ಬ್ರೇಕಿಂಗ್ ನ್ಯೂಸ್
05-12-22 11:14 am HK News Desk ದೇಶ - ವಿದೇಶ
ನವದೆಹಲಿ, ಡಿ.5: ಕಾಂಗ್ರೆಸ್ ಬಲವೃದ್ಧಿಗಾಗಿ ಜವಾಬ್ದಾರಿ ವಹಿಸಿಕೊಂಡವರು ಆಸಕ್ತಿಯಿಂದ ಕೆಲಸ ಮಾಡಬೇಕು. ಇಲ್ಲದಿದ್ದರೆ ಕೆಲಸ ಮಾಡುವವರಿಗೆ ಹುದ್ದೆ ಬಿಟ್ಟು ಕೊಡಬೇಕು. ಪಕ್ಷದ ಹುದ್ದೆಯಲ್ಲಿದ್ದ ಬಳಿಕ ಹೊಣೆ ಹೊತ್ತುಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಜಿಲ್ಲಾ ಘಟಕ ಮತ್ತು ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ದೆಹಲಿಯಲ್ಲಿ ಭಾನುವಾರ ನಡೆದ ಮೊದಲ ಪಕ್ಷದ ಸಂಚಾಲನ ಸಮಿತಿ ಸಭೆಯಲ್ಲಿ ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಪಕ್ಷದಲ್ಲಿ ಹೊಣೆಗಾರಿಕೆ ವಹಿಸಿಕೊಳ್ಳುವುದು ಮುಖ್ಯ ಎಂದವರು ಹೇಳಿದ್ದಾರೆ. ಜನರು ಅನುಭವಿಸುತ್ತಿರುವ ಸಮಸ್ಯೆಗಳು, ಅವುಗಳ ಪರವಾಗಿ ಯಾವ ರೀತಿ ಹೋರಾಟ ನಡೆಸಬೇಕು, ಮುಂದಿನ ಚುನಾವಣೆಗಳ ಬಗೆಗಿನ ಕಾರ್ಯತಂತ್ರ ಬಗ್ಗೆ 30ರಿಂದ 90 ದಿನಗಳ ಒಳಗಾಗಿ ನೀಲನಕ್ಷೆ ಸಲ್ಲಿಸುವಂತೆ ರಾಜ್ಯಗಳ ಪಕ್ಷದ ಉಸ್ತುವಾರಿಗಳಿಗೆ ಖರ್ಗೆ ತಾಕೀತು ಮಾಡಿದ್ದಾರೆ.
ಮುಂದಿನ ವರ್ಷ ಹಲವು ರಾಜ್ಯಗಳಲ್ಲಿ ವಿಧಾನಸಭೆ, 2024ರ ಎಪ್ರಿಲ್-ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸಂಘಟನೆಯಲ್ಲಿ ಹೊಣೆಗಾರಿಕೆಯನ್ನು ನಿಗದಿ ಮಾಡಬೇಕಾಗಿದೆ. ದೇಶ ಮತ್ತು ಪಕ್ಷದ ಬಲವರ್ಧನೆ ನಿಟ್ಟಿನಲ್ಲಿ ನಮ್ಮೆಲ್ಲರಿಗೆ ದೊಡ್ಡ ಹೊಣೆಗಾರಿಕೆ ಇದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡಬೇಕು. ಅದಕ್ಕೆ ಪೂರಕವಾಗಿ ಪಕ್ಷ ಸಂಘಟಿತವಾಗಬೇಕು. ಹೀಗಿದ್ದಾಗ ಮಾತ್ರ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಾಧ್ಯ. ಹೆಚ್ಚಿನ ಹೊಣೆಗಾರಿಕೆ ವಹಿಸಿ ಕೆಲಸ ಮಾಡುವವರಿಗೆ ಅವಕಾಶ ಕೊಡಬೇಕು. ಜವಾಬ್ದಾರಿಯುತ ಹುದ್ದೆಯಲ್ಲಿದ್ದು ಪಕ್ಷ ಸಂಘಟನೆಯತ್ತ ನಿರಾಸಕ್ತಿ ವಹಿಸಿದರೆ, ಅದನ್ನು ಒಪ್ಪಲು ಸಾಧ್ಯವೇ ಇಲ್ಲ. ಆಸಕ್ತಿಯಿಂದ ಪಕ್ಷಕ್ಕಾಗಿ ಕೆಲಸ ಮಾಡದಿದ್ದರೆ, ಕೆಲಸ ಮಾಡುವವರಿಗೆ ಅವಕಾಶ ನೀಡಿ ಎಂದು ಮುಖಂಡರಿಗೆ ಖರ್ಗೆ ಹೇಳಿದ್ದಾರೆ.
ರಾಜ್ಯ ನಾಯಕರು ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿದ್ದೀರಾ? ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕಾಗಿ ಜನರು ಹಾಗೂ ಮುಖಂಡರ ಜತೆಗೆ ಪರಾಮರ್ಶೆ ನಡೆಸಿದ್ದೀರಾ? ಅದರ ಪರಿಹಾರಕ್ಕಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸೂಚನೆ ನೀಡಿದಂತೆ ರಾಜ್ಯ, ಜಿಲ್ಲೆ ಮತ್ತು ಬ್ಲಾಕ್ ಮಟ್ಟದಲ್ಲಿ ಪ್ರತಿಭಟನೆ ಮಾಡಿದ್ದೀರಾ? ರಾಜ್ಯ ಮತ್ತು ರಾಷ್ಟ್ರೀಯ ವಿಚಾರಗಳಿಗಾಗಿ ಎಲ್ಲಿ ಮತ್ತು ಎಷ್ಟು ಪ್ರತಿಭಟನೆಗಳನ್ನು ನಡೆಸಲಾಗಿದೆ? ಜಿಲ್ಲೆ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳನ್ನು ರಚನೆ ಮಾಡಲಾಗಿದೆಯೇ? ಜನರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಅದರ ವಿರುದ್ಧ ಹೋರಾಟ ಮಾಡಲಾಗಿದೆಯೇ? ಪಕ್ಷದ ಸ್ಥಳೀಯ ಘಟಕಗಳಲ್ಲಿ ಹೊಸ ಮುಖಂಡರಿಗೆ ಅವಕಾಶ ನೀಡಲಾಗಿದೆಯೇ? ಐದು ವರ್ಷಗಳಲ್ಲಿ ಜಿಲ್ಲೆ, ಬ್ಲಾಕ್ ಮಟ್ಟದ ಪದಾಧಿಕಾರಿಗಳ ಮಟ್ಟದಲ್ಲಿ ಬದಲಾವಣೆ ಮಾಡಿಲ್ಲವೇ ಹೀಗೆ ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ.
ರಾಹುಲ್ ಬಳಿಕ ಪ್ರಿಯಾಂಕಾ ಹಾಥ್ ಜೋಡೊ ಯಾತ್ರೆ
ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆಗೆ ಭಾರೀ ಬೆಂಬಲ ಸಿಕ್ಕಿದ್ದು, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಬಂದಿದೆ. ಇದನ್ನು ಮುಂದುವರಿಸುವ ಸಲುವಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಜ.26ರ ಗಣರಾಜ್ಯೋತ್ಸವ ದಿನದಿಂದ 2 ತಿಂಗಳು ಮಹಿಳೆಯರಿಗಾಗಿ “ಹಾಥ್ ಸೆ ಹಾಥ್ ಜೋಡೋ’ ಎಂಬ ಅಭಿಯಾನ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಸಭೆಯ ಬಳಿಕ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ಫೆಬ್ರವರಿಯಲ್ಲಿ ಕಾಂಗ್ರೆಸ್ ಮಹಾಧಿವೇಶನ
ಮುಂದಿನ ಫೆಬ್ರವರಿ ತಿಂಗಳಲ್ಲಿ ಛತ್ತೀಸ್ಘಡ ರಾಜಧಾನಿ ರಾಯ್ಪುರದಲ್ಲಿ ಮೂರು ದಿನಗಳ ಕಾಲ ಪಕ್ಷದ ಮಹಾಧಿವೇಶನ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದರಲ್ಲಿ ಹಲವಾರು ರಾಜ್ಯಗಳ ವಿಧಾನಸಭೆ, ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.
ಚುನಾವಣೆಯತ್ತ ಗಮನ ಹರಿಸಿ
ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳಲ್ಲಿ ನಡೆಯಲಿದೆ. ಜತೆಗೆ ತ್ರಿಪುರಾ, ಮೇಘಾಲಯ, ನಾಗಾಲ್ಯಾಂಡ್, ಛತ್ತೀಸ್ಘಡ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ, ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಅದಕ್ಕಾಗಿ ಆಯಾ ರಾಜ್ಯಗಳಲ್ಲಿ ಪಕ್ಷದ ಬಲವರ್ಧನೆ ಬಗ್ಗೆ ಕಾರ್ಯತಂತ್ರ ರೂಪಿಸಲು ಕ್ರಮ ಕೈಗೊಳ್ಳಬೇಕು ಎಂದು ಖರ್ಗೆ ಮುಖಂಡರಿಗೆ ಸೂಚನೆ ನೀಡಿದ್ದಾರೆ.
Congress president Mallikarjun Kharge on Sunday strongly pitched for organisational accountability from top to bottom in the party, and said those unable to fulfil their responsibilities will have to make way for their colleagues.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm