ಬ್ರೇಕಿಂಗ್ ನ್ಯೂಸ್
26-10-22 01:54 pm HK News Desk ದೇಶ - ವಿದೇಶ
ನವದೆಹಲಿ, ಅ.26 : ಹಿರಿಯ ಮುತ್ಸದ್ಧಿ, ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕೃತವಾಗಿ ಪದಗ್ರಹಣ ಮಾಡಿದ್ದಾರೆ. ಎಐಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮೂರು ವರ್ಷಗಳಿಂದ ಹಂಗಾಮಿ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ, ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.
ಅತ್ಯಂತ ಹಳೆಯ ಪಕ್ಷ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿರುವ ಖರ್ಗೆ, ಮೊದಲ ಭಾಷಣದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿಪಕ್ಷವೇ ಇಲ್ಲದ ದೇಶವನ್ನು ಕಟ್ಟಲು ಹೊರಟಿದೆ. ಆದರೆ ಆ ಕನಸನ್ನು ಈಡೇರಿಸಲು ದೇಶದ ಜನತೆ ಬಿಡುವುದಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಬಿಜೆಪಿ ಸರ್ಕಾರ ನವ ಭಾರತದ ಬಗ್ಗೆ ಮಾತನಾಡುತ್ತಿದೆ. ಏನಿದು ನವ ಭಾರತ, ಇದರಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ದೇಶದಲ್ಲಿ ನಿರುದ್ಯೋಗಿಗಳು ಹೆಚ್ಚುತ್ತಿದ್ದಾರೆ. ರೈತರನ್ನು ಜೀಪಿನಡಿ ತುಳಿದು ಹಾಕಲಾಗುತ್ತಿದೆ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ, ದೌರ್ಜನ್ಯ ಮಾಡುವವರನ್ನು ಗೌರವಿಸಲಾಗುತ್ತಿದೆ. ಸುಳ್ಳುಗಳು ವಿಜೃಂಭಿಸುತ್ತಿವೆ ಎಂದು ಖರ್ಗೆ ಟೀಕಿಸಿದರು.
ಪಕ್ಷದಲ್ಲಿ ಅಧಿಕಾರ ಪಡೆದ ಸಂದರ್ಭ ಕಷ್ಟ, ಸವಾಲಿನದ್ದು ಎಂಬುದು ನನಗೆ ಗೊತ್ತು. ಆದರೆ ಇದಕ್ಕಾಗಿ ಅಂಜುವುದಿಲ್ಲ. ಕಾರ್ಯಕರ್ತರು ಎದೆ ಗುಂದುವ ಅಗತ್ಯವಿಲ್ಲ. ಈ ದೇಶಕ್ಕೆ ಪ್ರಜಾಪ್ರಭುತ್ವವನ್ನು ತಂದುಕೊಟ್ಟಿದ್ದು ಕಾಂಗ್ರೆಸ್. ದೇಶವನ್ನು ಅಭಿವೃದ್ಧಿ ಶೀಲ ಗತಿಗೆ ಒಯ್ದಿದ್ದು ಕಾಂಗ್ರೆಸ್. ಸರಕಾರದ ಅಧೀನದಲ್ಲಿ ಅದೆಷ್ಟೋ ಕಂಪನಿಗಳನ್ನು ಹುಟ್ಟು ಹಾಕಿದ್ದು ಕಾಂಗ್ರೆಸ್. ಆಮೂಲಕ ದೇಶದ ಜನರಿಗೆ ಉದ್ಯೋಗ ಕೊಟ್ಟಿದ್ದು ಕಾಂಗ್ರೆಸ್. ಆದರೆ ಇವನ್ನೆಲ್ಲ ಅಳಿಸಿ ಹಾಕುವ, ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ.
ಭಾರತದ ರಾಜಕೀಯದಲ್ಲಿ ಸುಳ್ಳು ಮೇಲುಗೈ ಸಾಧಿಸುತ್ತದೆ ಮತ್ತು ಆಡಳಿತಗಾರರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವಲ್ಲಿ ತೊಡಗುತ್ತಾರೆ ಎಂದು ಯಾರು ಭಾವಿಸಿದ್ದರು? ಈ ಸುಳ್ಳು, ವಂಚನೆ ಮತ್ತು ದ್ವೇಷದ ವ್ಯವಸ್ಥೆಯನ್ನು ನಾವು ಮುರಿಯುತ್ತೇವೆ. ಅದಕ್ಕಾಗಿ ನಮ್ಮ ಕಾರ್ಯಕರ್ತರು ಸಿದ್ಧರಾಗುತ್ತಿದ್ದಾರೆ ಎಂದು ಖರ್ಗೆ ಹೇಳಿದರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತವು ದೇಶದ ಪರಮೋಚ್ಚ ಸಂವಿಧಾನದ ಸಿದ್ಧಾಂತವಾಗಿದೆ ಮತ್ತು ಕೋಟ್ಯಂತರ ದೇಶವಾಸಿಗಳು ಅದನ್ನು ಪೂರ್ಣ ಹೃದಯದಿಂದ ನಂಬುತ್ತಾರೆ. ಉದಯಪುರ ನವಸಂಕಲ್ಪ ಚಿಂತನ ಶಿಬಿರ ಪ್ರಣಾಳಿಕೆಯ ಪ್ರತಿಯೊಂದು ಅಂಶವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಖರ್ಗೆ ಭರವಸೆ ನೀಡಿದರು.
Senior Congress leader Mallikarjun Kharge has taken charge as Congress President, becoming the first non-Gandhi to hold the post in 24 years.Kharge, 80, was handed over the certificate of election at AICC headquarters by Sonia Gandhi on Wednesday.In his first address as Congress chief, Kharge congratulated all delegates who voted for him in the party polls.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm