ಬ್ರೇಕಿಂಗ್ ನ್ಯೂಸ್
29-12-22 04:03 pm HK News Desk ದೇಶ - ವಿದೇಶ
ತಿರುವನಂತಪುರಂ, ಡಿ 29: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಚು ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ಗುರುವಾರ ಕೇರಳದ 56 ಸ್ಥಳಗಳಲ್ಲಿ ದಾಳಿ ಮಾಡ ಶೋಧ ನಡೆಸಿದೆ.
ನಿಷೇಧಿತ ಸಂಘಟನೆ PFI ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಹಲವರ ನಿವಾಸಗಳಲ್ಲಿ ಶೋಧ ಕಾರ್ಯ ನಡೆದಿದೆ. ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ, ಅಲಪ್ಪಿ, ಪಾಲಕ್ಕಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲೂ ಎನ್ಐಎ ದಾಳಿ ನಡೆಸಿದೆ. ದಾಳಿ ವೇಳೆ ಎನ್ಐಎಗೆ ಕೇರಳ ರಾಜ್ಯ ಪೊಲೀಸರು ಕೂಡಾ ಸೂಕ್ತ ಸಹಕಾರ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಇದೇ ವರ್ಷ ಸೆಪ್ಟೆಂಬರ್ನಲ್ಲಿ ಗೃಹ ಸಚಿವಾಲಯವು ಕಾನೂನುಬಾಹಿರ ಚಟುವಟಿಕೆಗಳ ಕಾಯಿದೆ 1967 ಅಡಿಯಲ್ಲಿ ಐದು ವರ್ಷಗಳ ಅವಧಿಗೆ ನಿಷೇಧಕ್ಕೊಳಪಟ್ಟ ಪಿಎಫ್ಐ, ಸಂಘಟನೆಯ ಕಾರ್ಯಕರ್ತರೊಂದಿಗೆ ಸಂಪರ್ಕ ಹೊಂದಿರುವ ಹಲವಾರು ಶಂಕಿತರ ಸ್ಥಳಗಳಲ್ಲಿ ಮತ್ತು ಕಚೇರಿಗಳಲ್ಲಿ ಇನ್ನೂ ಹುಡುಕಾಟಗಳು ನಡೆಯುತ್ತಿವೆ.
ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಯನ್ನು ಕದಡುವ ಮತ್ತು ಸಾರ್ವಜನಿಕ ಮನಸ್ಸಿನಲ್ಲಿ ಭಯೋತ್ಪಾದನೆ ಸೃಷ್ಟಿಸುವ ಏಕೈಕ ಉದ್ದೇಶಕ್ಕಾಗಿ ಪಿಎಫ್ಐ ಕಾರ್ಯಕರ್ತರು ಅಪರಾಧ ಚಟುವಟಿಕೆಗಳು ಮತ್ತು ಕ್ರೂರ ಕೊಲೆಗಳನ್ನು ನಡೆಸುತ್ತಿದ್ದಾರೆ ಎಂದು ಗೃಹ ಸಚಿವಾಲಯ ಈ ಹಿಂದೆ ಹೇಳಿತ್ತು. ಗೃಹ ಸಚಿವಾಲಯ ಜಾಗತಿಕ ಭಯೋತ್ಪಾದಕ ಗುಂಪುಗಳೊಂದಿಗೆ ಪಿಎಫ್ಐನ ಅಂತರಾಷ್ಟ್ರೀಯ ಸಂಪರ್ಕಗಳನ್ನು ಸಹ ಉಲ್ಲೇಖಿಸಿದ್ದು, ಸಂಘಟನೆಯ ಕೆಲವು ಕಾರ್ಯಕರ್ತರು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾಗೆ ಸೇರಿಕೊಂಡಿದ್ದಾರೆ ಮತ್ತು ಸಿರಿಯಾ, ಇರಾಕ್ ಮತ್ತು ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿಸಿದೆ.
ಐಸಿಸ್ಗೆ ಸಂಬಂಧಿಸಿದ ಈ ಕೆಲವು ಪಿಎಫ್ಐ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ ಮತ್ತು ಕೆಲವರನ್ನು ರಾಜ್ಯ ಪೊಲೀಸರು ಮತ್ತು ಕೇಂದ್ರೀಯ ಏಜೆನ್ಸಿಗಳು ಬಂಧಿಸಿದ್ದಾರೆ. ಪಿಎಫ್ಐ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಜಮಾತ್-ಉಲ್-ಮುಯಾಹಿದೀನ್ ಬಾಂಗ್ಲಾದೇಶದೊಂದಿಗೆ (ಜೆಎಂಬಿ) ಸಂಪರ್ಕ ಹೊಂದಿದೆ ಎನ್ನಲಾಗಿದೆ. ಈ ವರ್ಷ ಇಲ್ಲಿಯವರೆಗೆ ಪಿಎಫ್ಐ ಕಾರ್ಯಕರ್ತರ ವಿರುದ್ಧ ಎನ್ಐಎ ದೇಶಾದ್ಯಂತ 150ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿತ್ತು.
ಕೇರಳದಲ್ಲಿ ಸಕ್ರಿಯವಾಗಿರುವ ಪಿಎಫ್ಐ ಸಂಘಟನೆ ಸದಸ್ಯರು ವಿವಿಧ ಧರ್ಮಗಳ ಜನತೆ ನಡುವೆ ದ್ವೇಷ ಭಾವನೆ ಮೂಡಿಸುವ ಹಾಗೂ ಧಾರ್ಮಿಕ ಭಾವೈಕ್ಯತೆ ಕದಡುವ ಕೆಲಸಗಳನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅಂತಿಮವಾಗಿ ದೇಶ ವಿರೋಧಿ ಕೃತ್ಯಗಳನ್ನು ಎಸಗುವ ಮೂಲಕ ಭಾರತದ ಅಖಂಡತೆಗೆ ಅಪಾಯಕಾರಿಯಾಗಿ ಪರಿಣಮಿಸಿದ್ದರು ಎಂದು ಮಾಹಿತಿ ಲಭ್ಯವಾಗಿದೆ.
The National Investigation Agency (NIA) on Thursday carried out searches at 56 locations in Kerala in the Popular Front of India (PFI) conspiracy case, sources said. The searches are still going on at the premises and offices of several suspects having links with cadres of PFI, an organisation banned by the Ministry of Home Affairs in September this year with its associates, and affiliates for a period of five years under Unlawful Activities (Prevention) Act, 1967 by declaring it as an unlawful association.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am