ಬ್ರೇಕಿಂಗ್ ನ್ಯೂಸ್
28-12-22 12:27 pm HK News Desk ದೇಶ - ವಿದೇಶ
ಮುಂಬೈ, ಡಿ.28: ಗಡಿ ವಿವಾದ ಕುರಿತು ಕರ್ನಾಟಕ ವಿಧಾನಸಭೆ ಸರ್ವಾನುಮತದ ನಿರ್ಣಯ ಕೈಗೊಂಡ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರಕಾರ, ಕರ್ನಾಟಕದ “ಮರಾಠಿ ವಿರೋಧಿ” ನಿಲುವನ್ನು ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯವನ್ನು ಸ್ವೀಕರಿಸಿದೆ. ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾತುಕತೆ ಮೂಲಕ ವಿವಾದ ಬಗೆಹರಿಸಲು ಸೂಚಿಸಿದ್ದರೂ ಮಹಾರಾಷ್ಟ್ರ ಸರ್ಕಾರ ಕೇಂದ್ರಕ್ಕೆ ಸಡ್ಡು ಹೊಡೆದು ನಿರ್ಣಯ ಸ್ವೀಕರಿಸಿದ್ದು ಹೊಸ ರೀತಿಯ ಬಿಕ್ಕಟ್ಟಿಗೆ ಕಾರಣವಾಗಿದೆ.
ಎರಡು ರಾಜ್ಯಗಳ ನಡುವೆ ಗಡಿ ವಿವಾದ ತಲೆದೋರಿದ್ದರೆ, ಉಭಯ ರಾಜ್ಯಗಳಲ್ಲೂ ಬಿಜೆಪಿ ಆಡಳಿತ ನಡೆಸುತ್ತಿರುವುದು ವಿಶೇಷ. ಮುಂದಿನ ವರ್ಷ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಡಿ ವಿಚಾರದಲ್ಲಿ ಸೂಚನೆ ನಡುವೆಯೂ ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ವಿರುದ್ಧ ನಿರ್ಣಯ ಕೈಗೊಂಡಿದ್ದು ಸಮಸ್ಯೆ ಬಿಗಡಾಯಿಸಲು ಕಾರಣವಾಗಿದೆ.
ಮರಾಠಿ ಭಾಷೆ ಮಾತನಾಡುವ 865 ಗ್ರಾಮಗಳು ಹಾಗೂ ಈ ಗ್ರಾಮಗಳ ಎಲ್ಲಾ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆಗೊಳಿಸಲಿದ್ದೇವೆ. ಇದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ನಲ್ಲಿಯೂ ಮಹಾರಾಷ್ಟ್ರ ಸರ್ಕಾರ ಕಾನೂನು ಸಮರಕ್ಕೆ ಸಿದ್ಧವಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ನಿರ್ಣಯದಲ್ಲಿ ಉಲ್ಲೇಖಿಸಿದೆ. ಕರ್ನಾಟಕದ ಗಡಿಭಾಗದ ಬೆಳಗಾವಿ, ಕಾರವಾರ, ಬೀದರ್, ನಿಪ್ಪಾಣಿ, ಭಾಲ್ಕಿ ತಾಲೂಕಿನ 865 ಗ್ರಾಮಗಳ ಪ್ರತಿ ಇಂಚು ಜಾಗವೂ ಮಹಾರಾಷ್ಟ್ರದ ಭಾಗವಾಗಿರಲಿದೆ ಎಂದು ನಿರ್ಣಯದಲ್ಲಿ ಮಹಾರಾಷ್ಟ್ರ ಸರ್ಕಾರ ನಿರ್ಣಯ ಅಂಗೀಕರಿಸಿದ್ದು ಗಡಿ ವಿವಾದಕ್ಕೆ ಬೆಂಕಿ ಹಚ್ಚಿದಂತಾಗಿದೆ.
ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಖಂಡಿಸಿದ್ದು ಈ ಬಗ್ಗೆ ಕೇಂದ್ರಕ್ಕೆ ದೂರು ಒಯ್ಯಲು ನಿರ್ಧರಿಸಿದ್ದಾರೆ.
The Maharashtra resolution stated there are 865 Marathi-speaking villages, and "every inch of these villages will be brought into Maharashtra". Whatever will be required for the same in Supreme Court, the Maharashtra government will do so, it added. The resolution asserts that 865 villages, including "every inch of Belgaum, Karwar, Bidar, Nipani, Bhalki" will be part of Maharashtra.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am