ಬ್ರೇಕಿಂಗ್ ನ್ಯೂಸ್
06-11-22 09:42 pm HK News Desk ದೇಶ - ವಿದೇಶ
ನವದೆಹಲಿ, ನ.6: ಆರು ರಾಜ್ಯಗಳಲ್ಲಿ ಏಳು ವಿಧಾನಸಭೆ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಪೈಕಿ ಬಿಜೆಪಿ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿದೆ.
ಹರಿಯಾಣದ ಆದಂಪುರ, ಉತ್ತರಪ್ರದೇಶದ ಗೋಲ ಗೋಕರ್ಣನಾಥ ಮತ್ತು ಬಿಹಾರದ ಗೋಪಾಲ್ಗಂಜ್ ಕ್ಷೇತ್ರದಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದ್ದು, ಬಿಹಾರದ ಮೊಕಾಮಾ ಕ್ಷೇತ್ರವನ್ನು ಆರ್ಜೆಡಿ ಉಳಿಸಿಕೊಂಡಿದೆ.
ಒಡಿಶಾದ ಧಾಮ್ನಗರ ವಿಧಾನಸಭಾ ಕ್ಷೇತ್ರದಲ್ಲಿಯೂ ಬಿಜೆಪಿ ಗೆದ್ದುಕೊಂಡಿದ್ದು, ಆಡಳಿತಾರೂಢ ಬಿಜೆಡಿಯನ್ನು 9,881 ಮತಗಳಿಂದ ಸೋಲಿಸಿದೆ. ಹೈ ವೋಲ್ಟೇಜ್ ಕದನವಾಗಿ ಮಾರ್ಪಾಡಾಗಿದ್ದ ತೆಲಂಗಾಣದ ಮುನುಗೋಡು ಉಪ ಚುನಾವಣೆಯಲ್ಲಿ ಆಡಳಿತಾರೂಢ ಟಿಆರ್ಎಸ್ ಗೆಲುವು ಸಾಧಿಸಿದ್ದು, ಬಿಜೆಪಿ ತೀವ್ರ ಪೈಪೋಟಿ ನೀಡಿ ಸೋಲು ಕಂಡಿದೆ. ಜಿದ್ದಾಜಿದ್ದಿನ ಕದನದಲ್ಲಿ ಟಿಆರ್ಎಸ್ ಅಭ್ಯರ್ಥಿ ಕೂಸುಕುಂಟ್ಲ ಪ್ರಭಾಕರ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಕೋಮಾಟಿರೆಡ್ಡಿ ರಾಜಗೋಪಾಲ್ ರೆಡ್ಡಿ 11,666 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.
ಮಹಾರಾಷ್ಟ್ರದ ಅಂಧೇರಿ ಪೂರ್ವದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣದ ಅಭ್ಯರ್ಥಿ ರುತುಜಾ ಲಟ್ಕೆ ಅವರು ಗೆಲುವು ಸಾಧಿಸಿದ್ದಾರೆ. ಈ ಎಲ್ಲ 7 ಕ್ಷೇತ್ರಗಳಿಗೂ ನವೆಂಬರ್ 3 ರಂದು ಮತದಾನ ನಡೆದಿತ್ತು.
BJP candidate Bhavya Bishnoi has emerged victorious in the Adampur Assembly byelection with a significant margin of 16,606 votes. In Gola Gokarannath, BJP candidate Aman Giri won by defeating his nearest rival and Samajwadi Party candidate by over 34,000 votes, news agency PTI reported. The saffron party also retained Gopalganj constituency in Bihar. Meanwhile, the Rashtriya Janata Dal (RJD) retained the Mokama Assembly seat of Bihar. As the counting of votes progresses, BJP’s Suryabanshi Suraj is leading in Dhamnagar constituency. According to PTI, Rutuja Latke, the candidate of the Shiv Sena (Uddhav Balasaheb Thackeray), won the bypoll to Andheri (East) Assembly seat in Mumbai. TRS’ Kusukuntla Prabhakar Reddy is currently leading in Telangana’s Munugode.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm