ಬ್ರೇಕಿಂಗ್ ನ್ಯೂಸ್
05-02-23 02:16 pm HK News Desk ದೇಶ - ವಿದೇಶ
ನವದೆಹಲಿ, ಫೆ.5 : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ (70) ದುಬೈನ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಅನಾರೋಗ್ಯದಲ್ಲಿದ್ದ ಮುಷರಫ್ ಅವರನ್ನು ಯುಎಇಯ ಅಮೆರಿಕನ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಗಂಭೀರ ಅನಾರೋಗ್ಯದ ಸಮಸ್ಯೆಯಿಂದಾಗಿ ಅವರನ್ನು ಒಂದೆರಡು ವಾರಗಳ ಕಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಸ್ಥಳೀಯ ಮಾಧ್ಯಮದ ವರದಿಗಳು ತಿಳಿಸಿವೆ. 1999ರಲ್ಲಿ ಮಿಲಿಟರಿ ದಂಗೆಯ ನಂತರ ಮುಷರಫ್ ಪಾಕಿಸ್ತಾನದ ಹತ್ತನೇ ಅಧ್ಯಕ್ಷರಾಗಿದ್ದರು. 1998 ರಿಂದ 2001ರ ವರೆಗೆ 10ನೇ ಅಧ್ಯಕ್ಷರಾಗಿ ಮತ್ತು 2008ರ ವರೆಗೂ ಆಡಳಿತ ನಡೆಸಿದ್ದರು.
ಆನಂತರ, ಮುಷರಫ್ ದೇಶದಲ್ಲಿ ತುರ್ತು ಸ್ಥಿತಿ ಹೇರಿದ್ದರು. ಇದನ್ನು ಖಂಡಿಸಿ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಲಾಗಿತ್ತು. 2014ರಲ್ಲಿ ಮುಷರಫ್ ವಿರುದ್ಧ ದೋಷಾರೋಪ ಸಲ್ಲಿಸಿದ್ದು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಅವರಿಗೆ 2019ರಲ್ಲಿಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ನಡುವೆ, 2016ರಲ್ಲಿ ಮುಷರಫ್ ಅನಾರೋಗ್ಯಕ್ಕೆ ತುತ್ತಾಗಿದ್ದು ಮತ್ತು ದೇಶದ ಜನ ದಂಗೆ ಎದ್ದಿದ್ದರಿಂದ ಕುಟುಂಬ ಸಹಿತ ದುಬೈಗೆ ಹಾರಿದ್ದರು. ಅಲ್ಲಿನ ಆಸ್ಪತ್ರೆಯಲ್ಲಿದ್ದ ಮುಷರಫ್ ಸುದೀರ್ಘ ಕಾಲದ ಅನಾರೋಗ್ಯ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಸಾವು ಕಂಡಿದ್ದಾರೆ.
Former President of Pakistan, General Pervez Musharraf (Retd), died at a Dubai hospital after suffering from a prolonged illness, Pakistan's Geo News reported on Sunday. The former military ruler was undergoing treatment for an ailment at American Hospital Dubai, the report said.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm