ಬ್ರೇಕಿಂಗ್ ನ್ಯೂಸ್
08-11-22 10:26 pm HK News Desk ದೇಶ - ವಿದೇಶ
ಹೈದರಾಬಾದ್, ನ.8 : ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿರುವ ಬಗ್ಗೆ ವದಂತಿ ಹರಡಿದೆ. ಇದರ ಬೆನ್ನಲ್ಲೇ ಸಾನಿಯಾ ಮಾಡಿರುವ ಇನ್ಸ್ಟಾಗ್ರಾಂ ಪೋಸ್ಟ್, ಸ್ಟಾರ್ ದಂಪತಿ ನಡುವೆ ಬಿರುಕು ಎದ್ದಿರುವ ಸುದ್ದಿಯನ್ನು ಗಟ್ಟಿಯಾಗಿಸಿದೆ.
ಸಾನಿಯಾ ಇನ್ಸ್ಟಾಗ್ರಾಂ ಪೋಸ್ಟ್ ನಲ್ಲಿ ಬರೆದಿರುವ ಸಾಲುಗಳೇ ದಂಪತಿಯ ವಿರಸಕ್ಕೆ ಸಾಕ್ಷಿ ನೀಡಿದೆ. 'ಒಡೆದ ಹೃದಯಗಳು ಎಲ್ಲಿಗೆ ಹೋಗುತ್ತವೆ? ಅಲ್ಲಾನನ್ನು ಹುಡುಕಲು' ಎಂದು ಸಾನಿಯಾ ಮಾರ್ಮಿಕವಾಗಿ ಬರೆದುಕೊಂಡಿದ್ದಾರೆ. ಸಾನಿಯಾ ಪೋಸ್ಟ್ ವೈರಲ್ ಆಗುತ್ತಿದ್ದು ಇಬ್ಬರ ನಡುವಿನ ಸಂಬಂಧದ ಬಗ್ಗೆ ಇನ್ನಷ್ಟು ಚರ್ಚೆಯಾಗುತ್ತಿದೆ.
ಪಾಕಿಸ್ತಾನಿ ಆಟಗಾರನ ಮದುವೆಯಾಗುವುದಕ್ಕೆ ಆಕ್ಷೇಪ ಕೇಳಿಬಂದಿದ್ದರೂ, ಸಾನಿಯಾ ಅದನ್ನು ಲೆಕ್ಕಿಸದೆ 2010ರಲ್ಲಿ ಮದುವೆ ಆಗಿದ್ದರು. ದಂಪತಿಗೆ ಇಜಾನ್ ಮಿರ್ಜಾ ಮಲ್ಲಿಕ್ ಹೆಸರಿನ ಮಗನಿದ್ದಾನೆ. ಸದ್ಯ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಮಗ ಇಜಾನ್ಗೆ ಸಹ ಪೋಷಕರಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಇವರ ನಡುವೆ ಸರಿಯಿಲ್ಲ ಎನ್ನುವ ಸುದ್ದಿ ಹರಿದಾಡಿತ್ತು.
ಈ ನಡುವೆ, ಶೋಯೆಬ್ ಸಾನಿಯಾಗೆ ಮೋಸ ಮಾಡಿದ್ದಾರೆ ಎಂದು ಕೆಲವು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಸುದ್ದಿಗಳ ಬಗ್ಗೆ ಸಾನಿಯಾ ಆಗಲಿ ಅಥವಾ ಶೋಯೆಬ್ ಆಗಲಿ ಪ್ರತಿಕ್ರಿಯಿಸಿಲ್ಲ. ಇತ್ತೀಚೆಗೆ ಸಾನಿಯಾ ಇನ್ಸ್ಟಾಗ್ರಾಂನಲ್ಲಿ 'ಕಠಿಣ ದಿನಗಳು ಮತ್ತು ಒಡೆದ ಹೃದಯಗಳು' ಎಂದು ಬರೆದುಕೊಂಡಿದ್ದರು. ಅಲ್ಲಿಂದಾಚೆಗೆ ಇಬ್ಬರ ಬ್ರೇಕಪ್ ವದಂತಿ ಹರಡಲು ಆರಂಭವಾಗಿತ್ತು. ಈ ಮಧ್ಯೆ ಇಝಾನ್ ಜೊತೆಗಿನ ಮುದ್ದಾದ ಫೋಟೋವನ್ನು ಹಂಚಿಕೊಂಡಿದ್ದ ಸಾನಿಯಾ, ಕಠಿಣ ದಿನಗಳಲ್ಲಿ ನನ್ನನ್ನು ಪಡೆಯುವ ಕ್ಷಣಗಳು ಎಂದು ಬರೆದಿದ್ದರು. ಇಷ್ಟೇ ಅಲ್ಲದೆ, ಶೋಯೆಬ್ ಮತ್ತು ಸಾನಿಯಾ ಇತ್ತೀಚೆಗಷ್ಟೇ ದುಬೈನಲ್ಲಿ ಇಜಾನ್ನ ನಾಲ್ಕನೇ ಹುಟ್ಟುಹಬ್ಬವನ್ನು ಆಚರಿಸಿದ್ದರು. ಇದರ ನಂತರ ಪಾಕಿಸ್ತಾನದ ಕ್ರಿಕೆಟ್ ಕುರಿತ ಟಿವಿ ಶೋನಲ್ಲಿ ಭಾಗವಹಿಸಿದ್ದ ಮಲಿಕ್ ಗೆ ಸಾನಿಯಾ ಬಗ್ಗೆ ಪ್ರಶ್ನೆ ಮಾಡಲಾಗಿತ್ತು. ಸೂಕ್ತ ಉತ್ತರ ನೀಡದ ಕಾರಣ ಮಲಿಕ್, ಸಾನಿಯಾ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನುವ ಸುದ್ದಿ ಹರಡಿತ್ತು.
What happen @MirzaSania? 🥺
— YagyaSenl Yuliya (@Yugyasnl_YaIiya) November 8, 2022
:#SohaibMalik 💔💔💔💔💔 pic.twitter.com/dgM9E7stxC
It appears all is not well between Indian tennis star Sania Mirza and Pakistan cricketer Shoaib Malik. Rumour mills are abuzz that the celebrity couple, who have a son Izhaan Mirza Malik, is going through a rough patch in their marriage. Amid this, Sania’s cryptic post on Instagram further left her fans worried.Taking to Instagram stories, the tennis player shared a post that read “Where do broken hearts go. To find Allah.”
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm