ಬ್ರೇಕಿಂಗ್ ನ್ಯೂಸ್
24-11-22 06:42 pm HK News Desk ದೇಶ - ವಿದೇಶ
ಹೈದರಾಬಾದ್, ನ.24 : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ಅಪರಾಧ ಪ್ರಕ್ರಿಯೆಗಳ ಸಂಹಿತೆ(ಸಿಆರ್ ಪಿಸಿ) ಸೆಕ್ಷನ್ 41ಎ ಅಡಿಯಲ್ಲಿ ಹೊಸತಾಗಿ ನೋಟಿಸ್ ನೀಡುವಂತೆ ತೆಲಂಗಾಣದ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್ ಗುರುವಾರ ಆದೇಶ ಮಾಡಿದೆ.
ಈ ಕುರಿತ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವಿಜಯಸೇನ್ ರೆಡ್ಡಿ ನೇತೃತ್ವದ ಏಕಸದಸ್ಯ ಪೀಠ, ಅಡ್ವೊಕೇಟ್ ಜನರಲ್(ಎಜಿ) ಬಿ.ಎಸ್ ಪ್ರಸಾದ್ ಅವರಿಗೆ ಈ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ಪ್ರಸಾದ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್(ಎಎಜಿ) ಜೆ ರಾಮಚಂದರ್ ರಾವ್ ನ್ಯಾಯಾಲಯಕ್ಕೆ ಹಾಜರಾಗಿದ್ದು ಎಸ್ಐಟಿ ಮತ್ತು ದೆಹಲಿ ಪೊಲೀಸರ ಪ್ರಯತ್ನಗಳ ಹೊರತಾಗಿಯೂ ಸಂತೋಷ್ ವಿಚಾರಣೆಗೆ ಹಾಜರಾಗಲಿಲ್ಲ ಎಂದು ತಿಳಿಸಿದರು. ನವೆಂಬರ್ 20 ರಂದು ನವದೆಹಲಿಯ ಬಿಜೆಪಿ ಕಚೇರಿಗೆ ಸಮನ್ಸ್ ತಲುಪಿಸಲಾಗಿದೆ. ಆದರೂ ಆರೋಪಿ ಸಂತೋಷ್ ವಿಚಾರಣೆಗೆ ಹಾಜರಾಗಿಲ್ಲ. ವಿಚಾರಣೆಯಲ್ಲಿ ಪ್ರಮುಖ ಅಂಶವಾಗಿರುವ ಇಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಅಳಿಸಿ ಹಾಕಲು ಸಂತೋಷ್ ಉದ್ದೇಶಪೂರ್ವಕವಾಗಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ವಿಳಂಬ ಮಾಡುತ್ತಿದ್ದಾರೆ ಎಂದು ಅಟೋರ್ನಿ ಜನರಲ್ ವಾದಿಸಿದರು.
![]()
ಸಂತೋಷ್ ಅವರು ತಮ್ಮ ಮೊಬೈಲ್ ಸಾಧನದಿಂದ ಡೇಟಾವನ್ನು ಅಳಿಸಿದರೆ ಮತ್ತು ಮಹತ್ವದ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ ನಂತರ ಎಸ್ಐಟಿ ಮುಂದೆ ಹಾಜರಾಗುವುದು ನಿಷ್ಪ್ರಯೋಜಕವಾಗಲಿದೆ ಎಂದು ಎಎಜಿ ರಾವ್ ಕೋರ್ಟ್ ಗಮನಕ್ಕೆ ತಂದರು. ಈಗಾಗಲೇ ನ.21ರಂದು ವಿಚಾರಣೆಗೆ ಹಾಜರಾಗದೇ ಇರುವುದರಿಂದ ಎಸ್ಐಟಿ ತಂಡ ಸಂತೋಷ್ ಗೆ ಸಮನ್ಸ್ ಜಾರಿ ಮಾಡಿತ್ತು. ದೆಹಲಿ ಬಿಜೆಪಿ ಕಚೇರಿಗೆ ಸಮನ್ಸ್ ನೋಟಿಸ್ ನೀಡಲಾಗಿತ್ತು.
BJP general secretary (Organisation) B L Santhosh has been caught in the midst of a political battle between his party and the Telengana Rashtriya Samithy (TRS) led by Telengana chief minister K Chandrashekhar Rao.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm