ಬ್ರೇಕಿಂಗ್ ನ್ಯೂಸ್
09-01-23 12:43 pm HK News Desk ದೇಶ - ವಿದೇಶ
ಡಾಕರ್, ಜ. 9: ಭೀಕರ ಬಸ್ ಅಪಘಾತದಲ್ಲಿ 40 ಮಂದಿ ದುರ್ಮರಣಕ್ಕೀಡಾಗಿದ್ದು, ಹಲವರು ಗಾಯಗೊಂಡಿರುವ ದಾರುಣ ಘಟನೆ ಕೇಂದ್ರ ಸೆನೆಗಲ್ನಲ್ಲಿ ನಡೆದಿದೆ.
ಸಾರ್ವಜನಿಕ ಬಸ್ವೊಂದರ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಕನಿಷ್ಠ 78 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಮಾಹಿತಿ ನೀಡಿದ್ದಾರೆ.
ಕಾಫ್ರಿನ್ ಪ್ರದೇಶದ ಗ್ನಿವಿ ಗ್ರಾಮದಲ್ಲಿ ಮುಂಜಾನೆ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಅಧ್ಯಕ್ಷ ಮ್ಯಾಕಿ ಸಾಲ್ ಟ್ವೀಟ್ನಲ್ಲಿ ತಿಳಿಸಿದ್ದಾರೆ. “ಇಂದು ಗ್ನಿಬಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 40 ಜನರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಈ ದುರಂತ ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ಅವರಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗುವುದು” ಎಂದು ತಿಳಿಸಿದ್ದಾರೆ.
ಸೋಮವಾರದಿಂದ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದ ಅವರು, ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಚರ್ಚಿಸಲು ಸಭೆ ನಡೆಸುವುದಾಗಿ ಮ್ಯಾಕಿ ಸಾಲ್ ಹೇಳಿದ್ದಾರೆ. ಕಳಪೆ ಗುಣಮಟ್ಟದ ರಸ್ತೆಗಳು, ಚಾಲಕರು ನಿಯಮಗಳನ್ನು ಪಾಲಿಸದ ಕಾರಣ ಪಶ್ಚಿಮ ಆಫ್ರಿಕಾದ ರಾಷ್ಟ್ರದಲ್ಲಿ ಮೋಟಾರ್ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ.
2017ರಲ್ಲಿ, ಎರಡು ಬಸ್ಗಳು ಅಪಘಾತಕ್ಕೀಡಾಗಿ ಕನಿಷ್ಠ 25 ಜನರು ಸಾವನ್ನಪ್ಪಿದ್ದರು. ಅವರಲ್ಲಿ ಅನೇಕರು ತೀರ್ಥಯಾತ್ರೆಗಾಗಿ ಕೇಂದ್ರ ಪಟ್ಟಣವಾದ ತೌಬಾ ಕಡೆಗೆ ಹೋಗುತ್ತಿದ್ದರು.
At least 40 people were killed and dozens injured in a bus crash in central Senegal, the country’s president said Sunday. President Macky Sall tweeted that the collision happened in Gnivy village, in the Kaffrine region, at about 3:30 a.m. “I am deeply saddened by the tragic road accident today in Gniby causing 40 deaths and many serious injuries. I extend my heartfelt condolences to the families of the victims and wish a speedy recovery to the injured,” said Sall.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am