ಬ್ರೇಕಿಂಗ್ ನ್ಯೂಸ್
28-01-23 10:20 pm HK News Desk ದೇಶ - ವಿದೇಶ
ಮುಂಬೈ, ಜ.28: ಮುಂದಿನ ಚುನಾವಣೆಯ ಬಳಿಕ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವುದಿಲ್ಲ. ಕರ್ನಾಟಕ ಬಿಜೆಪಿಯಿಂದ ಕೈತಪ್ಪಲಿದೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಬಿಜೆಪಿ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರೋದಿಲ್ಲ ಅನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ನಾವು ವಿರೋಧಿ ಪಕ್ಷಗಳನ್ನೆಲ್ಲ ಒಟ್ಟು ಸೇರಿಸಲು ಪ್ರಯತ್ನ ಪಡುತ್ತಿದ್ದೇವೆ. ಲೋಕಸಭೆ ಚುನಾವಣೆಗೂ ಮೊದಲು ಒಕ್ಕೂಟವನ್ನು ಬಲಗೊಳಿಸುತ್ತೇವೆ. ಆದರೆ ಎಲ್ಲ ರಾಜ್ಯಗಳಲ್ಲೂ ಆಯಾ ಭಾಗದಲ್ಲಿನ ವಿಚಾರಗಳೇ ಚುನಾವಣೆಗೆ ಮುಖ್ಯವಾಗುತ್ತದೆ. ಅದನ್ನು ಮತವಾಗಿ ಪರಿವರ್ತನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಇತ್ತೀಚಿನ ಕೆಲವು ಸಮೀಕ್ಷೆಗಳಲ್ಲಿ ಸಾರ್ವಜನಿಕ ಅಭಿಪ್ರಾಯ ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಜನಾಭಿಪ್ರಾಯ ಬದಲಾಗುತ್ತಿರುವುದನ್ನು ಕಂಡಿದ್ದೇವೆ. ಜನರು ಬಹಿರಂಗವಾಗಿಯೇ ಬಿಜೆಪಿ ವಿರುದ್ಧ ಅಭಿಪ್ರಾಯ ಹೇಳುತ್ತಿದ್ದಾರೆ. ಈ ಅಭಿಪ್ರಾಯಗಳೇ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ನೀಡಲಿದೆ. ಜನರು ಧಾರ್ಮಿಕ ವಿಚಾರಗಳಿಗೆ ಹೆಚ್ಚು ಕಾಲ ಮತ ಕೊಡಲ್ಲ. ಜನರನ್ನು ಮತದ ಆಧಾರದಲ್ಲಿ ಒಡೆಯುವುದು ಭವಿಷ್ಯದಲ್ಲಿ ವರ್ಕೌಟ್ ಆಗಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ.
ಭಾರತ್ ಜೋಡೊ ಯಾತ್ರೆಯಿಂದ ರಾಹುಲ್ ಗಾಂಧಿ ವ್ಯಕ್ತಿಗತ ಲಾಭ ಆಗಿದೆಯೇ ಎಂಬ ಪ್ರಶ್ನೆಗೆ, ಜನಸಾಮಾನ್ಯರಿಂದಲೂ ರಾಹುಲ್ ಪರವಾಗಿ ಸ್ಪಂದನೆ ವ್ಯಕ್ತವಾಗುತ್ತಿದೆ. ರಾಹುಲ್ ಬಗ್ಗೆ ವ್ಯಕ್ತಿತ್ವ ಹನನದ ಮಧ್ಯೆಯೂ ದೇಶಾದ್ಯಂತ ಬೆಂಬಲ ವ್ಯಕ್ತವಾಗುತ್ತಿರುವುದು ಹೊಸ ಬೆಳವಣಿಗೆ ಎಂದರು. ಗುಜರಾತ್ ದಂಗೆಯ ಕುರಿತ ಬಿಬಿಸಿ ಡಾಕ್ಯುಮೆಂಟರಿ ನಿಷೇಧಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಟೀಕಿಸಿದ ಪವಾರ್, ಅದು ಪ್ರಜಾಪ್ರಭುತ್ವದ ಕೊಲೆ. ಅದನ್ನು ನಿರಾಕರಿಸಲಾಗದು ಎಂದಿದ್ದಾರೆ.
Karnataka is slipping out of the ruling BJP’s control and may see a change of power after the next Assembly elections, Nationalist Congress Party (NCP) President Sharad Pawar said here on Saturday. “There are clear indications that the BJP will not retain power in Karnataka after the upcoming state electionsa We are making attempts to unite the Opposition parties and forge a united front, but all states have different local issues which need to be tackled," said Pawar.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am