ಬ್ರೇಕಿಂಗ್ ನ್ಯೂಸ್
20-12-22 09:48 pm HK News Desk ದೇಶ - ವಿದೇಶ
ಪಾಟ್ನಾ, ಡಿ.20 : ಕೋಟ್ಯಧಿಪತಿಗಳ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಐಟಿ ನೋಟಿಸ್ ನೀಡುವುದು ಹೊಸದೇನಲ್ಲ. ಆದರೆ ಇಲ್ಲೊಂದು ಕಡೆ ದಿನಗೂಲಿ ಕೆಲಸ ಮಾಡುವಾತನ ಮನೆಗೆ ಐಟಿ ಅಧಿಕಾರಿಗಳು ತೆರಳಿದ್ದಲ್ಲದೆ, 14 ಕೋಟಿ ರೂ. ಆದಾಯ ತೆರಿಗೆ ಬಾಕಿಯಿದೆ ಎಂದು ನೋಟಿಸ್ ನೀಡಿದ್ದಾರೆ.
ಬಿಹಾರದ ರೋಹ್ಟಸ್ ಜಿಲ್ಲೆಯ ಕರ್ಗರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ, ದಿನಗೂಲಿ ಕೆಲಸ ಮಾಡುತ್ತಿರುವ ಮನೋಜ್ ಯಾದವ್ ಮನೆಗೆ ಸೋಮವಾರ ಬಂದಿದ್ದ ಆದಾಯ ತೆರಿಗೆ ಅಧಿಕಾರಿಗಳು, 14 ಕೋಟಿ ರೂ. ರಿಟರ್ನ್ಸ್ ಬಾಕಿ ಇದೆ ಎಂದು ನೋಟಿಸ್ ನೀಡಿದ್ದಾರೆ. ಅಧಿಕಾರಿಗಳ ನೋಟಿಸ್ ನೋಡಿ, ಮನೋಜ್ ಯಾದವ್ ಕುಟುಂಬಸ್ಥರು ಅಚ್ಚರಿಗೊಂಡಿದ್ದಾರೆ. ನಮ್ಮಲ್ಲಿರುವ ಎಲ್ಲ ಆಸ್ತಿ ಮಾರಿದರೂ 14 ಕೋಟಿ ರೂ. ಆಗುವುದಿಲ್ಲ ಎಂದು ಮನೋಜ್ ಯಾದವ್ ಬೇಡಿಕೊಂಡರೂ ಐಟಿ ಅಧಿಕಾರಿಗಳು ನಂಬಲಿಲ್ಲ. ಬ್ಯಾಂಕ್ ದಾಖಲೆಗಳ ಪ್ರಕಾರ ಮನೋಜ್ ಹೆಸರಲ್ಲಿ ಕಂಪನಿಗಳು ನಡೆಯುತ್ತಿದ್ದು, ಅದರ ಪ್ರಕಾರ 14 ಕೋಟಿ ರೂ. ತೆರಿಗೆ ಬಾಕಿ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮನೋಜ್ ಈ ಮೊದಲು ದೆಹಲಿ, ಹರಿಯಾಣ ಹಾಗೂ ಪಂಜಾಬ್ ನಲ್ಲಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡಿದ್ದು, ಕೋವಿಡ್ ಲಾಕ್ಡೌನ್ ನಂತರ 2020ರಲ್ಲಿ ಬಿಹಾರಕ್ಕೆ ಮರಳಿ ದಿನಗೂಲಿ ನಡೆಸಿ ಜೀವನ ನಡೆಸುತ್ತಿದ್ದಾನೆ. ತಾನು ಹಿಂದೆ ಕೆಲಸ ಮಾಡಿದ್ದ ಕಂಪನಿಗಳವರು ನನ್ನ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ, ಕೆಲಸಕ್ಕೆ ಸೇರುವ ಸಮಯದಲ್ಲಿ ಅವರು ನನ್ನ ಪಾನ್ ಮತ್ತು ಆಧಾರ್ ಕಾರ್ಡ್ ಪ್ರತಿಗಳನ್ನು ಪಡೆದಿದ್ದರು ಎಂಬುದಾಗಿ ಮನೋಜ್ ಹೇಳಿದ್ದಾರೆ.
A daily wage labourer living in Bihar’s Rohtas district has received a notice from the Income-Tax department asking him to pay Rs 14 crore in returns. One Manoj Yadav, a labourer and resident of Kargahar village, has been served a notice seeking payment of Rs14 crore in income tax. According to the officials, his bank records showed transactions of crores of rupees being done which makes him liable for paying the income tax.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am