ಬ್ರೇಕಿಂಗ್ ನ್ಯೂಸ್
14-12-22 11:08 pm HK News Desk ದೇಶ - ವಿದೇಶ
ನವದೆಹಲಿ, ಡಿ.14 : ಮಹಾರಾಷ್ಟ್ರ- ಕರ್ನಾಟಕ ರಾಜ್ಯಗಳ ಗಡಿ ಸಂಘರ್ಷವನ್ನು ಸಾಂವಿಧಾನಿಕ ವಿಧಾನಗಳಿಂದ ಮಾತ್ರ ಇತ್ಯರ್ಥಗೊಳಿಸಬಹುದು, ಬೀದಿ ಘರ್ಷಣೆಗಳಿಂದಲ್ಲ. ಸದ್ಯಕ್ಕೆ ಎರಡೂ ರಾಜ್ಯಗಳಲ್ಲಿ ಶಾಂತಿ ಸೌಹಾರ್ದ ನೆಲೆಸಲು ಏನು ವ್ಯವಸ್ಥೆ ಆಗಬೇಕೋ ಅದನ್ನು ಕೈಗೊಳ್ಳಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ.
ದೆಹಲಿಯಲ್ಲಿ ಬುಧವಾರ ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಮತ್ತು ಏಕನಾಥ್ ಶಿಂಧೆ ಅವರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ ಅವರು, ಸಕಾರಾತ್ಮಕ ದೃಷ್ಟಿಕೋನ ಇಟ್ಟುಕೊಂಡು, ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ವ್ಯವಹರಿಸಬೇಕು. ಯಾವುದೇ ಕಾರಣಕ್ಕೂ ಪ್ರಚೋದನೆಗೆ ಒಳಗಾಗುವಂತೆ ಹೇಳಿಕೆ ನೀಡಬಾರದು ಎಂದು ಸೂಚಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಬರುವ ವರೆಗೂ ಉಭಯ ರಾಜ್ಯಗಳು ವಿವಾದಿತ ಪ್ರದೇಶ ನಮ್ಮದು ಎಂದು ಹೇಳುವಂತಿಲ್ಲ. ಗಡಿ ವಿವಾದವನ್ನು ಸಾಂವಿಧಾನಿಕ ವಿಧಾನಗಳಿಂದ ಚೌಕಟ್ಟಿನಲ್ಲಿ ಇತ್ಯರ್ಥಗೊಳಿಸಬಹುದೇ ವಿನಃ ಬೀದಿ ಘರ್ಷಣೆಗಳಿಂದಲ್ಲ ಎಂದು ಹೇಳಿದರು.
ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳು ರಾಜ್ಯದ ಗಡಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡುವ ವರೆಗೆ ತಮ್ಮ ಹಕ್ಕುಗಳನ್ನು ಒತ್ತಾಯಿಸದಿರಲು ಒಪ್ಪಿದ್ದಾರೆ. ಅಲ್ಲಿ ವರೆಗೂ ರಾಜ್ಯ ಸರ್ಕಾರಗಳು ಯಾವುದೇ ಹಕ್ಕು ಸಲ್ಲಿಸುವುದಿಲ್ಲ ಎಂಬ ಒಪ್ಪಂದ ಮಾಡಲಾಗಿದೆ ಎಂದು ಹೇಳಿದರು.
ಇದೇ ವೇಳೆ ಗಡಿ ವಿವಾದ ಕುರಿತು ಉಭಯ ರಾಜ್ಯಗಳ ತಲಾ ಮೂರು ಸಚಿವರನ್ನು ಒಳಗೊಂಡ ಸಮಿತಿ ರಚಿಸಲಾಗುವುದು ಎಂದು ಹೇಳಿದ ಅಮಿತ್ ಶಾ, 'ರಾಜ್ಯಗಳ ಗಡಿ ಸಮಸ್ಯೆಗಳನ್ನು ಪರಿಹರಿಸಲು ಮಹಾರಾಷ್ಟ್ರ ಮತ್ತು ಕರ್ನಾಟಕದ ಮಂತ್ರಿಗಳೊಂದಿಗೆ ಕೇಂದ್ರವು 6 ಸದಸ್ಯರ ತಂಡವನ್ನು ರಚಿಸಿದೆ. ಇದಲ್ಲದೆ, ಎರಡೂ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಪ್ರತ್ಯೇಕ ಐಪಿಎಸ್ ಅಧಿಕಾರಿಯನ್ನು ಇದಕ್ಕಾಗಿ ನೇಮಕ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
The Chief Minsters of Karnataka and Maharashtra have agreed not to press their claims in the decades-long state border dispute till the Supreme Court takes a call on the matter, Union Home Minister Amit Shah said today after a meeting with the two leaders. His meeting with Karnataka Chief Minister Basavaraj Bommai and Maharashtra Chief Minister Eknath Shinde was held amid a flare-up of the dispute that dates back to 1957.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am