ಬ್ರೇಕಿಂಗ್ ನ್ಯೂಸ್
28-11-22 12:12 pm HK News Desk ದೇಶ - ವಿದೇಶ
ಶ್ರೀನಗರ, ನ.28 : 24 ಗಂಟೆಯೊಳಗೆ ಸರ್ಕಾರಿ ನಿವಾಸ ಖಾಲಿ ಮಾಡಿ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಜಮ್ಮು ಕಾಶ್ಮೀರ ಸರ್ಕಾರ ನೋಟಿಸ್ ನೀಡಿದೆ.
ಮೆಹಬೂಬಾ ಮುಫ್ತಿ, ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಸರ್ಕಾರಿ ಬಂಗಲೆಯಲ್ಲಿ ವಾಸವಿದ್ದಾರೆ. ಇದನ್ನು ಖಾಲಿ ಮಾಡಬೇಕು ಎಂದು ಅವರಿಗೆ ಒಂದು ತಿಂಗಳ ಹಿಂದೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ಬಂಗಲೆ ಖಾಲಿ ಮಾಡದ ಕಾರಣ, ಇದೀಗ ಮತ್ತೆ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದ್ದು, 24 ಗಂಟೆಗಳ ಗಡುವು ನೀಡಲಾಗಿದೆ.
'24 ಗಂಟೆಯೊಳಗೆ ಬಂಗಲೆ ಖಾಲಿ ಮಾಡಲು ನಿಮಗೆ ನಿರ್ದೇಶಿಸಲಾಗಿದೆ. ಇದು ತಪ್ಪಿದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು' ಎಂದು ನೋಟಿಸ್ನಲ್ಲಿ ಹೇಳಲಾಗಿದೆ. ಬಂಗಲೆ ಖಾಲಿ ಮಾಡಲು ನನಗೆ ನೋಟಿಸ್ ನೀಡಲಾಗಿದೆ ಎಂದು ಮೆಹಬೂಬಾ ನವೆಂಬರ್ 20 ರಂದು ಹೇಳಿದ್ದರು.
ದೇಶದ ಎಲ್ಲಾ ರಾಜ್ಯಗಳಲ್ಲಿ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು ಅಥವಾ ಮಂತ್ರಿಗಳಿಗೆ ಸರ್ಕಾರಿ ಬಂಗಲೆಗಳನ್ನು ನೀಡಲಾಗುತ್ತದೆ. ಅಧಿಕಾರಾವಧಿ ಮುಗಿದ ಬಳಿಕ ಅದನ್ನು ತೆರವುಗೊಳಿಸಬೇಕು. ಆದರೆ ಜಮ್ಮು ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿಗಳಿಗೆ ಜೀವನ ಪರ್ಯಂತ ಸರ್ಕಾರಿ ಬಂಗಲೆ ನೀಡುವ ಕಾನೂನು ಇತ್ತು.
2019ರಲ್ಲಿ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಬಳಿಕ ಈ ನಿಯಮ ರದ್ದುಗೊಂಡಿತ್ತು. ಹೀಗಾಗಿ 2020ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲ್ಲ ಹಾಗೂ ಗುಲಾಂ ನಬಿ ಅಜಾದ್ ಈ ಮೊದಲೇ ಸರ್ಕಾರಿ ಬಂಗಲೆ ತೊರೆದಿದ್ದರು.
Former Jammu and Kashmir Chief Minister and Peoples Democratic Party chief Mehbooba Mufti has been served a notice to vacate the government quarter she is occupying in south Kashmir’s Anantnag District by the Jammu and Kashmir administration, officials said. The notice was served to the former CM on Saturday to vacate quarter number 7 at Housing Colony Khanabal within 24 hours.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm