದಾಗಿ ಪಕ್ಷಾಧ್ಯಕ್ಷ ಹುದ್ದೆಯಿಂದ ಕೆಳಗಿಳಿದ ಬಳಿಕ ಸೋನಿಯಾ ಅವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿದಿದ್ದರು. ಮೂರು ವರ್ಷಗಳ ಹಂಗಾಮಿ ಅಧ್ಯಕ್ಷರ ಬಳಿಕ ಪೂರ್ಣಾವಧಿ ಅಧ್ಯಕ್ಷರ ಆಯ್ಕೆ ನಡೆದಿದೆ. ಸ್ವಾತಂತ್ರ್ಯ ಕಾಲದಿಂದಲೂ ಬಹುತೇಕ ಗಾಂಧಿ ಕುಟುಂಬದವರೇ ಅಧ್ಯಕ್ಷರಾಗಿ ಚುನಾವಣೆ ಇಲ್ಲದೆ ಆಯ್ಕೆಯಾಗುತ್ತ ಬಂದಿದ್ದರು. 1939ರಲ್ಲಿ ಮೊದಲ ಚುನಾವಣೆಯ ಬಳಿಕ ಆರು ಬಾರಿ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆದಿತ್ತು.
Congress leader Mallikarjun Kharge swept the party’s high-stakes presidential polls on Wednesday, paving the way for him to become the Congress’ first non-Gandhi president in over two decades. While Kharge received 7,897 of the total 9,385 votes, his opponent, Shashi Tharoor, trailed behind with 1,072 votes. Kharge will replace interim Congress chief Sonia Gandhi, who has been occupying the post ever since Rahul Gandhi stepped down after the 2019 Lok Sabha elections. Congratulating Kharge on his victory, Tharoor said he believed “the revival of the party begins today”.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm