ಬ್ರೇಕಿಂಗ್ ನ್ಯೂಸ್
11-10-20 05:48 pm Headline Karnataka News Network ದೇಶ - ವಿದೇಶ
ಬ್ಯಾಂಕಾಕ್, ಅಕ್ಟೋಬರ್ 11: ಧಾರ್ಮಿಕ ಸಮಾರಂಭಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ಸಿಗೆ ಸರಕು ರೈಲು ಡಿಕ್ಕಿ ಹೊಡೆದ ಪರಿಣಾಮ 20 ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಥೈಲ್ಯಾಂಡ್ನಲ್ಲಿ ನಡೆದಿದೆ.
ಇಂದು ಬೆಳಗ್ಗೆ ಪೂರ್ವ ಬ್ಯಾಂಕಾಕ್ನಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಚಾಚೊಂಗ್ಸಾವೋ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ನಾಲ್ವರು ಸ್ಥಿತಿ ಗಂಭೀರವಾಗಿದೆ ಮತ್ತು ಎಂಟು ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಛೋಂಬರಿ ಪ್ರಾಂತ್ಯದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 60 ಸಿಬ್ಬಂದಿ ಸಮುತ್ ಪ್ರಕಾನ್ ಪ್ರಾಂತ್ಯದ ಬೌದ್ಧ ದೇವಾಲಯವೊಂದಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರೈಲು ಬರುವ ಮುನ್ಸೂಚನೆಯಿದ್ದರೂ ಬಸ್ ಚಾಲಕ ಖ್ಲಾಂಗ್ ಕ್ವಾಂಗ್ ಕ್ಲಾನ್ ಜಿಲ್ಲೆಯ ನಿಲ್ದಾಣದ ಬಳಿ ರೈಲ್ವೆ ಕ್ರಾಸಿಂಗ್ ಮೇಲೆ ಹೋಗಿದ್ದಾನೆ. ಅಲ್ಲದೇ ಬರುತ್ತಿದ್ದ ರೈಲು ಹಾರ್ನ್ ಮಾಡಿದರೂ ಚಾಲಕ ಕೇಳಿಸಿಕೊಳ್ಳಲಿಲ್ಲ. ಪರಿಣಾಮ ವೇಗವಾಗಿ ಬಂದ ರೈಲು ಬಸ್ಸಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ 20 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮಾಡುತ್ತಿವೆ. ಬಸ್ಸಿನಡಿಯಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲಾಗುತ್ತಿದೆ. ಹೀಗಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.
A bus heading to a Buddhist temple collided with a train in central Thailand on Sunday, killing at least 20 people dead and injuring 30, authorities said.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm