ಬ್ರೇಕಿಂಗ್ ನ್ಯೂಸ್
17-12-22 04:21 pm HK News Desk ದೇಶ - ವಿದೇಶ
ಹೈದರಾಬಾದ್, ಡಿ.17 : ಮಧ್ಯರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಢನಿದ್ರೆಯಲ್ಲಿದ್ದ ಕುಟುಂಬವೊಂದರ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ.
ಗ್ರಾಮ ಕಂದಾಯ ಸಹಾಯಕ ಮಸುಶಿವಯ್ಯ (50) ಅವರ ಪತ್ನಿ ಪದ್ಮ (45), ಪದ್ಮ ಅವರ ಅಕ್ಕನ ಮಗಳು ಮೌನಿಕಾ (23) ಆಕೆಯ ಇಬ್ಬರು ಹೆಣ್ಣು ಮಕ್ಕಳಾದ ಹಿಮಬಿಂಧು, ಸ್ವೀಟಿ, ಸಂಬಂಧಿಕರಾದ ಶಾಂತಯ್ಯ ಸಜೀವಂತ ದಹನವಾಗಿದ್ದಾರೆ.
![]()
ರಾಮಕೃಷ್ಣಪುರ ಪೊಲೀಸ್ ಠಾಣೆ ವ್ಯಾಪ್ತಿಯ ವೆಂಕಟಾಪುರ ಗ್ರಾಮದಲ್ಲಿ ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಮನೆ ಬೆಂಕಿಯ ಕೆನ್ನಾಲಿಗೆಗಳಿಂದ ಉರಿಯುತ್ತಿರುವುದನ್ನು ಅಕ್ಕಪಕ್ಕದವರು ಗಮನಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿ ಶಾಮಕ ದಳ ಸ್ಥಳಕ್ಕಾಗಮಿಸಿದೆ. ಆ ವೇಳೆಗಾಗಲೇ ಇಡೀ ಮನೆ ಸಂಪೂರ್ಣ ಭಸ್ಮವಾಗಿದೆ. ಬೆಂಕಿ ನಂದಿಸಿ ಪರಿಶೀಲನೆ ನಡೆಸಿದಾಗ ಆರು ಮಂದಿ ಸುಟ್ಟು ಕರಕಲಾಗಿರುವುದು ಪತ್ತೆಯಾಗಿದೆ.

ಆ ಮನೆಯಲ್ಲಿ ಶಿವಯ್ಯ ಮತ್ತು ಪದ್ಮ ವಾಸವಿದ್ದರು. ಕಳೆದೆರಡು ದಿನಗಳ ಹಿಂದೆ ಮೌನಿಕಾ, ಆಕೆಯ ಮಕ್ಕಳು ಮತ್ತು ಸಂಬಂಧಿಕರು ಆಗಮಿಸಿದ್ದರು. ಬೆಂಕಿ ಹತ್ತಿದಾಗ ಎಲ್ಲರೂ ಮನೆಯಲ್ಲಿದ್ದು ಮೃತಪಟ್ಟಿದ್ದಾರೆ ಎಂದು ಮಂಚೇರಿಯಲ್ ವಿಭಾಗದ ಎಸಿಪಿ ತಿರುಪತಿರೆಡ್ಡಿ ತಿಳಿಸಿದ್ದಾರೆ.

ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ. ಬೆಂಕಿಗೆ ಕಾರಣವಾಗಿರುವ ಅಂಶಗಳು ಅನುಮಾನಸ್ಪದವಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ಅಖಿಲ್ ಮಹಾಜನ್ ತಿಳಿಸಿದ್ದಾರೆ.

ಬೆಂಕಿಯಿಂದ ಮನೆ ಹೊತ್ತಿ ಉರಿಯುತ್ತಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ದೃಶ್ಯ ಭೀಕರವಾಗಿದ್ದು, ಎದೆ ನಡುಗಿಸುವಂತಿದೆ. ಬಹುತೇಕ ಮರದ ವಸ್ತುಗಳನ್ನು ಬಳಸಿ ನಿರ್ಮಿಸಿದ್ದರಿಂದ ಮನೆ ಬೆಂಕಿಯಿಂದ ಬೂದಿಯಾಗಿ ಹೋಗಿದೆ.
Six members of a family, including two children, were charred to death when fire broke out at their house in Gudipally village in Mandamarri mandal of Mancherial district in the small hours today. Shivaiah, the owner of the house was among those who died in the blaze that erupted in his tiled-roof house at around 1.15 a.m., sources said.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm