ಬ್ರೇಕಿಂಗ್ ನ್ಯೂಸ್
08-12-22 10:10 am HK News Desk ದೇಶ - ವಿದೇಶ
ನವದೆಹಲಿ, ಡಿ.8: ದೇಶದ ಜನ ಭಾರೀ ನಿರೀಕ್ಷೆ ಇಟ್ಟುಕೊಂಡಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆ ಫಲಿತಾಂಶ ಇಂದು ಹೊರಬೀಳುತ್ತಿದೆ. ನಿರೀಕ್ಷೆಯಂತೆ ಗುಜರಾತಿನಲ್ಲಿ ಬಿಜೆಪಿ ಮತ್ತೆ ಕಮಾಲ್ ಮಾಡುವುದು ಖಚಿತವಾಗಿದೆ. ಬೆಳಗ್ಗೆ 9.45ರ ಸುಮಾರಿಗೆ ಹೊರಬಿದ್ದ ಫಲಿತಾಂಶದಲ್ಲಿ ಬಿಜೆಪಿ ಬರೋಬ್ಬರಿ 135 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 35 ಸ್ಥಾನಗಳಲ್ಲಿ ಮುನ್ನಡೆ ಹೊಂದಿದೆ. ಆಮ್ ಆದ್ಮಿ 9 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.
ಹಿಮಾಚಲ ಪ್ರದೇಶದಲ್ಲಿ ಅಚ್ಚರಿ ಎನ್ನುವಂತೆ ಕಾಂಗ್ರೆಸ್, ಬಿಜೆಪಿಯನ್ನು ಹಿಂದಿಕ್ಕಿ ಮುನ್ನುಗ್ಗುವ ಲಕ್ಷಣ ಕಂಡುಬಂದಿದೆ. ಇಲ್ಲಿ ಜಿದ್ದಾಜಿದ್ದಿನ ಪೈಪೋಟಿ ಎದುರಾಗಲಿದೆ ಎಂದು ಹೆಚ್ಚಿನ ಸಮೀಕ್ಷೆಗಳು ಹೇಳಿದ್ದವು. ಅದೇ ರೀತಿ, ಕಾಂಗ್ರೆಸ್ 36 ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದರೆ, ಬಿಜೆಪಿ 32 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಹೆಚ್ಚಿನ ಕ್ಷೇತ್ರಗಳಲ್ಲಿ ತೀರಾ ನಿಕಟ ಸ್ಪರ್ಧೆ ಏರ್ಪಟ್ಟಿದ್ದು, ಕಾಂಗ್ರೆಸ್- ಬಿಜೆಪಿ ನಡುವೆ ನೇರ ಪೈಪೋಟಿ ಉಂಟಾಗಿದೆ. ಹಿಮಾಚಲದಲ್ಲಿ ಆಮ್ ಆದ್ಮಿ ಪಕ್ಷ ಯಾವುದೇ ಖಾತೆ ತೆರೆಯುವ ಲಕ್ಷಣ ಕಂಡುಬಂದಿಲ್ಲ. ಇತರರು ನಾಲ್ಕು ಮಂದಿ ಮುನ್ನಡೆಯಲ್ಲಿದ್ದಾರೆ.
ಗುಜರಾತಿನಲ್ಲಿ ತಮ್ಮದೇ ಪಕ್ಷ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ತೋರಿದ್ದ ಆಮ್ ಆದ್ಮಿ ಪಕ್ಷವು ಕೆಲವೇ ಸ್ಥಾನಗಳಲ್ಲಿ ಮುನ್ನಡೆ ಹೊಂದಿದೆ. ಆದರೆ ಹೆಚ್ಚಿನ ಕಡೆ ಕಾಂಗ್ರೆಸ್ ಮತಗಳನ್ನು ಆಮ್ ಆದ್ಮಿ ಪಾರ್ಟಿ ಪಡೆದಿರುವುದರಿಂದ ಗುಜರಾತಿನಲ್ಲಿ ಬಿಜೆಪಿ ಇತಿಹಾಸದಲ್ಲೇ ಅತಿ ಹೆಚ್ಚು ಸ್ಥಾನಗಳನ್ನು ಪಡೆಯಲು ಕಾರಣ ಆಗುತ್ತಿದೆ. ಆಪ್ ಇಲ್ಲಿ ಸ್ಥಾನಗಳನ್ನು ಗೆಲ್ಲುವ ಬದಲು ಹೆಚ್ಚಿನ ಕಡೆ ಕಾಂಗ್ರೆಸನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಮೊದಲ ಚುನಾವಣೆಯಲ್ಲೇ ಆಪ್ ಪರವಾಗಿ ಜನರು ಹೆಚ್ಚು ಮತ ಚಲಾಯಿಸಿದ್ದು ಕಂಡುಬಂದಿದೆ. 15 ಶೇಕಡಾದಷ್ಟು ಮತದಾರರು ಆಪ್ ಪರ ಮತ ಚಲಾಯಿಸಿದ್ದಾರೆ. ಈ ಮೂಲಕ ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷ ಎಂಬ ಮಾನ್ಯತೆಯೂ ಸಿಗಲಿದೆ.
ಆಮ್ ಆದ್ಮಿಯ ಕಾರಣದಿಂದಾಗಿ ನಡುಕ ಹೊಂದಿದ್ದ ಬಿಜೆಪಿಗೆ ಈ ಚುನಾವಣೆಯಲ್ಲಿ ಮತ್ತಷ್ಟು ಲಾಭವಾಗಿದೆ. 2002ರಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಮೋದಿ 127 ಸ್ಥಾನಗಳನ್ನು ಪಡೆದು ಅತಿ ಹೆಚ್ಚು ಸ್ಥಾನ ಪಡೆದ ಇತಿಹಾಸ ನಿರ್ಮಿಸಿದ್ದರು. ಈ ಬಾರಿ ತ್ರಿಕೋನ ಸ್ಪರ್ಧೆಯಿಂದಾಗಿ ಬಿಜೆಪಿಗೆ ಲಾಭ ಆಗಿದ್ದು 135 ಸ್ಥಾನಗಳಲ್ಲಿ ಮುನ್ನಡೆ ಕಂಡಿರುವುದು 187 ಸದಸ್ಯಬಲದ ವಿಧಾನಸಭೆಯಲ್ಲಿ ಅಮೋಘ ಜಯಭೇರಿ ಸಾಧಿಸುವ ಲಕ್ಷಣ ತೋರಿಸಿದೆ. ಗುಜರಾತಿನಲ್ಲಿ ಈ ಹಿಂದಿಗಿಂತ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ ಎಂದು ಗೃಹ ಸಚಿವ ಅಮಿತ್ ಷಾ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಸಚಿವ ಅಮಿತ್ ಷಾ ಮಾತುಗಳು ಮತ್ತೆ ಸಾಬೀತಾಗುವ ಸಾಧ್ಯತೆ ಕಂಡುಬಂದಿದೆ. ಸೇತುವೆ ಕುಸಿತದಿಂದ 135 ಜನರು ಸಾವಿಗೀಡಾಗಿದ್ದ ಮೋರ್ಬಿ ಜಿಲ್ಲೆಯ ಮೂರು ಸೀಟುಗಳಲ್ಲಿ ಬಿಜೆಪಿಯೇ ಮುನ್ನಡೆ ಸಾಧಿಸಿದೆ.
BJP raced to its best-ever result in Gujarat, with the Aam Aadmi Party (AAP) cutting into Congress votes, as votes were counted today in two states. In Himachal Pradesh, the BJP and Congress are fighting a close contest.The BJP is ahead in 146 seats in Gujarat, Prime Minister Narendra Modi's home state. The Congress, which delivered a strong performance in the last election, is leading in 26 seats.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am