ಬ್ರೇಕಿಂಗ್ ನ್ಯೂಸ್
04-11-22 04:30 pm HK News Desk ದೇಶ - ವಿದೇಶ
ನವದೆಹಲಿ, ನ.4 : ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಿಸಲು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ನ.4ರಿಂದಲೇ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿದ್ದರೆ, 50 ಪರ್ಸೆಂಟ್ ಸರಕಾರಿ ನೌಕರರು ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು ಸರ್ಕಾರವು ವಾಹನಗಳ ನಿಯಂತ್ರಣಕ್ಕೂ ಕ್ರಮ ಕೈಗೊಂಡಿದೆ. ಇದರ ನಡುವೆಯೇ ಮುಂದಿನ ಆದೇಶದ ವರೆಗೆ ದೆಹಲಿಯ ಎಲ್ಲ ಪ್ರಾಥಮಿಕ ಶಾಲೆಗಳನ್ನು ಮುಚ್ಚುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ. ಇದಲ್ಲದೆ ಉನ್ನತ ವರ್ಗದ ವಿದ್ಯಾರ್ಥಿಗಳ ಹೊರಾಂಗಣ ಚಟುವಟಿಕೆಗಳಿಗೂ ಕಡಿವಾಣ ಹಾಕಲಾಗಿದೆ. ತೀವ್ರ ವಾಯು ಮಾಲಿನ್ಯದ ಕಾರಣ ಜನಜೀವನ ದುಸ್ತರಗೊಂಡಿದ್ದು ಸರಕಾರ, ಆಡಳಿತದ ವಿರುದ್ಧ ಹಿಡಿಶಾಪ ಹಾಕಿದ್ದಾರೆ.
ವಾಯು ಮಾಲಿನ್ಯಕ್ಕೆ ಪಂಜಾಬ್ ಭಾಗದಲ್ಲಿ ರೈತರು ಹೊಲಗಳನ್ನು ಬೆಂಕಿಯಿಟ್ಟು ಸುಡುವುದು ಕಾರಣ ಎನ್ನಲಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಕೇಂದ್ರ, ರಾಜ್ಯ ಸರಕಾರಗಳು ತುರ್ತು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಆದರೆ ಈ ಹೇಳಿಕೆಗೆ ಗರಂ ಆಗಿರುವ ಕೇಜ್ರಿವಾಲ್, ರಾಜಕೀಯ ಅಥವಾ ಟೀಕೆ ಮಾಡಲು ಇದು ಸಮಯವಲ್ಲ ಎಂದಿದ್ದಾರೆ.
ಇದಲ್ಲದೆ, ಎಲ್ಲ ರೀತಿಯ ವಾಣಿಜ್ಯ ಮಾದರಿಯ ವಾಹನಗಳು, ಟ್ರಕ್, ಲಾರಿಗಳ ಸಂಚಾರವನ್ನು ನಿಷೇಧಿಸಿದೆ. ರಸ್ತೆ, ಫ್ಲೈ ಓವರ್ ಕಾಮಗಾರಿಗಳನ್ನೂ ನಿರ್ಬಂಧಿಸಲಾಗಿದೆ. ಸರಕಾರಿ ನೌಕರರಿಗೆ ನೀಡಿದಂತೆ ಖಾಸಗಿ ಕಂಪನಿಗಳು ಕೂಡ 50 ಶೇಕಡ ಸಿಬಂದಿಯನ್ನು ಮನೆಯಿಂದಲೇ ದುಡಿಸಿಕೊಳ್ಳುವಂತೆ ಸರಕಾರ ನಿರ್ದೇಶನ ನೀಡಿದೆ.
ಇದೇ ವೇಳೆ, ದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರವಾಗಿದ್ದರಿಂದ ವಕೀಲರೊಬ್ಬರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಮುಖ್ಯ ನ್ಯಾಯಾಧೀಶ ಯುಯು ಲಲಿತ್ ಅವರಲ್ಲಿ ತುರ್ತು ಪರಿಗಣಿಸುವಂತೆ ಕೋರಿದ್ದಾರೆ. ಕೋರ್ಟ್, ನ.10ರಂದು ಈ ಬಗ್ಗೆ ವಿಚಾರಣೆ ನಡೆಸುವುದಾಗಿ ಹೇಳಿದೆ.
Primary schools in Delhi will be closed from tomorrow, Chief Minister Arvind Kejriwal announced on Friday as air pollution in the city worsened.The CM also said that the govt is contemplating on having odd even scheme to check the pollution. Schools will remain open for secondary and highest secondary students, but no outdoor activities will be permitted. Addressing the press conference, Delhi CM Arvind Kejriwal and Punjab CM Bhagwant Mann took responsibility for the excessive stubble burning that has led to a decline in air quality over the last few days.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm