ಬ್ರೇಕಿಂಗ್ ನ್ಯೂಸ್
08-11-22 04:52 pm HK News Desk ದೇಶ - ವಿದೇಶ
ನವದೆಹಲಿ, ನ.8: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ನವೆಂಬರ್ 19ರಂದು ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಪರಿಣಾಮವಾಗಿ ಎಟಿಎಂ ಸೇರಿದಂತೆ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 19ರಂದು ಮುಷ್ಕರದಲ್ಲಿ ಭಾಗಿಯಾಗುವಂತೆ ಎಐಬಿಇಎ ತನ್ನ ಸದಸ್ಯರಿಗೆ ಕರೆ ನೀಡಿರುವುದು ಗಮನಕ್ಕೆ ಬಂದಿದೆ ಎಂದು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ ತಿಳಿಸಿದೆ.
ಕಚೇರಿಗಳು ಮತ್ತು ಶಾಖೆಗಳಲ್ಲಿ ಬ್ಯಾಂಕಿಂಗ್ ಸೇವೆಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳುತ್ತೇವೆ. ಆದಾಗ್ಯೂ, ಮುಷ್ಕರ ತೀವ್ರಗೊಂಡಲ್ಲಿ ಸೇವೆಗಳಲ್ಲಿ ವ್ಯತ್ಯಯವಾಗಬಹುದು ಎಂದು ಬ್ಯಾಂಕ್ ಆಫ್ ಬರೋಡ ಹೇಳಿದೆ.
ಸೇವಾ ಭದ್ರತೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿ ಮತ್ತು ಒಕ್ಕೂಟದಲ್ಲಿ ಸಕ್ರಿಯರಾಗಿರುವ ಬ್ಯಾಂಕ್ ಉದ್ಯೋಗಿಗಳ ಮೇಲೆ ಹೆಚ್ಚುತ್ತಿರುವ ದಾಳಿಗಳನ್ನು ಖಂಡಿಸಿ ನವೆಂಬರ್ 19ರಂದು ಮುಷ್ಕರ ಹಮ್ಮಿಕೊಳ್ಳುವುದಾಗಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಈ ಹಿಂದೆ ಅಕ್ಟೋಬರ್ನಲ್ಲಿ ತಿಳಿಸಿದ್ದರು.
ನವೆಂಬರ್ 19 ಮೂರನೇ ಶನಿವಾರ. ಬ್ಯಾಂಕುಗಳು ಸಾಮಾನ್ಯವಾಗಿ ಮೊದಲ ಶನಿವಾರ ಮತ್ತು ಮೂರನೇ ಶನಿವಾರ ತೆರೆದಿರುತ್ತವೆ. ಮುಷ್ಕರದಿಂದಾಗಿ ಈ ತಿಂಗಳ ಮೂರನೇ ಶನಿವಾರದಂದು ನವೆಂಬರ್ 19 ರಂದು ಬ್ಯಾಂಕ್ ಕಾರ್ಯಾಚರಣೆಗಳು ಮತ್ತು ಎಟಿಎಂ ಸೇವೆಗಳು ವ್ಯತ್ಯಯಗೊಳ್ಳಲಿವೆ. ಮರುದಿನ ಭಾನುವಾರವಾದ್ದರಿಂದ ಬ್ಯಾಂಕ್ಗಳು ತೆರೆದಿರುವುದಿಲ್ಲ.
ಬ್ಯಾಂಕ್ ಗ್ರಾಹಕರು ಆನ್ಲೈನ್ ಸೇವೆಗಳನ್ನು ಬಳಸಬಹುದು. ನೀವು ಆನ್ಲೈನ್ ಬ್ಯಾಂಕಿಂಗ್, ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮತ್ತು UPI ಸೇವೆಗಳನ್ನು ಬಳಸಬಹುದು. ಈ ಎಲ್ಲಾ ಸೇವೆಗಳು 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತವೆ. ಬ್ಯಾಂಕಿಗೆ ಹೋಗುವ ಕೆಲಸವಿದ್ದರೆ ಮುಷ್ಕರವನ್ನು ಗಮನದಲ್ಲಿಟ್ಟುಕೊಳ್ಳಬೇಕು.
Banking services, including ATMs, are likely to be affected on November 19 as the All India Bank Employees' Association (AIBEA) have called for a nationwide strike while pressing for their demands.November 19 is the third Saturday of this month and banks remain open on first and third Saturday of every month. Banking institutions across India remain closed on the second and fourth Saturdays of every month.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm