ಬ್ರೇಕಿಂಗ್ ನ್ಯೂಸ್
10-11-22 11:43 am HK News Desk ದೇಶ - ವಿದೇಶ
ನವದೆಹಲಿ, ನ.10 : ಮುಸ್ಲಿಂ ಅಥವಾ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ.
ಮತಾಂತರಿತ ದಲಿತರಿಗೂ ಎಸ್ಸಿ- ಎಸ್ಟಿ ಮೀಸಲಾತಿಯ ಸೌಲಭ್ಯ ಸಿಗಬೇಕೆಂದು ಸುಪ್ರೀಂ ಕೋರ್ಟಿಗೆ ಸಲ್ಲಿಕೆಯಾಗಿದ್ದ ಅರ್ಜಿಗಳ ಬಗ್ಗೆ ವಿಚಾರಣೆ ನಡೆದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮೇಲಿನಂತೆ ಅಭಿಪ್ರಾಯ ಪಟ್ಟಿದೆ.
ದಲಿತ ಕ್ರಿಶ್ಚಿಯನ್ನರು ಅಥವಾ ಮುಸ್ಲಿಮರು ದಲಿತ ಹಿಂದೂಗಳಂತೆ ಅದೇ ದಮನಕಾರಿ ವಾತಾವರಣವನ್ನು ಅನುಭವಿಸಿದ್ದಾರೆ ಎಂದು ಸೂಚಿಸಲು ಯಾವುದೇ ಅಧಿಕೃತ ದತ್ತಾಂಶಗಳಿಲ್ಲ. ಆದ್ದರಿಂದ ಪರಿಶಿಷ್ಟ ಜಾತಿಗಳಿಗೆ ಅರ್ಹವಾದ ಪ್ರಯೋಜನಗಳನ್ನು ಮತಾಂತರಗೊಂಡವರು ಪಡೆಯುವುದಕ್ಕೆ ನಿರ್ದಿಷ್ಟ ಕಾರಣಗಳಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವ ದಲಿತ ಸಮುದಾಯಗಳ ಜನರಿಗೆ ಮೀಸಲಾತಿ ಮತ್ತು ಇತರ ಪ್ರಯೋಜನಗಳನ್ನು ವಿಸ್ತರಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸಲಾಗಿದೆ.
ಇದಲ್ಲದೆ, ಹಿಂದೂ, ಬೌದ್ಧ ಅಥವಾ ಸಿಖ್ ಧರ್ಮಕ್ಕೆ ಸೇರಿದ ಸಮುದಾಯಗಳಿಗೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಒದಗಿಸುವ 1950 ರ ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶವು ಅಸಾಂವಿಧಾನಿಕವಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟಿಗೆ ಸಲ್ಲಿಸಿದೆ.
The Central government has told the Supreme Court that there is no authentic data to suggest that Dalit Christians or Muslims have suffered the same oppressive environment like Dalit Hindus and, hence, cannot claim benefits which Scheduled Castes are entitled to [CPIL vs Union of India].Therefore, the Constitution (Scheduled Castes) Order of 1950, which provides for Scheduled Caste status to only communities belonging to Hindu, Buddhist or Sikh religion is not unconstitutional, the Centre submitted before the apex court.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm