ಬ್ರೇಕಿಂಗ್ ನ್ಯೂಸ್
07-01-23 08:59 pm HK News Desk ದೇಶ - ವಿದೇಶ
ಕಾಸರಗೋಡು, ಜ.7 : ಬಿರಿಯಾನಿ ತಿಂದು ಅಸ್ವಸ್ಥಳಾಗಿದ್ದ ಉದುಮ ಮೂಲದ ಯುವತಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಪೆರುಂಬಳ ಬೇನೂರು ನಿವಾಸಿ ಅಂಜುಶ್ರೀ ಪಾರ್ವತಿ (19) ಮೃತ ಯುವತಿ.
ಆರು ದಿನಗಳ ಹಿಂದೆ ಉದುಮದ ಹೋಟೆಲ್ ಒಂದರಿಂದ ಆನ್ಲೈನ್ ಮೂಲಕ ಕುಜಿಮಂತಿ ಹೆಸರಿನ ಚಿಕನ್ ಬಿರಿಯಾನಿ ತರಿಸಿ ಅಂಜುಶ್ರೀ ಸೇವಿಸಿದ್ದಳು. ಇದಾದ ಬಳಿಕ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಕಾಸರಗೋಡಿನಲ್ಲಿ ಮೊದಲು ಚಿಕಿತ್ಸೆ ಪಡೆದು ಬಳಿಕ ಪರಿಸ್ಥಿತಿ ಗಂಭೀರವಾದ ಬೆನ್ನಲ್ಲೇ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಪುಡ್ ಪಾಯಿಸನ್ನಿಂದ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಹೊಸ ವರ್ಷದ ಹಿನ್ನೆಲೆಯಲ್ಲಿ ಬಿರಿಯಾನಿ ತರಿಸಿ ಊಟ ಮಾಡಿದ್ದರು. ಅಂಜು ಜೊತೆಗೆ ಊಟ ಮಾಡಿದ ಸ್ನೇಹಿತರಿಗೂ ಫುಡ್ ಪಾಯಿಸನ್ ಆಗಿದ್ದು, ಅವರು ಕೂಡ ಅಸ್ವಸ್ಥರಾಗಿದ್ದರು. ಆದರೆ ಅಂಜುಶ್ರೀ ಆರೋಗ್ಯ ಮಾತ್ರ ಹೆಚ್ಚು ಗಂಭೀರವಾಗಿತ್ತು. ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಅಂಜುಶ್ರೀ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದು, ಮೇಲ್ಪರಂಬ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಕಾಸರಗೋಡು ಮತ್ತು ಕಣ್ಣೂರಿನ ಅಧಿಕಾರಿಗಳು ಹೋಟೆಲ್ಗೆ ಭೇಟಿ ತನಿಖೆ ನಡೆಸಿದ್ದಾರೆ. ಅಂಜುಶ್ರೀ ಮಂಜೇಶ್ವರದ ಗೋವಿಂದ ಪೈ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದಳು.
ಕಳೆದ ಒಂದು ವಾರದ ಅಂತರದಲ್ಲಿ ಇದು ಎರಡನೇ ಫುಡ್ ಪಾಯಿಸನ್ ಸಾವಾಗಿದೆ. ಕೊಟ್ಟಾಯಂ ಮೂಲದ ರಶ್ಮಿ ಅವರು 'ಅಲ್ಫಾಹಮ್' ಸೇವಿಸಿ ಸೋಮವಾರ ಮೃತಪಟ್ಟಿದ್ದರು. ಅಲ್ಲದೆ ಇತ್ತೀಚೆಗೆ ಕಾಸರಗೋಡಿನಲ್ಲಿ ದೇವಾನಂದ ಎಂಬ ಬಾಲಕಿ ಶವರ್ಮಾ ತಿಂದು ಸಾವನ್ನಪ್ಪಿದ್ದಳು.
In another suspected case of food poisoning, a 20-year old woman died on Saturday after allegedly consuming Kuzhimanthi, a biryani dish from a local hotel. Police said Anju Sreeparvathy from Perumbala near here, had consumed Kuzhimanthi which she purchased online from a restaurant named Romansia at Kasaragod on December 31 and was undergoing treatment since then.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm