ಬ್ರೇಕಿಂಗ್ ನ್ಯೂಸ್
30-10-22 09:10 pm HK News Desk ದೇಶ - ವಿದೇಶ
ನವದೆಹಲಿ, ಅ.30 :ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್ ನಗರದಲ್ಲಿ ಹಬ್ಬದ ಆಚರಣೆಗಾಗಿ ಲಕ್ಷಾಂತರ ಜನ ಸೇರಿದ್ದ ವೇಳೆ ಕಾಲ್ತುಳಿತ ಉಂಟಾಗಿದ್ದು 150ಕ್ಕೂ ಹೆಚ್ಚು ಮಂದಿ ಸಾವು ಕಂಡಿದ್ದಾರೆ.
ಸಿಯೋಲ್ನ ಇಟಾವೊನ್ ಎಂಬ ಪ್ರದೇಶದ ಕಿರಿದಾದ ಗಲ್ಲಿಯಲ್ಲಿ ಹ್ಯಾಲೋವೀನ್ ಹಬ್ಬವನ್ನು ಆಚರಿಸಲು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು. 20ರ ಆಸುಪಾಸಿನ ಹದಿಹರೆಯದ ಯುವಕರೇ ಹೆಚ್ಚು ಇದ್ದರು. ಶನಿವಾರ ರಾತ್ರಿ ಹಬ್ಬದ ನಡುವಲ್ಲೇ ನೂಕುನುಗ್ಗಲು ಉಂಟಾಗಿದೆ. ಕಿರಿದಾದ ಗಲ್ಲಿಯಲ್ಲಿ ಕಾಲ್ತುಳಿತ ಸಂಭವಿಸಿದ್ದರಿಂದ ಹಲವಾರು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದವರನ್ನು ಅಗ್ನಿಶಾಮಕ ದಳದವರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅನೇಕರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ದಕ್ಷಿಣ ಕೊರಿಯಾದಲ್ಲಿ ದಶಕಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಘಟನೆ ಇದಾಗಿದೆ.
ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಸ್ಥಗಿತಗೊಂಡಿದ್ದ ಹ್ಯಾಲೋವೀನ್ ಹಬ್ಬ ಎರಡು ವರ್ಷಗಳ ನಂತರ ಪ್ರಾರಂಭಗೊಂಡಿತ್ತು. ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿ ಜನರು ಜಮಾಯಿಸಿದ್ದರು. ದಕ್ಷಿಣ ಕೊರಿಯಾ ಸರ್ಕಾರ ಇತ್ತೀಚೆಗಷ್ಟೆ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿತ್ತು. ಮೃತರಲ್ಲಿ 19 ಮಂದಿ ವಿದೇಶಿಗರಾಗಿದ್ದು, ಇರಾನ್, ಉಜ್ಬೇಕಿಸ್ತಾನ್, ಚೀನಾ ಮತ್ತು ನಾರ್ವೆ ದೇಶದವರು ಎನ್ನಲಾಗುತ್ತಿದೆ.
At least 151 people were killed and over 100 were injured in a stampede at a prominent market in South Korea's capital Seoul, where a massive crowd had gathered for Halloween.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm